ಬೀದರ್‌ | ಎಸ್ಸೆಸ್ಸೆಲ್ಸಿ ಫಲಿತಾಂಶ : 625ಕ್ಕೆ 624 ಅಂಕ ಪಡೆದ ಆನಂದ ರಾಜ್ಯಕ್ಕೆ 2ನೇ ರ್‍ಯಾಂಕ್‌

Date:

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಏ.23ರಂದು ಪ್ರಕಟವಾಗಿದ್ದು, ಬೀದರ್‌ ಜಿಲ್ಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

- Advertisement -

ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ವಸತಿ ಪ್ರೌಢ ಶಾಲೆಯ ವಿದ್ಯಾರ್ಥಿ ಆನಂದ ಪಾಂಡುರಂಗ ಪವಾರ್‌ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರಲ್ಲಿ 625ಕ್ಕೆ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು ಗಮನ ಸೆಳೆದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ವಿದ್ಯಾರ್ಥಿ ಆನಂದನಿಗೆ ವಿಜ್ಞಾನ ವಿಷಯದಲ್ಲಿ 99 ಅಂಕ ಹೊರತು ಪಡಿಸಿ ಉಳಿದ ಐದು ವಿಷಯಗಳಲ್ಲಿ ಪ್ರತಿಶತ ಅಂಕ ಗಳಿಸಿ ಅಮೋಘ ಸಾಧನೆ ಮಾಡಿದ್ದಾನೆ.

ಪರೀಕ್ಷೆಗೆ ಹಾಜರಾದ ಶಾಲೆಯ ಎಲ್ಲ 294 ವಿದ್ಯಾರ್ಥಿಗಳು ಪಾಸಾಗಿದ್ದು, ಶಾಲೆಗೆ ಶೇ 100ರಷ್ಟು ಫಲಿತಾಂಶ ಬಂದಿದೆ ಎಂದು ಮುಖ್ಯ ಶಿಕ್ಷಕ ಮಹೇಶ ಮಹಾರಾಜ್‌, ಎಸ್‌ಎಸ್‌ಎಲ್‌ಸಿ ಸಂಯೋಜಕ ಪ್ರವೀಣ ಖಂಡಾಳೆ ತಿಳಿಸಿದ್ದಾರೆ.

ಅಜಯಕುಮಾರ ಸಂತೋಷ ಶೇ.99.20, ಶಿವಂ ಸತೀಶ ಶೇ 98.88, ಸ್ಫೂರ್ತಿ ಸಂತೋಷ ಶೇ 98.72, ಪ್ರಿಯಾ ಜಗದೀಶ ಶೇ 98.40, ಸೌರಭ ಚಂದ್ರಕಾಂತ ಶೇ 98.40, ಅಮರ ಚುಡಾಜಿ ಶೇ 98.24, ದರ್ಶನ ಸಂತೋಷಕುಮಾರ ಶೇ 98.08, ನಾಗೇಶ ರಾಜಶೇಖರ ಶೇ 97.92, ಅಭಿಷೇಕ ಶಿವಕುಮಾರ ಶೇ 97.76, ಸುಕನ್ಯಾ ಶಿವಪುತ್ರ ಶೇ 97.76, ಮಂದಾರಾ ಮಲ್ಲಿಕಾರ್ಜುನ ಶೇ 97.60, ಶರಣಬಸವ ಗುರುಲಿಂಗಯ್ಯ ಶೇ 97.60, ಸೌಮ್ಯ ಉಮಾಕಾಂತ ಸೇರಿದಂತೆ 137 ವಿದ್ಯಾರ್ಥಿಗಳು ಅಗ್ರಶೇಣಿಯಲ್ಲಿ ಪಾಸಾಗಿದ್ದಾರೆ.

