ಶಾಶ್ವತ ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರವನ್ನು ಎಲ್ಲಾ ಅರ್ಹ ಅರ್ಜಿದಾರರಿಗೆ ಕಾಲಮಿತಿಯೊಳಗೆ ವಿತರಿಸುವ ಉದ್ದೇಶದಿಂದ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಸಹಾಯ ಮತ್ತು ಸೌಲಭ್ಯ ಕೌಂಟರ್‌ಗಳನ್ನು ಪ್ರಾರಂಭಿಸಲಾಗಿದೆ ಎಂದು ಬೀದರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ.ಗಿರೀಶ್ ದಿಲೀಪ್ ಬದೋಲೆ ತಿಳಿಸಿದ್ದಾರೆ.
ಬೀದರ ಜಿಲ್ಲೆಯ 181 ಗ್ರಾಮ ಪಂಚಾಯತಿಗಳಲ್ಲಿ ಔರಾದ (ಬಿ)-21, ಬಸವಕಲ್ಯಾಣ-30, ಭಾಲ್ಕಿ,-40, ಬೀದರ-32, ಹುಮನಾಬಾದ-19, ಹುಲಸೂರ-7, ಚಿಟಗುಪ್ಪಾ-14, ಕಮಲನಗರ-18 ಸಹಾಯ ಮತ್ತು ಸೌಲಭ್ಯ ಕೌಂಟರಗಳನ್ನು ಪ್ರಾರಂಭಿಸಲಾಗಿದೆ.
ಇಲ್ಲಿಯವರೆಗೆ ಜಿಲ್ಲಾದ್ಯಂತ ವಿವಿಧ ಗ್ರಾಮ ಪಂಚಾಯತಿಗಳಲ್ಲಿ 201 ಅರ್ಜಿಗಳನ್ನು ಸ್ವೀಕೃತವಾಗಿವೆ. ಈ ಸಹಾಯ ಮತ್ತು ಸೌಲಭ್ಯ ಕೌಂಟರಗಳನ್ನು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್‌ಗಳು ನಿರ್ವಹಿಸುತ್ತಿದ್ದು, ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಹಾಯ ಮತ್ತು ಸೌಲಭ್ಯ ಕೌಂಟರಗಳ ಕಾರ್ಯನಿರ್ವಹಣೆಯ ಉಸ್ತುವಾರಿ ಮಾಡುತ್ತಿದ್ದಾರೆ.
ಸಾರ್ವಜನಿಕರು ಶಾಶ್ವತ ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ ಪಡೆಯಲು ಗ್ರಾಮ ಪಂಚಾಯತಿಗಳಲ್ಲಿ ತೆರೆಯಲಾದ ಸಹಾಯ ಮತ್ತು ಸೌಲಭ್ಯ ಕೌಂಟರ್‌ಗಳ ಸದುಪಯೋಗ ಪಡೆದುಕೊಳ್ಳಬೇಕು.
ಇದನ್ನೂ ಓದಿ : ಕಲಬುರಗಿ | ₹1 ಲಕ್ಷ ಲಂಚ ಪಡೆಕ ಆರೋಪ : ತಹಸೀಲ್ದಾರ್ ಸೇರಿ ಇಬ್ಬರಿಗೆ 4 ವರ್ಷ ಜೈಲು
ಹೆಚ್ಚಿನ ಮಾಹಿತಿಗಾಗಿ ಸಹಾಯ ಮತ್ತು ಸೌಲಭ್ಯ ಕೌಂಟರ್‌ಗಳ ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ್ ಸಿಇಒ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




