ಬೀದರ್‌ | ಎಸ್‌ಐಆರ್ ಪ್ರಕ್ರಿಯೆ ಶೇ 100ರಷ್ಟು ಪೂರ್ಣ : ಬಿಎಲ್‌ಒ, ಮೇಲ್ವಿಚಾರಕರಿಗೆ ಸನ್ಮಾನ

Date:

ಭಾಲ್ಕಿ ವಿಧಾನಸಭಾ ಕ್ಷೇತ್ರ-51ರ ಏಣಕೂರ ಗ್ರಾಮದ ಮತಗಟ್ಟೆ ಸಂಖ್ಯೆ -241ರಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಕಡಿಮೆ ಅವಧಿಯಲ್ಲೇ ಶೇ100ರಷ್ಟು ಯಶಸ್ವಿಯಾಗಿ ಪೂರ್ಣಗೊಳಿಸಿದ ಮತಗಟ್ಟೆ ಅಧಿಕಾರಿಗಳು ಹಾಗೂ ಮೇಲ್ವಿಚಾರಕರನ್ನು ಜಿಲ್ಲಾಡಳಿತವು ಪ್ರಶಂಸನಾ ಪ್ರಮಾಣಪತ್ರ ನೀಡಿ ಗೌರವಿಸಿತು.

- Advertisement -

ಬೀದರ್ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಏಣಕೂರ ಗ್ರಾಮದ ಮತಗಟ್ಟೆ ಸಂಖ್ಯೆ-241ರ ಮೇಲ್ವಿಚಾರಕ ಗ್ರಾಮ ಆಡಳಿತಾಧಿಕಾರಿ ಸಂತೋಷ ಚಿನ್ನಾ ರಾಠೋಡ, ಮತಗಟ್ಟೆ ಅಧಿಕಾರಿಯಾಗಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಪದವೀಧರ ಸಹ ಶಿಕ್ಷಕಿ ಬಸಮ್ಮ ಹಾಗೂ ಮತಗಟ್ಟೆ ಸಂಖ್ಯೆ-6ರ ಅಧಿಕಾರಿ ಸೈಯದ್ ಇಮಾಮ್ ಪಟೇಲ್ ಅವರಿಗೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಪ್ರಶಂಸನಾ ಪ್ರಮಾಣಪತ್ರ ನೀಡಿ ಸನ್ಮಾನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, “ಚುನಾವಣಾ ಆಯೋಗದ ಮಹತ್ವದ ಕಾರ್ಯವನ್ನು ಕಡಿಮೆ ಅವಧಿಯಲ್ಲಿ ಸಮರ್ಪಕವಾಗಿ ಪೂರ್ಣಗೊಳಿಸಿರುವ ಅಧಿಕಾರಿಗಳ ಕರ್ತವ್ಯನಿಷ್ಠೆ, ಸಮಯಪಾಲನೆ, ಪರಿಶ್ರಮ ಹಾಗೂ ಕಾರ್ಯಕ್ಷಮತೆ ಶ್ಲಾಘನೀಯವಾಗಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಚುನಾವಣಾ ಆಯೋಗದ ನಿರ್ದೇಶನಗಳನ್ನು ಜವಾಬ್ದಾರಿ ಮತ್ತು ಸಮರ್ಪಣಾ ಮನೋಭಾವದಿಂದ ಸಮಯೋಚಿತವಾಗಿ ಅನುಷ್ಠಾನಗೊಳಿಸಿರುವ ನಿಮ್ಮ ಸೇವೆ ಇತರ ಅಧಿಕಾರಿಗಳಿಗೆ ಮಾದರಿಯಾಗಿದೆ ಎಂದು ಪ್ರಶಂಸಿಸಿ, ಮುಂದಿನ ಕಾರ್ಯಗಳಿಗೂ ಶುಭ ಹಾರೈಸಿದರು.

ಇದನ್ನೂ ಓದಿ : ಬೀದರ್‌ | ಅಪರಾಧಿಕ ಕೃತ್ಯದಲ್ಲಿ ಭಾಗಿ : ಇಬ್ಬರು ರೌಡಿಶೀಟರ್‌ಗಳ ಗಡಿಪಾರು

ಕಾರ್ಯಕ್ರಮದಲ್ಲಿ ಮತದಾರ ನೋಂದಣಾಧಿಕಾರಿ ಶಂಕರ ಖಾದಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ ಬದೋಲೆ ಹಾಗೂ ಭಾಲ್ಕಿ ತಹಸೀಲ್ದಾರ ಮಲ್ಲಿಕಾರ್ಜುನ ವಡ್ಡನಕೇರಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಎಸ್‌ಸಿ ಮೀಸಲಾತಿ ಕೈಬಿಟ್ಟಿದ್ದಕ್ಕೆ ಆಕ್ರೋಶ: ಅ.16ರಂದು ಹೋರಾಟದ ಎಚ್ಚರ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ...

‘ನಮ್ಮನ್ನು ದಮನಿಸುವ ಪೊಲೀಸ್ ಆದೇಶ ಕೂಡಲೇ ರದ್ದಾಗಲಿ’: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಲಿಂಗತ್ವ ಅಲ್ಪಸಂಖ್ಯಾತರು

ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಇತ್ತೀಚೆಗೆ ಹೊರಡಿಸಿರುವ...

ಎಸ್‌ಸಿ, ಎಸ್‌ಟಿ ಮೀಸಲಾತಿ ಶೇ.56ಕ್ಕೆ ಏರಿಕೆ ಮಾಡಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್!

ರಾಜ್ಯದ ಹಿಂದಿನ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರವು ಪರಿಶಿಷ್ಟ ಜಾತಿ (ಎಸ್‌ಸಿ)...