ಬೀದರ್‌ | ಪೊಲೀಸರ ಒತ್ತಡ ನಿವಾರಣೆಗೆ ಕ್ರೀಡೆ, ಯೋಗ ಅಗತ್ಯ: ಸಚಿವ ಈಶ್ವರ ಖಂಡ್ರೆ

Date:

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ದಿನದ 24 ಗಂಟೆಯೂ ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುತ್ತಾರೆ. ಇಂತಹ ಒತ್ತಡದಿಂದ ಮುಕ್ತರಾಗಲು ಹಾಗೂ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ವ್ಯಾಯಾಮ, ಯೋಗ ಮತ್ತು ಕ್ರೀಡಾಕೂಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಅಗತ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

- Advertisement -

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ನವೆಂಬರ್ 25 ರಿಂದ 27ರವರೆಗೆ ಆಯೋಜಿಸಿರುವ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಂಜಾಬ್ ಚುನಾವಣೆ | 6 ವರ್ಷಗಳ ಬಳಿಕ ಮತ್ತೆ...

2020ರ ಐತಿಹಾಸಿಕ ರೈತ ಹೋರಾಟದ ವೇಳೆ ಮುರಿದುಬಿದ್ದಿದ್ದ ಶಿರೋಮಣಿ ಅಕಾಲಿ ದಳ (SAD) ಮತ್ತು ಬಿಜೆಪಿ  ಮೈತ್ರಿ ಆರು ವರ್ಷಗಳ ಬಳಿಕ ಮತ್ತೆ ಜೀವ ಪಡೆದುಕೊಂಡಿದೆ. 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗಳು ಉಲ್ಟಾ ಹೊಡೆದ ಮಾತ್ರಕ್ಕೆ...

ಪಟ್ಟಣಗೆರೆ ಶೆಡ್‌ನಲ್ಲಿದ್ದ ನಾಲ್ವರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ಉಲ್ಟಾ ಹೊಡೆದಿರುವುದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರತ್ಯಕ್ಷದರ್ಶಿಗಳು ಉಲ್ಟಾ ಹೊಡೆದ ಮಾತ್ರಕ್ಕೆ ದರ್ಶನ್‌ಗೆ ಕಾನೂನು ಕುಣಿಕೆಯಿಂದ ಮುಕ್ತಿ ಸಿಗುತ್ತದೆಯೇ? ಪೊಲೀಸರು...

ರಾಯಚೂರು | ಅವ್ಯವಸ್ಥೆಯ ಆಗರವಾದ ವಸತಿ ನಿಲಯ: ಜೀವ...

ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದ್ದು, ವಿದ್ಯಾರ್ಥಿಗಳು ಪ್ರತಿದಿನ ತೊಂದರೆ ಅನುಭವಿಸುವಂತಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕನಿಷ್ಠ ಅಗತ್ಯಗಳ ಬಗ್ಗೆಯೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ...

“ಪೊಲೀಸ್ ಇಲಾಖೆಯ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಅಪರಾಧಗಳನ್ನು ತಡೆಗಟ್ಟುವುದು, ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವುದು ಹಾಗೂ ಕೋಮು ಸೌಹಾರ್ದ ಕಾಪಾಡುವಂತಹ ಹಲವು ಜವಾಬ್ದಾರಿಗಳನ್ನು ಪೊಲೀಸರು ನಿರ್ವಹಿಸುತ್ತಾರೆ. ಅಪಘಾತ, ಕಾನೂನು ಸುವ್ಯವಸ್ಥೆ ಸಮಸ್ಯೆ, ಗಣ್ಯರ ಭೇಟಿ ಸೇರಿದಂತೆ ಯಾವುದೇ ಸಂದರ್ಭದಲ್ಲೂ ಪೊಲೀಸರು ಸೇವೆಗೆ ಸಿದ್ಧರಾಗಿರಬೇಕಾಗುತ್ತದೆ. ಇದರಿಂದಾಗಿ ಅವರಿಗೆ ಕುಟುಂಬದೊಂದಿಗೆ ಸಮಯ ಕಳೆಯಲೂ ಸಾಧ್ಯವಾಗದ ಪರಿಸ್ಥಿತಿ ಎದುರಾಗುತ್ತದೆ. ಹೀಗಾಗಿ ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡೆಗಳು ಉತ್ತಮ ಸಾಧನವಾಗಿವೆ” ಎಂದರು.

