ಬೀದರ್‌ | ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆತ್ಮಹತ್ಯೆ: ಮಾನಸಿಕ ಕಿರುಕುಳದ ಆರೋಪ

Date:

ಬೀದರ್‌ನ ಶಾಲೆಯಲ್ಲಿ ಕಸ ಗುಡಿಸುವಂತೆ ಮುಖ್ಯ ಶಿಕ್ಷಕರು ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ನಗರದ ಪ್ರತಾಪ್ ನಗರದ ಬಳಿ ಬುಧವಾರ ಸಂಭವಿಸಿದೆ.

ಶಾಂತಿನಗರ ನಿವಾಸಿ ಸಮೀರ್ (15) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈತ ಸ್ಥಳೀಯ ಜನಸೇವಾ ಶಿಶು ಮಂದಿರ, ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಬೆಳಿಗ್ಗೆ ಎಂದಿನಂತೆ ಶಾಲೆಗೆ ತೆರಳಿದ್ದ ಸಮೀರ್, ದಿಢೀರನೆ ಶಾಲಾ ಕಟ್ಟಡದ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ. ತೀವ್ರ ರಕ್ತಸ್ರಾವದಿಂದಾಗಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

- Advertisement -

ಘಟನೆ ನಡೆದ ತಕ್ಷಣ ಶಾಲೆಯ ಆಡಳಿತ ಮಂಡಳಿಯು ಪೋಷಕರಿಗೆ ಯಾವುದೇ ಮಾಹಿತಿ ನೀಡದೆ, ಮೃತದೇಹವನ್ನು ನೇರವಾಗಿ ಬ್ರಿಮ್ಸ್ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿರುವುದು ಸಾರ್ವಜನಿಕರಲ್ಲಿ ಹಾಗೂ ಪೋಷಕರಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಮೃತ ವಿದ್ಯಾರ್ಥಿಯ ಪೋಷಕರು ಶಾಲೆಯ ಮೇಲೆ ಗಂಭೀರ ಆರೋಪ ಮಾಡಿದ್ದು, “ನನ್ನ ಮಗ ಒಂದನೇ ತರಗತಿಯಿಂದಲೂ ಇದೇ ಶಾಲೆಯಲ್ಲಿ ಓದುತ್ತಿದ್ದ. ಇತ್ತೀಚೆಗೆ ಹೆಚ್ಚಿನ ಅಂಕ ಗಳಿಸಬೇಕು ಎಂದು ಒತ್ತಡ ಹೇರುವುದರ ಜೊತೆಗೆ, ಶಾಲೆಯಲ್ಲಿ ಕಸ ಗುಡಿಸುವ ಕೆಲಸ ಮಾಡುವಂತೆ ಮುಖ್ಯ ಶಿಕ್ಷಕರು ಆತನಿಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡುತ್ತಿದ್ದರು. ಶಿಕ್ಷಕರ ಈ ವರ್ತನೆಯಿಂದ ಬೇಸತ್ತೇ ನನ್ನ ಮಗ ಪ್ರಾಣ ಕಳೆದುಕೊಂಡಿದ್ದಾನೆ. ಮಗ ಸತ್ತ ವಿಷಯವನ್ನೂ ನಮಗೆ ತಿಳಿಸದೆ ಆಸ್ಪತ್ರೆಗೆ ಸಾಗಿಸಿರುವುದರ ಹಿಂದೆ ಶಾಲಾ ಮಂಡಳಿಯ ಸಂಚು ಅಡಗಿದೆ.” ಎಂದಿದ್ದಾರೆ.

ಪೋಷಕರ ಆರೋಪವನ್ನು ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. “ವಿದ್ಯಾರ್ಥಿಗೆ ಮುಂಬರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವಂತೆ ಕೇವಲ ಓದಲು ಬುದ್ಧಿವಾದ ಹೇಳಿದ್ದೇವೆಯೇ ಹೊರತು, ಯಾವುದೇ ರೀತಿಯ ಕಿರುಕುಳ ನೀಡಿಲ್ಲ. ಕಸ ಗುಡಿಸುವ ಕೆಲಸ ಮಾಡಿಸಿರುವ ಆರೋಪ ಆಧಾರರಹಿತ” ಎಂದು ಶಾಲೆಯ ಮುಖ್ಯಸ್ಥರು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ವಿಷಯ ತಿಳಿಯುತ್ತಿದ್ದಂತೆ ಬ್ರಿಮ್ಸ್ ಆಸ್ಪತ್ರೆ ಹಾಗೂ ಶಾಲಾ ಆವರಣಕ್ಕೆ ಧಾವಿಸಿದ ಪೋಷಕರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಭೇಟಿ ನೀಡಿದ ನ್ಯೂ ಟೌನ್ ಪೊಲೀಸ್ ಠಾಣೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಪೋಷಕರ ದೂರಿನ ಅನ್ವಯ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...