ಬೀದರ್‌ | ಯುವಶಕ್ತಿಗೆ ಅಧ್ಯಾತ್ಮದ ಅರಿವು ಅಗತ್ಯ: ಸಂಸದ ಸಾಗರ ಖಂಡ್ರೆ

Date:

ಇಂದಿನ ಆಧುನಿಕ ಯುಗದಲ್ಲಿ ಯುವಕರು ಅಧ್ಯಾತ್ಮದ ಅರಿವು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದು ಬೀದರ ಸಂಸದ ಸಾಗರ ಖಂಡ್ರೆ ಹೇಳಿದರು.

- Advertisement -

ಭಾಲ್ಕಿ ನಗರದ ಚನ್ನಬಸವಾಶ್ರಮದ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಗುರುವಾರ ಆಯೋಜಿಸಿದ್ದ ಅಲ್ಲಮಪ್ರಭುದೇವರ ವಚನ ದರ್ಶನ ಪ್ರವಚನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

“ದೇಶದ ಭವಿಷ್ಯವಾಗಿರುವ ಯುವಶಕ್ತಿ ವಿವಿಧ ಚಟಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಮಹಾತ್ಮರ ನುಡಿ ಹಾಗೂ ಪ್ರವಚನಗಳನ್ನು ಆಲಿಸುವುದು ಮಹಿಳೆಯರು ಮತ್ತು ಹಿರಿಯರಿಗೆ ಮಾತ್ರ ಸೀಮಿತವಾಗಬಾರದು. ಅಧ್ಯಾತ್ಮದ ಕಾರ್ಯಕ್ರಮಗಳಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಇದರಿಂದ ಯುವಕರಲ್ಲಿ ಉತ್ತಮ ನಡೆ-ನುಡಿ ಬೆಳೆದು, ಸದೃಢ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ” ಎಂದರು.

ಪೂಜ್ಯರು ಅನಾಥ ಮಕ್ಕಳ ರಕ್ಷಕರಾಗಿ ಅವರ ಬಾಳಿಗೆ ಬೆಳಕಾಗಿದ್ದಾರೆ. ಅವರ ನಿಸ್ವಾರ್ಥ ಸೇವಾ ಕಾರ್ಯಗಳು ನಮ್ಮ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ದೊಡ್ಡ ಶಕ್ತಿ ನೀಡುತ್ತಿವೆ. ಈ ಭಾಗದಲ್ಲಿ ಬಸವಲಿಂಗ ಪಟ್ಟದ್ದೇವರು ನಮ್ಮೆಲ್ಲರಿಗೂ ಮಾರ್ಗದರ್ಶಕರಾಗಿ 40 ವರ್ಷಗಳಿಂದ ಶ್ರಾವಣ ಮಾಸದಲ್ಲಿ ಪ್ರವಚನ ಮಾಡುತ್ತ ಬಂದಿದ್ದಾರೆ. ಪೂಜ್ಯರ ಪ್ರವಚನಗಳು ನಮ್ಮೆಲ್ಲರ ಮಾನಸಿಕ ಆರೋಗ್ಯವನ್ನು ಸರಿಪಡಿಸುವ ಔಷಧದಂತಿವೆ. ಪೂಜ್ಯರು ಈ ಭಾಗದಲ್ಲಿ ಶೈಕ್ಷಣಿಕ ಸೇವೆ ಮಾಡುವ ಮೂಲಕ ಸಮಾಜಕ್ಕೆ ಬಹುದೊಡ್ಡ ಕೊಡುಗೆ ನೀಡುತ್ತಿದ್ದಾರೆ” ಎಂದರು.

ಸಾನ್ನಿಧ್ಯ ವಹಿಸಿದ್ದ ಬಸವಲಿಂಗ ಪಟ್ಟದ್ದೇವರು ಮಾತನಾಡಿ, “ಮನಸ್ಸನ್ನು ಏಕಾಗ್ರಗೊಳಿಸುವುದು ಅತ್ಯಂತ ಮುಖ್ಯ. ಅದಕ್ಕೆ ಸಹಜ ಹಾಗೂ ಸುಲಭವಾದ ವಿಧಾನವೆಂದರೆ ಇಷ್ಟಲಿಂಗಯೋಗ. ನಿರಂತರವಾಗಿ ಇಷ್ಟಲಿಂಗಯೋಗ ಮಾಡುವ ಮೂಲಕ ಮನಸ್ಸನ್ನು ನಿಯಂತ್ರಿಸಬಹುದು” ಎಂದು ಹೇಳಿದರು.