“ಆರೋಗ್ಯವೇ ಭಾಗ್ಯ. ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿದ್ದಾಗ ಮಾತ್ರ ಕರ್ತವ್ಯದಲ್ಲಿನ ಸವಾಲುಗಳನ್ನು ಧೈರ್ಯದಿಂದ ಎದುರಿಸಲು ಸಾಧ್ಯ. ಕ್ರೀಡೆಗಳು ಆತ್ಮವಿಶ್ವಾಸ, ಶಿಸ್ತು ಮತ್ತು ಸಾಮರಸ್ಯವನ್ನು ಬೆಳೆಸುವುದರ ಜತೆಗೆ ದೈನಂದಿನ ಕೆಲಸಗಳನ್ನು ಉತ್ಸಾಹದಿಂದ ನಿರ್ವಹಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಪ್ರತಿಯೊಬ್ಬ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಕ್ರೀಡೆಗಳಲ್ಲಿ ಭಾಗವಹಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಜಿಲ್ಲೆಯ ಕ್ರೀಡಾಂಗಣಗಳ ಅಭಿವೃದ್ಧಿ ಹಾಗೂ ಬೀದರ್‌ನಲ್ಲಿ ದೊಡ್ಡ ಮತ್ತು ಆಧುನಿಕ ಕ್ರೀಡಾಂಗಣ ನಿರ್ಮಿಸುವ ಯೋಜನೆ ಹೊಂದಲಾಗಿದೆ. ಜತೆಗೆ ವಿವಿಧ ಹೋಬಳಿ ಪ್ರದೇಶಗಳಲ್ಲಿಯೂ ಆಟದ ಮೈದಾನಗಳನ್ನು ನಿರ್ಮಿಸುವ ಉದ್ದೇಶವಿದೆ ಎಂದು ತಿಳಿಸಿದರು. ಕ್ರೀಡಾಕೂಟಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿರುವ ದಕ್ಷಿಣ ಆಫ್ರಿಕಾದ ಖ್ಯಾತ ಮಾಜಿ ಕ್ರಿಕೆಟಿಗ ಜಾಂಟಿ ರೋಡ್ಸ್ ಅವರನ್ನು ಸ್ವಾಗತಿಸಿ, ಆಯೋಜಕರ ಕಾರ್ಯವನ್ನು ಅಭಿನಂದಿಸಿದರು.

WhatsApp Image 2026 11 25 at 8.23.43 PM

ಶಾಸಕ ರಹೀಂ ಖಾನ್ ಮಾತನಾಡಿ, 200ಕ್ಕೂ ಹೆಚ್ಚು ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನಾಡಿರುವ ಜಾಂಟಿ ರೋಡ್ಸ್ ಅವರು ಬೀದರ್‌ಗೆ ಆಗಮಿಸಿರುವುದು ಜಿಲ್ಲೆಯ ಜನರು, ಯುವಕರು ಮತ್ತು ಮಕ್ಕಳಿಗೆ ಸಂತಸದ ವಿಷಯವಾಗಿದೆ ಎಂದರು. ದಿನದ 24 ಗಂಟೆಯೂ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿಗಳು ಹಾಗೂ ಸಂಚಾರ ಪೊಲೀಸರ ಸೇವೆ ಶ್ಲಾಘನೀಯ. ನಗರದಲ್ಲಿ ವಾಯುಮಾಲಿನ್ಯ ಮತ್ತು ಧೂಳಿನ ಸಮಸ್ಯೆಯ ನಡುವೆಯೂ ಸಾರ್ವಜನಿಕರ ಸುರಕ್ಷತೆಗೆ ಪೊಲೀಸ್ ಇಲಾಖೆ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಹೇಳಿದರು.

ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಜಾಂಟಿ ರೋಡ್ಸ್ ಅವರು ಕ್ರೀಡಾ ಜ್ಯೋತಿ ಬೆಳಗಿಸಿ, ಪಾರಿವಾಳಗಳನ್ನು ಹಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿ, ಭಾರತದೊಂದಿಗಿನ ತಮ್ಮ ನಂಟನ್ನು ಸ್ಮರಿಸಿದರು. ಕ್ರಿಕೆಟ್ ಆಡಲು ಹಾಗೂ ವೀಕ್ಷಿಸಲು ಭಾರತದ ಹಲವು ಭಾಗಗಳಿಗೆ ಭೇಟಿ ನೀಡಿದ್ದೇನೆ. ಕರ್ನಾಟಕದ ಬೀದರ್‌ಗೆ ಇದೇ ಮೊದಲ ಬಾರಿಗೆ ಆಗಮಿಸಿದ್ದು, ಭಾರತವನ್ನು ತಮ್ಮ ಸ್ವಂತ ದೇಶ ದಕ್ಷಿಣ ಆಫ್ರಿಕಾಕ್ಕಿಂತಲೂ ಹೆಚ್ಚು ನೋಡಿದ್ದೇನೆ ಎಂದು ಸಂತಸ ಹಂಚಿಕೊಂಡರು. ತಮ್ಮ ಇಬ್ಬರು ಮಕ್ಕಳು ಮುಂಬೈನಲ್ಲಿ ಜನಿಸಿದ್ದು, 2015ರಲ್ಲಿ ಜನಿಸಿದ ಮಗಳಿಗೆ ‘ಇಂಡಿಯಾ’ ಎಂದು ಹೆಸರಿಟ್ಟಿರುವುದಾಗಿ ತಿಳಿಸಿದರು.

“ಒತ್ತಡದ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ತಾಳ್ಮೆ, ಬದ್ಧತೆ ಹಾಗೂ ಸೇವಾ ಮನೋಭಾವಕ್ಕೆ ಧನ್ಯವಾದ ಸಲ್ಲಿಸಿದ ಅವರು, ಒತ್ತಡ ನಿವಾರಣೆ, ಆರೋಗ್ಯ ವೃದ್ಧಿ ಮತ್ತು ಸದಾ ಚಟುವಟಿಕೆಯಿಂದ ಇರಲು ಕ್ರೀಡೆಗಳು ಉತ್ತಮ ಮಾರ್ಗವಾಗಿವೆ. ಕ್ರೀಡಾಕೂಟವು ವಾರ್ಷಿಕ ಕಾರ್ಯಕ್ರಮಕ್ಕೆ ಮಾತ್ರ ಸೀಮಿತವಾಗದೆ, ಪ್ರತಿಯೊಬ್ಬರೂ ನಿತ್ಯವೂ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಮಾತನಾಡಿ, “ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ ವಿಜೇತರಾದವರು ಮುಂದಿನ ಹಂತದ ಸ್ಪರ್ಧೆಗಳಿಗೆ ಆಯ್ಕೆಯಾಗಿ, ಅಲ್ಲಿಯೂ ಜಯಗಳಿಸುವ ಮೂಲಕ ಜಿಲ್ಲೆಗೆ ಕೀರ್ತಿ ತರಬೇಕು” ಎಂದು ಆಶಿಸಿದರು.

