ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

Date:

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಕ್ಕೆ ಒಂದೂ ಸ್ಥಾನ ಮೀಸಲಿಡದಿರುವುದನ್ನು ಖಂಡಿಸಿ, ಜಿಲ್ಲಾ ಪಂಚಾಯಿತಿ ಎಸ್‌ಸಿ ಮೀಸಲಾತಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಶುಕ್ರವಾರ ಚಿಟಗುಪ್ಪ ತಾಲೂಕಿನ ಮನ್ನಾಏಖೇಳ್ಳಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

- Advertisement -

ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಪ್ರತಿಭಟನಾಕಾರರು ಪಟ್ಟಣದ ಮೀನಕೇರಾ ಕ್ರಾಸ್ ಬಳಿ ಜಮಾಯಿಸಿದರು. ಅಲ್ಲಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಹಲಗೆ ವಾದ್ಯಮೇಳದೊಂದಿಗೆ ಕಾಲ್ನಡಿಗೆಯಲ್ಲಿ ಮೆರವಣಿಗೆ ನಡೆಸಿದರು. ಮೆರವಣಿಗೆಯುದ್ದಕ್ಕೂ ‘ಎಸ್‌ಸಿ ಮೀಸಲಾತಿ ಬೇಕೇ ಬೇಕು’ ಎಂದು ಘೋಷಣೆ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
WhatsApp Image 2026 10 16 at 6.55.26 PM 1

ಮೆರವಣಿಯು ಅಂಬೇಡ್ಕರ್ ವೃತ್ತದ ಬಳಿ ನಿರ್ಮಿಸಲಾಗಿದ್ದ ಪ್ರತಿಭಟನಾ ವೇದಿಕೆಯಲ್ಲಿ ಸಮಾವೇಶಗೊಂಡಿತು. ಬಳಿಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಕಾರ್ಯದರ್ಶಿಯವರ ಹೆಸರಿಗೆ ಬರೆದ ಮನವಿಯನ್ನು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಉಪತಹಸೀಲ್ದಾರ್‌ ಅನೀಲಕುಮಾರ ಅವರಿಗೆ ಸಲ್ಲಿಸಿದರು.

ಹೋರಾಟಗಾರ ರಾಜಕುಮಾರ ಸಿಂಧೆ ಮಾತನಾಡಿ, “ಸುಮಾರು 80 ಸಾವಿರಕ್ಕೂ ಅಧಿಕ ಪರಿಶಿಷ್ಟ ಜಾತಿ ಸಮುದಾಯದ ಜನಸಂಖ್ಯೆ ಹೊಂದಿರುವ ಬೀದರ್ ದಕ್ಷಿಣ ವಿಧಾನಸಭೆ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಒಂದೇ ಒಂದು ಸ್ಥಾನವನ್ನೂ ಎಸ್‌ಸಿ ಸಮುದಾಯಕ್ಕೆ ಮೀಸಲಿಡದೆ ಅನ್ಯಾಯ ಎಸಗಲಾಗಿದೆ. ಲಿಂಗಾಯತರಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಉದ್ದೇಶದಿಂದ ದಲಿತರನ್ನು ರಾಜಕೀಯವಾಗಿ ತುಳಿಯುವ ಪ್ರಯತ್ನ ನಡೆದಿದೆ ಎಂಬ ಅನುಮಾನ ಮೂಡಿದೆ. ಔರಾದ್ (ಎಸ್), ಮನ್ನಳ್ಳಿ ಹಾಗೂ ನಿರ್ಣಾ ಕ್ಷೇತ್ರಗಳನ್ನು ಎಸ್‌ಸಿ ಸಮುದಾಯಕ್ಕೆ ಮೀಸಲಿಡಬೇಕು. ಇಲ್ಲದಿದ್ದರೆ ಜನಪ್ರತಿನಿಧಿಗಳ ಮನೆಗಳಿಗೆ ಮುತ್ತಿಗೆ ಹಾಕಲಾಗುವುದು” ಎಂದು ಎಚ್ಚರಿಸಿದರು.