“ಸಕಲ ಇಂದ್ರಿಯಗಳಲ್ಲಿ ಮನಸ್ಸು ಪ್ರಧಾನವಾಗಿದೆ. ವಾಹಕನಾದ ಮನಸ್ಸಿಗೆ ಸರಿಯಾದ ಸಂಸ್ಕಾರ ನೀಡಿದರೆ, ದೇಹವೆಂಬ ವಾಹನವು ಸುಗಮವಾಗಿ ಸುಮಾರ್ಗದಲ್ಲಿ ಸಾಗುತ್ತದೆ. ಒಂದು ತಿಂಗಳ ಕಾಲ ತಾವು ಆಲಿಸಿದ ಅಲ್ಲಮಪ್ರಭುದೇವರ ವಚನ ದರ್ಶನ ಪ್ರವಚನವನ್ನು ಪ್ರತಿದಿನ ಮೆಲುಕು ಹಾಕಬೇಕು. ಸಾಧ್ಯವಾದಷ್ಟು ಅವುಗಳ ಸಂದೇಶಗಳನ್ನು ನಿತ್ಯಜೀವನದಲ್ಲಿ ಅಳವಡಿಸಿಕೊಂಡಾಗ ಜೀವನ ಸುಖಮಯವಾಗುತ್ತದೆ” ಎಂದು ನುಡಿದರು.

ಬಳತೆ ಪರಿವಾರದ ವತಿಯಿಂದ ಪ್ರಸಾದ ದಾಸೋಹ ನೆರವೇರಿತು. ರಾಜು ಜುಬರೆ ಹಾಗೂ ಸಂಗಮೇಶ ಡೋಣಗಾಪುರೆ ಅವರಿಂದ ವಚನ ಸಂಗೀತ ನಡೆಯಿತು. ಬೀದರ ಅನುಭವಮಂಟಪ ಸಂಸ್ಕೃತಿ ವಿದ್ಯಾಲಯದ ಕು. ರಾಮೇಶ್ವರಿ ನಾಗನಾಥ ಅವರು ನಿಜಭಕ್ತಿಯ ಕುರಿತು ಭಾಷಣ ಮಾಡಿದರು.

ಇದನ್ನೂ ಓದಿ : ವಚನ ಕಲ್ಯಾಣ | ಭಕ್ತಂಗೆ ಸುಖವೂ ಸರಿ, ದುಃಖವೂ ಸರಿ..

ಬೀದರ ಬ್ರೀಮ್ಸ್ ಆಸ್ಪತ್ರೆಯ ಮನೋರೋಗ ತಜ್ಞ ಡಾ.ರಾಘವೇಂದ್ರ ವಾಗೋಲೆ ಮಾತನಾಡಿದರು. ಶ್ರಾವಣ ಮಾಸದ ಸೇವಾ ಸಮಿತಿ ಅಧ್ಯಕ್ಷೆ ಸ್ವರೂಪಾ ಬಂಡೆಪ್ಪ ಬಳತೆ ಅಧ್ಯಕ್ಷತೆ ವಹಿಸಿದ್ದರು. ದೀಪಕ ಠಮಕೆ ನಿರೂಪಿಸಿದರು. ಮಲ್ಲಮ್ಮ ನಾಗನಕೇರೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ, ಪೊಲೀಸರು, ಕಟ್ಟಡ ಕಾರ್ಮಿಕರಿಗೂ ಆಘಾತ!

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್,...

ವಿಜಯಪುರ | ಅಂತಿಮ ಮತದಾರರ ಪಟ್ಟಿ ಪ್ರಕಟ: ನಾಗಠಾಣದಲ್ಲಿ ಅತಿ ಹೆಚ್ಚು ಮತದಾರರು

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು...

ಆಸ್ಕರ್‌ 2027 | ಇವೇ, ರೇಸ್‌ನಲ್ಲಿರುವ 9 ಬಹುನಿರೀಕ್ಷಿತ ಸಿನಿಮಾಗಳು!

2027ರ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿ (ಆಸ್ಕರ್) ರೇಸ್‌ಗೆ ಈಗಿನಿಂದಲೇ ಕೌಂಟ್‌ಡೌನ್ ಆರಂಭವಾಗಿದೆ....