ಬೀದರ್‌ | ಏ.11, 12ರಂದು ಪತ್ರಕರ್ತರ ರಾಜ್ಯ ಸಮ್ಮೇಳನ : ಗಮನ ಸೆಳೆದ ಬೈಕ್ ರ‍್ಯಾಲಿ

Date:

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನ ಪ್ರಚಾರಾರ್ಥವಾಗಿ ಸಮ್ಮೇಳನ ಪ್ರಚಾರ ಸಮಿತಿ ವತಿಯಿಂದ ನಗರದಲ್ಲಿ ಗುರುವಾರ ಬೈಕ್ ರ‍್ಯಾಲಿ ನಡೆಯಿತು. ಜಿಲ್ಲೆಯ ವಿವಿಧೆಡೆಯ ಪತ್ರಕರ್ತರು ಹೆಲ್ಮೆಟ್ ಧರಿಸಿ ಉತ್ಸಾಹದಿಂದ ರ‍್ಯಾಲಿಯಲ್ಲಿ ಪಾಲ್ಗೊಂಡರು.

- Advertisement -

ಬಸವೇಶ್ವರ ವೃತ್ತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಆಗಸದಲ್ಲಿ ಬಲೂನ್ ಹಾರಿ ಬಿಡುವ ಮೂಲಕ ರ‍್ಯಾಲಿಗೆ ಚಾಲನೆ ನೀಡಿದರು. ಬೆಂಗಳೂರಿನ ಬಸವ ಗಂಗೋತ್ರಿಯ ಚನ್ನಬಸವಾನಂದ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಬೈಕ್ ರ‍್ಯಾಲಿಯು ನಗರದ ಬಸವೇಶ್ವರ ವೃತ್ತದಿಂದ ಮಹಾವೀರ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತ, ಹರಳಯ್ಯ ವೃತ್ತ, ಗುದಗೆ ಆಸ್ಪತ್ರೆ ಕ್ರಾಸ್, ರೋಟರಿ ಕನ್ನಡಾಂಬೆ ವೃತ್ತ, ಮಡಿವಾಳ ಮಾಚಿದೇವ ವೃತ್ತ, ಕೇಂದ್ರ ಬಸ್ ನಿಲ್ದಾಣ, ಶಿವನಗರ ಮಾರ್ಗವಾಗಿ ಹಾಯ್ದು ಪ್ರತಾಪನಗರದ ಪತ್ರಿಕಾ ಭವನಕ್ಕೆ ತಲುಪಿ ಸಮಾರೋಪಗೊಂಡಿತು.

ಬೈಕ್‍ಗಳಿಗೆ ರ‍್ಯಾಲಿ ಸ್ಟಿಕರ್ ಅಂಟಿಸಲಾಗಿತ್ತು. ರ‍್ಯಾಲಿಯುದ್ದಕ್ಕೂ ಪತ್ರಕರ್ತರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಜಯವಾಗಲಿ, ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಜಯವಾಗಲಿ ಎಂದು ಘೋಷಣೆ ಹಾಕಿದರು.