WhatsApp Image 2026 10 10 at 7.46.08 PM 11
ಜಾಹೀರಾತು

ಹೋರಾಟಗಾರ ರಾಹುಲ್ ಖಂದಾರೆ ಮಾತನಾಡಿ, “ಬೀದರ್ ದಕ್ಷಿಣ ಶಾಸಕ ಶೈಲೇಂದ್ರ ಬೆಲ್ದಾಳೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಅಣತಿಯಂತೆ ಜಿಲ್ಲಾಡಳಿತ ಕ್ಷೇತ್ರಗಳ ಪುನರ್ವಿಂಗಡಣೆ ನಡೆಸಿದೆ. ದಲಿತರ ರಾಜಕೀಯ ಹಕ್ಕುಗಳನ್ನು ಕಸಿದುಕೊಂಡು, ಕೆಲವರಿಗೆ ಅನುಕೂಲವಾಗುವ ರೀತಿಯಲ್ಲಿ ಮೀಸಲಾತಿ ನಿಗದಿಪಡಿಸಿರುವುದು ಘೋರ ಅನ್ಯಾಯ. ಪ್ರಕಟಿಸಿರುವ ಮೀಸಲಾತಿಯನ್ನು ಕೂಡಲೇ ಮರುಪರಿಶೀಲಿಸಿ ಎಸ್‌ಸಿ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು. ಇಲ್ಲದಿದ್ದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು” ಎಂದರು.

ಯುವ ಹೋರಾಟಗಾರ ಗೌತಮ್ ಬಗದಲ್ಕರ್ ಮಾತನಾಡಿ, “ದಲಿತರಿಗೆ ರಾಜಕೀಯ ಮತ್ತು ಸಾಮಾಜಿಕವಾಗಿ ಅನ್ಯಾಯ ಮಾಡುವ ಪ್ರಕ್ರಿಯೆ ಮುಂದುವರಿದಿದೆ. ಇದೀಗ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿಯಲ್ಲಿಯೂ ಅನ್ಯಾಯವಾಗಿದೆ. ಎಸ್‌ಸಿ ಸಮುದಾಯಕ್ಕೆ ನ್ಯಾಯಯುತವಾಗಿ ಸಿಗಬೇಕಾದ ಮೀಸಲು ಕ್ಷೇತ್ರಗಳನ್ನು ನಿಗದಿಪಡಿಸಬೇಕು. ಇಲ್ಲದಿದ್ದರೆ ಮನ್ನಾಏಖೇಳ್ಳಿ ಬಂದ್‌ಗೆ ಕರೆ ನೀಡಿ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಸಿದರು.

ಹೋರಾಟ ಸಮಿತಿಯ ಉಪಾಧ್ಯಕ್ಷ ವೀರಶೆಟ್ಟಿ ಬಂಬುಳಗಿ ಮಾತನಾಡಿ, “ಶಾಸಕ ಶೈಲೇಂದ್ರ ಬೆಲ್ದಾಳೆ ಅವರು ತಮ್ಮ ತಾಯಿ ಹಾಗೂ ಸಹೋದರರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅನುಕೂಲವಾಗುವಂತೆ 5 ಕ್ಷೇತ್ರಗಳು ಸಾಮಾನ್ಯ ಕ್ಷೇತ್ರಗಳಾಗಿ ಉಳಿಯುವಂತೆ ಮಾಡಿದ್ದಾರೆ. ಎಸ್‌ಸಿ ಸಮುದಾಯಕ್ಕೆ ಮೀಸಲಾತಿ ನೀಡದಿರುವುದನ್ನು ಖಂಡಿಸಿ ಹೋರಾಟದ ಎಚ್ಚರಿಕೆ ನೀಡಿದ್ದರೂ ಶಾಸಕರು ಪ್ರತಿಕ್ರಿಯಿಸಿಲ್ಲ. ಈ ಅನ್ಯಾಯವನ್ನು ಸರಿಪಡಿಸದಿದ್ದರೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುವುದು” ಎಂದು ಹೇಳಿದರು.

WhatsApp Image 2026 10 16 at 6.55.25 PM

“ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳನ್ನು ಸಾಮಾನ್ಯ ವರ್ಗಕ್ಕೆ ಹಾಗೂ ಒಂದು ಕ್ಷೇತ್ರವನ್ನು ಪರಿಶಿಷ್ಟ ಪಂಗಡಕ್ಕೆ ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿಯ ಜನಸಂಖ್ಯೆ ಗಣನೀಯವಾಗಿದ್ದರೂ ಒಂದೂ ಸ್ಥಾನ ಮೀಸಲಿಡದಿರುವುದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವವರು ಬೀದರ್‌ ದಕ್ಷಿಣದಲ್ಲಿರುವ ಜಿಲ್ಲಾ ಪಂಚಾಯಿತಿಯ ಸಾಮಾನ್ಯ ಕ್ಷೇತ್ರಗಳಲ್ಲಿಯೂ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಧೈರ್ಯ ತೋರಿಸಬೇಕು” ಎಂದು ಮುಖಂಡ ಉಮೇಶ ಗುತ್ತೆದಾರ್ ಸವಾಲು ಹಾಕಿದರು.‌

