ಬೀದರ್‌ | ಕೆ.ವಿ.ನಾರಾಯಣ ಅಗಲಿಕೆಯಿಂದ ಕನ್ನಡ ಸಾಂಸ್ಕೃತಿಕ ಲೋಕದಲ್ಲಿ ಮೌನ

Date:

ಹಿರಿಯ ವಿಮರ್ಶಕ, ಭಾಷಾತಜ್ಞ ಹಾಗೂ ಸಂಸ್ಕೃತಿ ಚಿಂತಕರಾದ ಪ್ರೊ. ಕೆ.ವಿ.ನಾರಾಯಣ ಅವರು ತಮ್ಮ ಬರಹ ಮತ್ತು ಆಲೋಚನೆಗಳ ಮೂಲಕ ಕನ್ನಡದ ಬೌದ್ಧಿಕ ಲೋಕಕ್ಕೆ ಹೊಸ ದಿಕ್ಕು ತೋರಿದವರು. ಅವರ ಅಗಲಿಕೆಯಿಂದ ಕನ್ನಡ ಸಾಂಸ್ಕೃತಿಕ ಲೋಕದ ಪ್ರಖರ ಧ್ವನಿಯೊಂದು ಮೌನವಾದಂತಾಗಿದೆ ಎಂದು ಶ್ರೀ ಬಸವೇಶ್ವರ ಪದವಿ ಕಾಲೇಜಿನ ಪ್ರಾಚಾರ್ಯ ಡಾ.ಭೀಮಾಶಂಕರ ಬಿರಾದಾರ ಹೇಳಿದರು.

- Advertisement -

ನಗರದ ಶ್ರೀ ಬಸವೇಶ್ವರ ಪದವಿ ಪೂರ್ವ ಕಾಲೇಜು, ಶ್ರೀ ಬಸವೇಶ್ವರ ಪದವಿ ಕಾಲೇಜು, ಸ್ನಾತಕೋತ್ತರ ಕಾಲೇಜು ಹಾಗೂ ಅಕ್ಕಮಹಾದೇವಿ ಮಹಿಳಾ ಪದವಿ ಕಾಲೇಜುಗಳ ಸಹಯೋಗದಲ್ಲಿ ಶುಕ್ರವಾರ ಅಗಲಿದ ಕನ್ನಡದ ಹಿರಿಯ ಚಿಂತಕ ಪ್ರೊ.ಕೆ.ವಿ.ನಾರಾಯಣ ಅವರಿಗೆ ಆಯೋಜಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೊಪ್ಪಳ | 8 ತಿಂಗಳಿನಿಂದ ಕಿಟ್‌ ವಿತರಣೆಯಿಲ್ಲ, ಮಲಗಲು...

ಕೊಪ್ಪಳ ನಗರದ ಡಾ.ಬಿ ಆರ್‌ ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ ನಂತರದ ಬಾಲಕರ ವೃತ್ತಿಪರ ವಸತಿ (ಪರಿಶಿಷ್ಟ ಜಾತಿ) ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು...

ನುಡಿನಮನ | ಕೆವಿಎನ್: ಕನ್ನಡದ ಘನವಿವೇಕ

ಪ್ರಭುತ್ವದ ಭಾಷೆಗಳಾದ ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಗಳು ವರ್ತಿಸುವ ಭಿನ್ನ ಬಗೆಗಳನ್ನು ಕೆವಿಎನ್ ಅವರು ವರ್ಗ ನೆಲೆಯ ಹಿನ್ನೆಲೆಯಲ್ಲಿ ನೋಡುತ್ತ ನೀಡುವ ಒಳನೋಟಗಳು ಭಾಷೆ ಮತ್ತು ಸಮಾಜದ ಸಂಬಂಧವನ್ನು ಅರ್ಥ ಮಾಡಿಕೊಳ್ಳಲು ಬೆಳಕಿಂಡಿಯಾಗಿವೆ....

ಬೌಲರ್‌ಗಳ ಎದೆಯಲ್ಲಿ ನಡುಕ ಹುಟ್ಟಿಸುತ್ತಿದ್ದ ‘ಗ್ಲೆನ್ ಮ್ಯಾಕ್ಸ್‌ವೆಲ್’ ಅಂತಾರಾಷ್ಟ್ರೀಯ...