ಕನ್ನಡ ವಿಷಯದಲ್ಲಿ 10, ಇಂಗ್ಲಿಷ್‌ 08, ಹಿಂದಿ 69, ಗಣಿತ 02, ವಿಜ್ಞಾನ 1, ಸಮಾಜ ವಿಜ್ಞಾನದಲ್ಲಿ 32 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 122 ವಿದ್ಯಾರ್ಥಿಗಳು ಪ್ರತಿಶತ ಅಂಕ ಪಡೆದು ಮೇರು ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು, ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಕಾರ್ಯದರ್ಶಿ ಮಹಾಲಿಂಗ ಸ್ವಾಮೀಜಿ, ಆಡಳಿತಾಧಿಕಾರಿ ಮೋಹನರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಮುಖ್ಯಶಿಕ್ಷಕ ಮಹೇಶ ಮಹಾರಾಜ್‌, ಎಸ್‌ಎಸ್‌ಎಲ್‌ಸಿ ಸಂಯೋಜಕ  ಪ್ರವೀಣ ಖಂಡಾಳೆ ಸೇರಿದಂತೆ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

ರ‍್ಯಾಂಕ್ ವಿದ್ಯಾರ್ಥಿ ಆನಂದ ಪವಾರ್‌ಗೆ ಶ್ರೀಮಠದಿಂದ ಸನ್ಮಾನ :

ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ 625ಕ್ಕೆ 624 ಅಂಕ ಪಡೆದ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ ವಿದ್ಯಾರ್ಥಿ ಆನಂದ ಪಾಂಡುರಂಗ ಅವರನ್ನು ಗುರುವಾರ ಭಾಲ್ಕಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್‌ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಸನ್ಮಾನಿಸಿದರು.

ಬಳಿಕ ಮಾತನಾಡಿದ ಅವರು, ʼಶೈಕ್ಷಣಿಕ ಸೇರಿ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಿದ್ದರೂ ಕೂಡ ಅದಕ್ಕೆ ನಿರಂತರ ಪರಿಶ್ರಮ ಬೇಕಾಗುತ್ತದೆ. ಗುಣಾತ್ಮಕ ಶಿಕ್ಷಣವೆಂದರೆ ಕೇವಲ ಅಂಕಗಳಿಕೆಯಲ್ಲ ಬದಲಾಗಿ ಮಗುವಿನ ದೈಹಿಕ, ಮಾನಸಿಕ, ಬೌದ್ಧಿಕ ಮತ್ತು ಸಾಮಾಜಿಕ ಬೆಳವಣಿಗೆಯನ್ನು ಖಚಿತಪಡಿಸುವ ಪ್ರಕ್ರಿಯೆಯಾಗಿದೆ. ಆ ನಿಟ್ಟಿನಲ್ಲಿ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಗುಣಾತ್ಮಕ ಮತ್ತು ಸಂಸ್ಕಾರಯುತ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆʼ ಎಂದು ಹೇಳಿದರು.

ವಿದ್ಯಾರ್ಥಿ ಆನಂದ ಪಾಂಡುರಂಗ 625ಕ್ಕೆ 624 ಅಂಕ ಪಡೆದು ರಾಜ್ಯಕ್ಕೆ 2ನೇ ರ‍್ಯಾಂಕ್ ಪಡೆದು ಗಡಿಜಿಲ್ಲೆ ಬೀದರ್‌ನ ಕೀರ್ತಿ ರಾಜ್ಯಕ್ಕೆ ಪಸರಿಸಿದ್ದಾನೆ. ಆ ವಿದ್ಯಾರ್ಥಿಯ ಮುಂದಿನ ಶೈಕ್ಷಣಿಕ ಜೀವನ ಉಜ್ವಲವಾಗಲಿ ಎಂದು ಹಾರೈಸಿದರು.

ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ʼನಮ್ಮ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಲ್ಲಿ ನೀತಿ, ಭಾಷಾ ಕೌಶಲ್ಯ ಮತ್ತು ಬೌದ್ಧಿಕ ಸಾಮರ್ಥ್ಯವನ್ನು ಬೆಳೆಸುವ ಶಿಕ್ಷಣ ನೀಡಲಾಗುತ್ತಿದೆ. ಆ ಕಾರಣಕ್ಕಾಗಿಯೇ ಉತ್ತಮ ಫಲಿತಾಂಶ ಲಭಿಸುತ್ತಿದೆ.
ಮಕ್ಕಳು ಉತ್ತಮ ಅಂಕ ಪಡೆದು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿದ್ದಾರೆʼ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯಗುರು ಮಹೇಶ ಮಹಾರಾಜ, ಎಸ್ಸೆಸ್ಸೆಲ್ಸಿ ಶಿಕ್ಷಣ ಸಂಯೋಜಕ ಪ್ರವೀಣ ಖಂಡಾಳೆ, ಮಹೇಶ ಕುಲಕರ್ಣಿ, ರಾಜು ಜುಬರೆ, ಬಾಬು ಬೆಲ್ದಾಳ ಇದ್ದರು.