WhatsApp Image 2026 10 10 at 6.59.42 PM 6
ಜಾಹೀರಾತು

ಬಿಎಸ್‌ಪಿ ಮುಖಂಡ ಕಪೀಲ್ ಗೋಡಬೋಲೆ ಮಾತನಾಡಿ, “ದಲಿತರು ಮತ್ತು ಅಲ್ಪಸಂಖ್ಯಾತರ ಮತಗಳಿಂದ ಅಧಿಕಾರಕ್ಕೆ ಬಂದ ರಾಜ್ಯ ಸರ್ಕಾರ ದಲಿತರಿಗೆ ನಿರಂತರ ಅನ್ಯಾಯ ಮಾಡುತ್ತಿದೆ. ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಎಸ್‌ಸಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸದಿರುವುದು ಖಂಡನೀಯ. ಪ್ರಕಟಿಸಿರುವ ಕರಡು ಮೀಸಲಾತಿಯನ್ನು ರದ್ದುಗೊಳಿಸಿ, ಎಸ್‌ಸಿ ಸಮುದಾಯಕ್ಕೆ ಸೂಕ್ತ ಮೀಸಲಾತಿ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯಿತಿ ಎಸ್‌ಸಿ ಮೀಸಲಾತಿ ಹೋರಾಟ ಸಮಿತಿಯ ಅಧ್ಯಕ್ಷ ರಾಘವೇಂದ್ರ ಕಿರಣ, ಗೌರವಾಧ್ಯಕ್ಷ ತಿಪ್ಪಣ್ಣ ವಾಲಿ, ಪ್ರಕಾಶ ಬಗದಲ್, ಅಂಬಾದಾಸ ಸೋನಿ, ಜೀವನ ಬಡ್ತಾ, ರಾಜಕುಮಾರ ಜ್ಯೋತಿ, ಶಾಂತಕುಮಾರ ಪಟ್ನೆ, ಶಿವಕುಮಾರ ಮುತ್ತಂಗಿ, ಲಾಲಪ್ಪ ರಾಂಪೂರ, ಆಸ್ಕರ್ ಫರ್ನಾಂಡೀಸ್, ಕಾಶಿನಾಥ ಬಗದಲಕರ್, ಪ್ರೇಮನಾಥ ಅಂಬೇವಾಡಿಕರ್, ರಾಜಕುಮಾರ ಕುಂಚೆ, ಪ್ರಲ್ಹಾದ್ ಮೇಲಕೇರೆ, ಯಶವಂತ ಹಲಗಿ, ದಯಾನಂದ ರೇಕುಳಗಿ, ದಿಲೀಪ ವರ್ಮಾ, ರಾಮದಾಸ ಬೋರಾಳ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಬೀದರ್ | ಸಿಇಸಿ ಜ್ಞಾನೇಶ್‌ ಕುಮಾರ್‌ ವಜಾ, ಎಸ್ಐಆರ್ ರದ್ದತಿಗೆ ಕದಸಂಸ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...

ಬ್ರೇನ್ ಸ್ಟ್ರೋಕ್ ಲಕ್ಷಣಗಳನ್ನು ಆರಂಭದಲ್ಲೇ ಗುರುತಿಸುವುದು ಅವಶ್ಯ: ನರರೋಗ ತಜ್ಞ ಡಾ. ರಾಕೇಶ ಎ.ವಿ

ಮೆದುಳಿನ ಪಾರ್ಶ್ವವಾಯು (ಬ್ರೇನ್ ಸ್ಟ್ರೋಕ್) ಸಂಭವಿಸಿದಾಗ ತಕ್ಷಣ ವೈದ್ಯಕೀಯ ನೆರವು ಪಡೆಯುವುದು...

ಅಮೆರಿಕ ಸರ್ಕಾರದ ವಿರುದ್ಧ ನ್ಯಾಯಾಲಯದ ಮಹತ್ವದ ಆದೇಶ: 55 ಸಾವಿರ ಗ್ರೀನ್ ಕಾರ್ಡ್ ಅರ್ಜಿಗಳ ಪರಿಗಣನೆಗೆ ಸೂಚನೆ

ಅಮೆರಿಕದಲ್ಲಿ ಶಾಶ್ವತವಾಗಿ ನೆಲೆಸಲು ಬಯಸುವ ವಿದೇಶಿಯರಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ, ಜಗತ್ತಿನ...