ಕ್ರೀಡಾಕೂಟದಲ್ಲಿ ಪಾಲ್ಗೊಂಡ ಕ್ರೀಡಾಪಟುಗಳು ಕ್ರೀಡಾ ಮನೋಭಾವದಿಂದ ಹಾಗೂ ನಿಯಮಾವಳಿಗಳಂತೆ ಸ್ಪರ್ಧೆಗಳಲ್ಲಿ ಭಾಗವಹಿಸಿ, ನಿರ್ಣಾಯಕರ ತೀರ್ಪಿಗೆ ಬದ್ಧರಾಗಿರುವುದಾಗಿ ಪ್ರತಿಜ್ಞೆ ಸ್ವೀಕರಿಸಿದರು.

1007092761

ಇದನ್ನೂ ಓದಿ : ಬೀದರ್ | ಕಾಂಗ್ರೆಸ್ ಆಡಳಿತದಿಂದ ಬಡಜನರ ಬದುಕು ದುರ್ಬಲ: ಭಗವಂತ ಖೂಬಾ

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಅಪ್ಪೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪೂಜಾರಿ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ ರಾಯಚೂರು ವಲಯದ ಸದಸ್ಯ ಕುಶಾಲ್ ಪಾಟೀಲ್, ಡಿಎಸ್ಪಿಗಳಾದ ಶರಣಪ್ಪ, ಮಡೋಳಪ್ಪ, ಭಾಲ್ಕಿ ಡಿಎಸ್ಪಿ ಬಲ್ಲಪ್ಪ ನಂದಗಾಂವೆ ಸೇರಿದಂತೆ ನಿವೃತ್ತ ಪೊಲೀಸ್ ಅಧಿಕಾರಿಗಳು, ಪೊಲೀಸ್ ಕುಟುಂಬದ ಸದಸ್ಯರು, ಕ್ರೀಡಾಪಟುಗಳು ಹಾಗೂ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು. ರಾಜ್ಯ ಸಂಯೋಜಕಿ ಶೈನಿ ಗುಡ್ಡಿ ಸ್ವಾಗತಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊನಗನಹಳ್ಳಿ ಸಮೀಪ ಅಪರಿಚಿತ ವ್ಯಕ್ತಿಯ ಶವ ಪತ್ತೆ!

ವಿಜಯಪುರ ಜಿಲ್ಲೆಯ ಹುಬ್ಬಳ್ಳಿ ರಸ್ತೆಯ ಹೊನಗನಹಳ್ಳಿ ಗ್ರಾಮದ ಸಮೀಪದ ಜಮೀನಿನಲ್ಲಿ ಅಪರಿಚಿತ...

ಬಾಗಲಕೋಟೆ |ಎಣ್ಣೆಕಾಳು, ದ್ವಿದಳ ಧಾನ್ಯ ಸಂಸ್ಕರಣಾ ಘಟಕ ಸ್ಥಾಪನೆಗೆ ಶೇ.೩೩ರಷ್ಟು ಸಹಾಯಧನ

ರೈತರು ಹಾಗೂ ಕೃಷಿ ಆಧಾರಿತ ಸಂಸ್ಥೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ೨೦೨೬-೨೭ನೇ...

ಐಪಿಎಲ್ ಹರಾಜು 2027: ವಿದೇಶಿ ಆಟಗಾರರ ರೇಸ್‌ನಲ್ಲಿ ಆಸೀಸ್, ಆಫ್ರಿಕಾ ಕ್ರಿಕೆಟಿಗರೇ ಟಾಪ್!

ಬಹುನಿರೀಕ್ಷಿತ 2027ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಿನಿ ಹರಾಜಿಗೆ ವೇದಿಕೆ...

ಬೀದರ್‌ | ನ.28, 29ರಂದು ಮಂಗಳೂರಿನಲ್ಲಿ ‘ಜನನುಡಿ’: ಪೋಸ್ಟರ್ ಬಿಡುಗಡೆ

ಯುವಜನರ ರಾಜಕಾರಣದ ದಿಕ್ಕು, ಭವಿಷ್ಯ ಮತ್ತು ಸವಾಲುಗಳನ್ನು ಪ್ರಧಾನ ಆಶಯವಾಗಿಟ್ಟುಕೊಂಡು ನ.28...