"ಆಸ್ಟ್ರೇಲಿಯಾ ತಂಡದ ಬ್ಯಾಗಿ ಗ್ರೀನ್ ಮತ್ತು ಹಳದಿ ಜೆರ್ಸಿ ತೊಟ್ಟು ಕಣಕ್ಕಿಳಿಯುವುದು ನನ್ನ ಬದುಕಿನ ಅತ್ಯುನ್ನತ ಹೆಮ್ಮೆ. ನನ್ನ ದೇಶಕ್ಕಾಗಿ ಮೈದಾನದಲ್ಲಿ ನನ್ನ ಸರ್ವಸ್ವವನ್ನೂ ಧಾರೆಯೆರೆದಿದ್ದೇನೆ. ನನ್ನ ಬ್ಯಾಟಿಂಗ್‌ ಶೈಲಿ ಮತ್ತು ಹೊಡೆತಗಳು...

ಕೆ.ವಿ.ನಾರಾಯಣ ಅವರು ತಮ್ಮ ಅಪಾರ ವಿದ್ವತ್ತು ಹಾಗೂ ಒಳನೋಟಗಳ ಮೂಲಕ ಕನ್ನಡದ ಜ್ಞಾನ ಪರಂಪರೆಯನ್ನು ಕಟ್ಟಿಕೊಟ್ಟ ಮಹಾನ್ ಚಿಂತಕರಾಗಿದ್ದರು. ಭಾಷೆಯ ಮೂಲಕ ಬದುಕು, ಸಂಸ್ಕೃತಿ ಮತ್ತು ಲೋಕವನ್ನು ವಿಶ್ಲೇಷಿಸಿದ ಅವರು ಕನ್ನಡ ಸಾಹಿತ್ಯದ ಬೇರು, ಕಾಂಡ ಹಾಗೂ ಚಿಗುರುಗಳ ಕುರಿತು ಮಹತ್ವದ ಸಂಕಥನ ನಡೆಸಿದ್ದಾರೆ. ಸಾರ್ತ್ರೆಯ ‘ಬುದ್ಧಿಜೀವಿಗಳ ಬಿಕ್ಕಟ್ಟು’ ಕೃತಿಯ ಮೂಲಕ ಕನ್ನಡದ ಬೌದ್ಧಿಕ ವಲಯವನ್ನು ಹೊಸ ಚಿಂತನೆಗೆ ಹಚ್ಚಿದ್ದಾರೆ ಎಂದರು.

WhatsApp Image 2026 10 10 at 6.59.42 PM 18

ಕುಪ್ಪಳಿ ವಿಚಾರ ಕಮ್ಮಟದಲ್ಲಿ ಹಿರಿಯರು ಮತ್ತು ಕಿರಿಯರನ್ನು ಒಟ್ಟಿಗೆ ಕರೆದೊಯ್ದು ಅರಿವಿನ ದಾರಿ ತೋರಿದ ಅವರ ಕಾರ್ಯ ಅನನ್ಯವಾದುದು. ಯಾವುದೇ ಹಮ್ಮು-ಬಿಮ್ಮುಗಳಿಲ್ಲದ ಸರಳ ವ್ಯಕ್ತಿತ್ವದ ಶ್ರೇಷ್ಠ ಚೇತನವಾಗಿದ್ದ ಕೆವಿಎನ್ ಅವರೊಂದಿಗಿನ ಒಡನಾಟ ಸ್ಮರಣೀಯ. ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಜಗತ್ತಿನಲ್ಲಿ ತುಂಬಲಾರದ ಶೂನ್ಯ ಆವರಿಸಿದೆ ಎಂದು ಸ್ಮರಿಸಿದರು.

ಶ್ರೀ ಬಸವೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ರುದ್ರಮಣಿ ಮಠಪತಿ ಮಾತನಾಡಿ, ತಮ್ಮ ವಿದ್ವತ್ಪೂರ್ಣ ಲೇಖನಗಳು ಹಾಗೂ ಹೊಸ ದೃಷ್ಟಿಕೋನದ ಮೂಲಕ ಕನ್ನಡ ವಿಶ್ವವಿದ್ಯಾಲಯದ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ ಚೇತನ ಕೆ.ವಿ. ನಾರಾಯಣ. ಬರಹ ಮತ್ತು ಭಾಷಾವಿಜ್ಞಾನದ ಮೂಲಕ ನಾಡಿನ ಸಾಹಿತ್ಯ ಲೋಕದ ಹಿರಿಮೆಯನ್ನು ಹೆಚ್ಚಿಸಿದ ಶ್ರೇಷ್ಠ ಭಾಷಾವಿಜ್ಞಾನಿ ಅವರಾಗಿದ್ದರು. ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕಕ್ಕೆ ಅನಾಥ ಪ್ರಜ್ಞೆ ಉಂಟಾಗಿದೆ ಎಂದು ಹೇಳಿದರು.