ಎಸ್ಸೆಸ್ಸೆಲ್ಸಿ ಫಲಿತಾಂಶ: ಬೀದರ್ ಜಿಲ್ಲೆಯ ಸಾಧನೆಗೆ ಈಶ್ವರ ಖಂಡ್ರೆ ಅಭಿನಂದನೆ

ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬೀದರ್ ಜಿಲ್ಲೆಯ ಶೇ.92.17ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅಭಿನಂದನೆ ಸಲ್ಲಿಸಿದ್ದಾರೆ.

ಕಳೆದ ಬಾರಿ ಶೇ.73.35ರಷ್ಟು ಫಲಿತಾಂಶ ಪಡೆದಿದ್ದ ಬೀದರ್ ಈ ಬಾರಿ ಶೇ.92 ಕ್ಕಿಂತ ಹೆಚ್ಚು ಫಲಿತಾಂಶ ಪಡೆದಿದೆ, ಆದರೆ ಜಿಲ್ಲಾವಾರು ಫಲಿತಾಂಶದಲ್ಲಿ 28ನೇ ಸ್ಥಾನ ಪಡೆದಿದೆ. ಮುಂದಿನ ವರ್ಷ ಜಿಲ್ಲೆ ಪ್ರಥಮ ಹತ್ತು ಸ್ಥಾನಗಳಲ್ಲಿ ಒಂದು ಪಡೆಯುವ ರೀತಿಯಲ್ಲಿ ಶಿಕ್ಷಕರು ಬೋಧನೆ ಮಾಡಬೇಕು ಎಂದು ತಿಳಿಸಿದ್ದಾರೆ.

ಶೈಕ್ಷಣಿಕವಾಗಿ ಬೀದರ್ ಮೊದಲಿನಿಂದಲೂ ಹಿಂದುಳಿದಿದೆ. ಈ ಬಾರಿಯ ಸಾಧನೆ ತೃಪ್ತಿದಾಯಕವಾಗಿದೆ ಆದಾಗ್ಯೂ, ಇನ್ನೂ ಹೆಚ್ಚಿನ ಸಾಧನೆ ಆಗಬೇಕಿದ್ದು, ಎಲ್ಲ ಉಪನ್ಯಾಸಕರು, ಶಿಕ್ಷಕರು, ನಿಸ್ವಾರ್ಥವಾಗಿ ಮತ್ತು ಪ್ರಾಮಾಣಿಕವಾಗಿ ಶ್ರಮಿಸಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಮತ್ತು ಜಿಲ್ಲೆಗೆ ಉತ್ತಮ ಫಲಿತಾಂಶ ಬರುವಂತೆ ಮಾಡಬೇಕೆಂದು ತಿಳಿಸಿದ್ದಾರೆ.

ಇದನ್ನೂ ಓದಿ : SSLC Result 2026 | ಫಲಿತಾಂಶ-ಸ್ಥಾನದಲ್ಲಿ ಸುಧಾರಣೆ : 28ನೇ ಸ್ಥಾನಕ್ಕೇರಿದ ಬೀದರ್

ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು ನಿರಾಶೆಗೊಳ್ಳದೆ, ಪೂರಕ ಪರೀಕ್ಷೆಗೆ ಸಿದ್ಧತ ನಡೆಸಿ, ಉತ್ತೀರ್ಣರಾಗಿ ತಮ್ಮ ಮುಂದಿನ ಶಿಕ್ಷಣ ಮುಂದುವರಿಸಲು ಪ್ರಯತ್ನಿಸುವಂತೆ ಈಶ್ವರ ಖಂಡ್ರೆ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...