ಬೀದರ್‌ | ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ನೇತ್ರತ್ವದಲ್ಲಿ ಎಸ್‌ಐಆರ್ ಜಾಗೃತಿ ಜಾಥಾ

Date:

ರಾಜ್ಯ ಮುಖ್ಯ ಚುನಾವಣಾಧಿಕಾರಿ ಎ.ಅನ್ಬುಕುಮಾರ ಅವರ ನೇತ್ರತ್ವದಲ್ಲಿ ಬೀದರ ನಗರದ ಕೋಟೆಯಲ್ಲಿ ಆವರಣದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕಿಯೆ ಕುರಿತು ಜಾಗೃತಿ ಬೈಕ್ ರ‍್ಯಾಲಿ ನಡೆಯಿತು.

- Advertisement -

ಬೀದರ ಕೋಟೆ ಆವರಣದಲ್ಲಿ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಎ.ಅನ್ಬುಕುಮಾರ ಅವರು ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಬಳಿಕ ಜಾಥವು ಗವಾನ್‌ ಚೌಕ್‌, ಚೌಬಾರಾ, ಬಸವೇಶ್ವರ ವೃತ್ತ, ಬೊಮ್ಮಗೊಂಡೇಶ್ವರ ವೃತ್ತ, ಗುಂಪಾ ಮಾರ್ಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಜರುಗಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ನಂತರ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅವರು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳ, ಸ್ವೀಪ್ ನೋಡಲ್ ಅಧಿಕಾರಿಗಳ ಹಾಗೂ ಮತದಾರರ ನೋಂದಣಾಧಿಕಾರಿಗಳ ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಸಭೆ ನಡೆಸಿ ಎನುಮರೇಶನ್ ಅರ್ಜಿ ವಿತರಣೆ, ಡಿಜಿಟಿಲೀಕರಣ ಕುರಿತು ಚರ್ಚಿಸಿ ಮಾಹಿತಿ ಪಡೆದರು. ಎಸ್‌ಐಆರ್ ಕಾರ್ಯಗಳನ್ನು ಪೂರ್ಣಗೊಳಿಸಲು ಕೇವಲ 15 ದಿನಗಳು ಬಾಕಿ ಇರುವುದರಿಂದ ಶೀಘ್ರವೇ ಶೇ 100ರಷ್ಟು ಪ್ರಗತಿ ಸಾಧಿಸುವಂತೆ ಎಲ್ಲ ಅಧಿಕಾರಿಗಳಿಗೆ ಸೂಚಿಸಿದರು.

WhatsApp Image 2026 07 13 at 11.44.49 AM
ಬೀದರ್ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಭೆ ನಡೆಯಿತು.

ʼಬೀದರ ಜಿಲ್ಲೆಯಲ್ಲಿ ಒಟ್ಟು 1,528 ಮತ ಕೇಂದ್ರಗಳಿದ್ದು, 14,61,959 ಮತದಾರರಿದ್ದಾರೆ. ಜುಲೈ 13ರವರೆಗೆ ಒಟ್ಟು 14,20,002 ಮತದಾರರಿಗೆ ಎನುಮರೇಶನ್ ಫಾರಂಗಳನ್ನು ವಿತರಿಸಲಾಗಿದ್ದು, ಒಟ್ಟು ಶೇ.97.13 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಎಲ್ಲ ಬಿಎಲ್‌ಒಗಳು ಕ್ರಿಯಾಶೀಲರಾಗಿ ಶೇ 100ರಷ್ಟು ಪ್ರಗತಿ ಸಾಧಿಸಬೇಕುʼ ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, “ಚುನಾವಣಾ ಆಯೋಗದ ನಿರ್ದೇಶನದಂತೆ ಕಾಲ ಕಾಲಕ್ಕೆ ಎಲ್ಲ ಕೆಲಸಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಲಾಗುವುದು” ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಪ್ ಬದೋಲೆ ಅವರು ಜಿಲ್ಲೆಯಲ್ಲಿ ಕೈಗೊಂಡ ಸ್ವೀಪ್ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

WhatsApp Image 2026 07 13 at 5.49.46 PM
ಎಸ್‌ಐಆರ್ ಜಾಗೃತಿ ಬೈಕ್‌ ರ‍್ಯಾಲಿಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಪಾಲ್ಗೊಂಡರು.

ಇದನ್ನೂ ಓದಿ : ಬೀದರ್‌ | ಎಸ್‌ಐಆರ್ ಪ್ರಕ್ರಿಯೆ ಶೇ 100ರಷ್ಟು ಪೂರ್ಣ : ಬಿಎಲ್‌ಒ, ಮೇಲ್ವಿಚಾರಕರಿಗೆ ಸನ್ಮಾನ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಸೇರಿದಂತೆ ಜಿಲ್ಲಾ, ತಾಲೂಕುಗಳ ಇಆರ್‌ಓಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಎಸ್‌ಸಿ ಮೀಸಲಾತಿ ಕೈಬಿಟ್ಟಿದ್ದಕ್ಕೆ ಆಕ್ರೋಶ: ಅ.16ರಂದು ಹೋರಾಟದ ಎಚ್ಚರ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ...

‘ನಮ್ಮನ್ನು ದಮನಿಸುವ ಪೊಲೀಸ್ ಆದೇಶ ಕೂಡಲೇ ರದ್ದಾಗಲಿ’: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಲಿಂಗತ್ವ ಅಲ್ಪಸಂಖ್ಯಾತರು

ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಇತ್ತೀಚೆಗೆ ಹೊರಡಿಸಿರುವ...

ಎಸ್‌ಸಿ, ಎಸ್‌ಟಿ ಮೀಸಲಾತಿ ಶೇ.56ಕ್ಕೆ ಏರಿಕೆ ಮಾಡಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್!

ರಾಜ್ಯದ ಹಿಂದಿನ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರವು ಪರಿಶಿಷ್ಟ ಜಾತಿ (ಎಸ್‌ಸಿ)...