WhatsApp Image 2026 04 09 at 4.44.25 PM

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ಜಿಲ್ಲಾ ಘಟಕದ ಅಧ್ಯಕ್ಷ ಆನಂದ ದೇವಪ್ಪ, ಜಿಲ್ಲಾ ಅಡಾಕ್ ಸಮಿತಿ ಸದಸ್ಯರಾದ ಅಪ್ಪಾರಾವ್ ಸೌದಿ, ಶಿವಕುಮಾರ ಸ್ವಾಮಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ನಾಗೇಶ ಪ್ರಭಾ, ಸಹ ಸಂಚಾಲಕ ಮಲ್ಲಿಕಾರ್ಜುನ ನಾಗರಾಳ, ಸದಸ್ಯರಾದ ಮಹಾರುದ್ರ ಡಾಕುಳಗಿ, ಶಶಿಕಾಂತ ಭಗೋಜಿ, ಹಿರಿಯ ಪತ್ರಕರ್ತರಾದ ಶಿವಶರಣಪ್ಪ ವಾಲಿ, ಗಂಧರ್ವ ಸೇನಾ, ಅಶೋಕಕುಮಾರ ಕರಂಜಿ, ಮಾಳಪ್ಪ ಅಡಸಾರೆ, ದೀಪಕ್ ವಾಲಿ, ಸಿದ್ರಾಮಯ್ಯ ಸ್ವಾಮಿ, ಶಶಿಕಾಂತ ಶೆಂಬೆಳ್ಳಿ, ರೇವಣಸಿದ್ದಪ್ಪ ಪಾಟೀಲ, ವಿಜಯಕುಮಾರ ಬೆಲ್ದೆ, ಶಶಿಕಾಂತ ಬಂಬುಳಗೆ, ಓಂಕಾರ ಮಠಪತಿ, ರಾಜೇಶ್ ಮುಗಟೆ, ಸಂಜುಕುಮಾರ ಬುಕ್ಕಾ, ಪೃಥ್ವಿರಾಜ್ ಎಸ್, ಸುನೀಲ್ ಕುಲಕರ್ಣಿ, ವಿಜಯಕುಮಾರ ಸೋನಾರೆ, ಗೋಪಿಚಂದ್ ತಾಂದಳೆ, ಸಂತೋಷ್ ಬಿ.ಜಿ. ಪಾಟೀಲ, ಶ್ರೀಕಾಂತ ಪಾಟೀಲ, ಪ್ರದೀಪ್ ಬಿರಾದಾರ, ರಾಜಕುಮಾರ ಮಡಕಿ, ಸುನೀಲಕುಮಾರ ಹೊನ್ನಾಳೆ, ಜಾರ್ಜ್ ಫರ್ನಾಂಡೀಸ್, ಶರದ್ ಘಂಟೆ, ಭಾನುದಾಸ ಪಾಟೀಲ, ಮಾಣಿಕೇಶ್ ಪಾಟೀಲ, ಮುಜಾಹೀದ್, ಬಿಂದುಸಾರ, ಜಯಕುಮಾರ, ಅಂಬರೀಷ್, ಶ್ರಾವಣಕುಮಾರ, ಲೋಕೇಶ್ ಬಿರಾದಾರ, ಮಹೇಶ್ ಸಜ್ಜನ್, ಪರಶುರಾಮ ಹೊಸಮನಿ, ಕೀರ್ತಿ ಸೇನಾ, ಪೂಜಾ ಪಿಟ್ಲೆ, ಅಶ್ವಿನಿ ರೆಡ್ಡಿ, ಸುಷ್ಮಿತಾ ಮೋರೆ, ಸುಧಾರಾಣಿ ಜೆ., ಪ್ರಿಯಂಕಾ ಶ್ರೀಗುರು, ಸೋನಿಕಾ, ವಿಜೇತಾ ಮತ್ತಿತರರು ಪಾಲ್ಗೊಂಡಿದ್ದರು.

ಇದಕ್ಕೂ ಮುನ್ನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆನಂದ ದೇವಪ್ಪ ರ‍್ಯಾಲಿ ಉದ್ಘಾಟನೆಗೆ ಬಂದ ಅತಿಥಿಗಳಿಗೆ ಗುಲಾಬಿ ಹೂವು ಹಾಗೂ ಪೆನ್ನು ಕೊಟ್ಟು ಸ್ವಾಗತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಬೀದರ್‌ | ನ.28, 29ರಂದು ಅನುಭವ ಮಂಟಪ ಉತ್ಸವ : ತುಮಕೂರು ಸಿದ್ಧಗಂಗೆ ಶ್ರೀಗಳಿಗೆ ಆಹ್ವಾನ

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28...