ಬೀದರ್‌ | ರಾಹುಲ್ ಗಾಂಧಿ ವಿರುದ್ಧದ ಹೇಳಿಕೆ: ಶಾಸಕ ಯಶ್ಪಾಲ್ ಮೇಲೆ ಎಫ್‌ಐಆರ್ ದಾಖಲಿಸಲು ಆಗ್ರಹ

Date:

ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ಅವರು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹಾಗೂ ಬೆದರಿಕೆ ಸ್ವರೂಪದ ಹೇಳಿಕೆ ನೀಡಿರುವುದನ್ನು ಖಂಡಿಸಿ, ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ, ಸಂವಿಧಾನ ಸಂರಕ್ಷಣಾ ಸಮಿತಿ ಹಾಗೂ ವಿವಿಧ ದಲಿತಪರ, ಅಹಿಂದ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿದರು.

- Advertisement -

ಈ ಕುರಿತು ಪ್ರಮುಖರು ಶುಕ್ರವಾರ ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರಿಗೆ ಭೇಟಿಯಾಗಿ ದೂರು ಪ್ರತಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಜುಲೈ 26ರಂದು ಉಡುಪಿ ನಗರದ ಬಸ್ ನಿಲ್ದಾಣದ ಸಮೀಪ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಶಾಸಕ ಯಶ್ಪಾಲ್ ಸುವರ್ಣ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದು, ಅವರ ಕುಟುಂಬದ ವಿರುದ್ಧ ಬೆದರಿಕೆ ಹಾಕುವ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಇಂತಹ ಹೇಳಿಕೆಗಳು ಭಾರತದ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು, ಸಮಾಜದಲ್ಲಿ ಅಶಾಂತಿ ಹಾಗೂ ದ್ವೇಷದ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಬದುಕುವ ಹಕ್ಕು ಹಾಗೂ ಅಭಿವ್ಯಕ್ತಿಯ ಸ್ವಾತಂತ್ರ್ಯವನ್ನು ನೀಡಿದ್ದು, ಯಾವುದೇ ವ್ಯಕ್ತಿಯ ವಿರುದ್ಧ ಕೊಲೆ ಬೆದರಿಕೆ ಅಥವಾ ಪ್ರಚೋದನಕಾರಿ ಹೇಳಿಕೆ ನೀಡುವುದು ಕಾನೂನುಬಾಹಿರವಾಗಿದೆ. ಆದ್ದರಿಂದ ಸಂಬಂಧಪಟ್ಟವರ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ : ಬೀದರ್ | ಎಸ್‌ಐಆರ್‌ ಕರಡು ಪಟ್ಟಿಯಿಂದ 1.66 ಲಕ್ಷ ಮತದಾರರು ಡಿಲೀಟ್: ನಿಮ್ಮ ಹೆಸರು ಮತ ಪಟ್ಟಿಯಲ್ಲಿ ಭದ್ರವಾಗಿದೆಯೇ?

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೋಡೆ, ಬೀದರ್ ದಕ್ಷಿಣ ತಾಲೂಕು ಕಾಂಗ್ರೆಸ್ ಅಧ್ಯಕ್ಷ ನರಸಪ್ಪ ಜಾನಕನೊರ್, ಸಂವಿಧಾನ ಸಂರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಅನೀಲಕುಮಾರ ಬೆಲ್ದಾರ್ ಸೇರಿದಂತೆ ಮುಖಂಡರಾದ ಗೋವರ್ಧನ್ ರಾಠೋಡ, ತಾನಾಜಿ ಸಗರ, ರಾಜಕುಮಾರ ಟಿಳ್ಳೆಕರ್, ತುಕಾರಾಮ ಚಿಮಕೋಡೆ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಕೊಪ್ಪಳ ಜಿಲ್ಲೆಯ ಇಬ್ಬರು ಜಾನಪದ ಕಲಾವಿದರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ

ಕನ್ನಡ ನಾಡು, ನುಡಿ ಹಾಗೂ ಜಾನಪದ ಕಲೆಯ ಉಳಿವು ಮತ್ತು ಬೆಳವಣಿಗೆಗೆ...

ಚಿಟಗುಪ್ಪ | ಆರೋಗ್ಯವಂತ ಬದುಕಿಗೆ ಯೋಗವೇ ಮದ್ದು: ಚಂದ್ರಕಾಂತ ಗಂಗಶೆಟ್ಟಿ

ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮತೋಲನ ಕಾಪಾಡುವಲ್ಲಿ ಯೋಗಾಭ್ಯಾಸ ಮಹತ್ವದ...

‘ಕದನ ವಿರಾಮ ಎಂಬುದು ಬರಿ ಕಣ್ಣೊರೆಸುವ ತಂತ್ರ’; ಇಸ್ರೇಲ್ ವಿರುದ್ಧ ವಿಶ್ವಸಂಸ್ಥೆ ಆಕ್ರೋಶ

ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದಲ್ಲಿ ಇಸ್ರೇಲ್ ಪಡೆಗಳು ನಡೆಸುತ್ತಿರುವ ಹಿಂಸಾಚಾರ ಮತ್ತು ಮಾನವಹಕ್ಕುಗಳ...

ಸೋಮನಾಥ ದೇಗುಲದ ಸುತ್ತ ಮಾಂಸಾಹಾರ ನಿಷೇಧ ಮುಂದುವರಿಕೆ; ಏಕಸದಸ್ಯ ಪೀಠದ ಆದೇಶಕ್ಕೆ ಗುಜರಾತ್ ಹೈಕೋರ್ಟ್ ತಡೆ

ಗುಜರಾತ್‌ನ ಪ್ರಸಿದ್ಧ ಸೋಮನಾಥ ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಂಸಾಹಾರ ತಯಾರಿಕೆ, ಮಾರಾಟ...