WhatsApp Image 2026 10 10 at 7.46.08 PM 35

ಅಕ್ಕಮಹಾದೇವಿ ಮಹಿಳಾ ಪದವಿ ಕಾಲೇಜಿನ ಪ್ರಾಚಾರ್ಯೆ ಮಾಯಾ ಮುರಾಳೆ, ಶ್ರೀ ಬಸವೇಶ್ವರ ಸ್ನಾತಕೋತ್ತರ ಕಾಲೇಜಿನ ಪ್ರಾಚಾರ್ಯೆ ಡಾ. ಶಾಂತಲಾ ಪಾಟೀಲ್, ನಿವೃತ್ತ ಶಿಕ್ಷಕಿ ಲಕ್ಷ್ಮೀಬಾಯಿ ಪಾಟೀಲ, ಕನ್ಯಾಕುಮಾರಿ ಯನಗುಂದೆ, ಪ್ರಭುಲಿಂಗ ಕಲೋಜಿ, ಡಾ.ಬಸವರಾಜ ಖಂಡಾಳೆ, ಶ್ರೀನಿವಾಸ ಉಮಾಪುರೆ, ರೋಷನ್ ಬಿ., ವಿವೇಕಾನಂದ ಶಿಂಧೆ, ನಾಗರಾಜ ನಾಸೆ, ಪ್ರವೀಣ ಬಿರಾದಾರ, ಎಂ.ಡಿ. ಇರ್ಫಾನ್, ಡಾ. ಭುವನೇಶ್ವರಿ ಶ್ರೀವಾತ್ಸವ್, ಸೌಮ್ಯಾ ಜೋಶಿ, ಪೂಜಾ ಗಂಗು, ಸಂಗೀತಾ ಮಹಾಗಾವೆ, ಜಗದೇವಿ ಜವಳಗೆ, ಚೆನ್ನಬಸಪ್ಪ ಗೌರ, ಪ್ರಿಯಾ ಚೌಹಾನ್, ನಾಗವೇಣಿ ಬಿರಾದಾರ, ಶೀತಲ್ ರೆಡ್ಡಿ, ಸಚಿನ್ ಬಿಡುವೆ, ದಶರಥ ಹಾಗೂ ಯೋಗೇಶ್ ಕ್ಷೀರಸಾಗರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ಬಸ್ ಪ್ರಯಾಣ ದರ ಏರಿಕೆ ಹಿಂಪಡೆಯಲು ಕರವೇ ಆಗ್ರಹ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಗನಕ್ಕೇರಿದ ಅಗತ್ಯ ವಸ್ತುಗಳ ಬೆಲೆ, ಜನ ಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ: ಎಸ್.ಡಿ.ಪಿ.ಐ ಕಿಡಿ

ಇಂದು ನಾವು ದೇಶ ಮತ್ತು ರಾಜ್ಯದಲ್ಲಿ ಆಳುತ್ತಿರುವ ಸರ್ಕಾರಗಳ ಜನವಿರೋಧಿ ಮತ್ತು...

ನುಡಿನಮನ | ಕೆವಿಎನ್: ಕನ್ನಡದ ಘನವಿವೇಕ

ಪ್ರಭುತ್ವದ ಭಾಷೆಗಳಾದ ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಗಳು ವರ್ತಿಸುವ ಭಿನ್ನ ಬಗೆಗಳನ್ನು...

ದಕ್ಷಿಣ ಕನ್ನಡ | ಜಿಲ್ಲಾ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ರಚನೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ನವೆಂಬರ್ 18ರಂದು ಮಂಗಳೂರಿನ ಪುರಭವನದಲ್ಲಿ ದ.ಕ...

ಬೌಲರ್‌ಗಳ ಎದೆಯಲ್ಲಿ ನಡುಕ ಹುಟ್ಟಿಸುತ್ತಿದ್ದ ‘ಗ್ಲೆನ್ ಮ್ಯಾಕ್ಸ್‌ವೆಲ್’ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ

"ಆಸ್ಟ್ರೇಲಿಯಾ ತಂಡದ ಬ್ಯಾಗಿ ಗ್ರೀನ್ ಮತ್ತು ಹಳದಿ ಜೆರ್ಸಿ ತೊಟ್ಟು ಕಣಕ್ಕಿಳಿಯುವುದು...