ಬೀದರ್‌ | ಆಹಾರ ವಿತರಣೆಯಲ್ಲಿ ಅವ್ಯವಸ್ಥೆ ಕಂಡಬಂದರೆ ನಿರ್ದಾಕ್ಷಿಣ್ಯ ಕ್ರಮ : ಡಾ.ಎಚ್.ಕೃಷ್ಣ

Date:

ಜಿಲ್ಲೆಯಲ್ಲಿ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಅವ್ಯವಸ್ಥೆ ಕಂಡು ಬಂದಲ್ಲಿ ಆಯಾ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುಲಾಗುವುದೆಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಹೆಚ್.ಕೃಷ್ಣ ಇಂದಿಲ್ಲಿ ತಿಳಿಸಿದರು.

- Advertisement -

ಬೀದರ ಜಿಲ್ಲೆಯಲ್ಲಿ 3 ದಿನಗಳ ಕಾಲ ಅನಿರೀಕ್ಷಿತ ಪ್ರವಾಸ ಕೈಗೊಂಡಿರುವ ಅವರು ಜುಲೈ 15 ರಂದು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ  ಜುಲೈ 16 ರಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಆಯೋಗವು ನಾಲ್ಕು ಜನ ಸದಸ್ಯರ ತಂಡದೊಂದಿಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಹಮ್ಮಿಕೊಂಡಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013ರ ಅನ್ವಯ ಆಹಾರ ಪ್ರತಿಯೊಬ್ಬ ಬಡವರಿಗೆ ನಿರ್ಗತಿಕರಿಗೆ ಸರಕಾರವು ದುರ್ಬಲರಿಗೆ, ಮಕ್ಕಳಿಗೆ ಮಹಿಳೆಯರಿಗೆ ಆಹಾರ ಒದಗಿಸುವುದು ಮೂಲಭೂತ ಕರ್ತವ್ಯ, ಪ್ರತಿಯೊಬ್ಬರಿಗೂ ಆಹಾರದ ಹಕ್ಕು ಇದೆ ಎಂದರು.

ಜಿಲ್ಲೆಯ ವಿವಿಧ ತಾಲೂಕುಗಳ ನ್ಯಾಯಬೆಲೆ ಅಂಗಡಿ, ಆಹಾರಧಾನ್ಯ ಸಗಟು ಮಳಿಗೆ, ಅಂಗನವಾಡಿ ಕೇಂದ್ರಗಳು, ಎಂ.ಎಸ್.ಪಿ.ಟಿ.ಸಿ ಶಾಲೆಗಳಲ್ಲಿ ಮಧ್ಯಾಹ್ನದ ಊಟ, ಆಸ್ಪತ್ರೆಗಳಲ್ಲಿ ಎಸ್.ಆರ್.ಸಿ ಘಟಕ, ವಿವಿಧ ಇಲಾಖೆಗಳ ಹಾಸ್ಪೆಲ್‌ಗಳಲ್ಲಿ ಆಹಾರ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಆಹಾರ ಸಂಬಂಧ ಎಲ್ಲ ಯೋಜನೆಗಳು ಸರಿಯಾಗಿ ಅನುಷ್ಠಾನ ಆಗುತ್ತಿವೆಯೆ ಎಂಬುದನ್ನು ಪರಿಶೀಲಿಸಲು ಈ ಅನಿರೀಕ್ಷಿತ ಪ್ರವಾಸ ಹಮ್ಮಿಕೊಳ್ಳಲಾಗಿದೆ. ತಾವು ಜುಲೈ 17ರ ವರೆಗೆ ಜಿಲ್ಲೆಯಲ್ಲಿದ್ದು, ಸಾರ್ವಜನಿಕರು ಆಹಾರ ಸಂಬಂಧಿತ ಯಾವುದಾದುರು ಆಹಾವಾಲುಗಳು ಇದ್ದಲ್ಲಿ ಸಾರ್ವಜನಿಕರು ನೇರವಾಗಿ ಮೊಬೈಲ್ ನಂಬರ್ 9448466099 ಹಾಗೂ 9945037681ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 150 ಪೆಟ್ರೋಲ್ ಬಂಕ್‌ಗಳಿವೆ ಎಲ್ಲ ಕಡೆ ನೀರು, ಗಾಳಿ ಹಾಗೂ ಶೌಚಾಲಯ ಕಡ್ಡಾಯವಾಗಿ ಉಚಿತವಾಗಿ ಲಭ್ಯವಾಗಬೇಕು. ಅಳತೆ ಮಾಪನ ಇಲಾಖೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಒಟ್ಟು 14 ಇಲಾಖೆಗಳು ಆಯೋಗದ ವ್ಯಾಪ್ತಿಗೆ ಒಳಪಡುತ್ತವೆ. ಗೋದಾಮುಗಳಿಂದ ಅಕ್ಕಿ ಕಳ್ಳ ಸಾಗಾಟಣೆ ನ್ಯಾಯಬೆಲೆ ಅಂಗಡಿಗಳಲ್ಲಿ ಅಸಮರ್ಪಕ ಆಹಾರ ವಿತರಣೆ, ಅಂಗನವಾಡಿ ಅಥವಾ  ಹಾಸ್ಟೇಲ್ ಗಳಲ್ಲಿ ಅಸಮರ್ಪಕ ಆಹಾರ ವಿತರಣೆಯಂತಹ ದೂರುಗಳು ಇದ್ದಲ್ಲಿ ಸಾರ್ವಜನಿಕರು ನಮ್ಮ ಮೊಬೈಲ್‌ಗೆ ಕರೆ ಮಾಡಬಹುದು. ಗೌಪ್ಯವಾಗಿ ಅಹವಾಲು ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಮುಗಿಲು ಸೇರಿದ ಮಳೆ, ಒಣಗುತ್ತಿರುವ ಬೆಳೆ; ಬಯಲು ಸೀಮೆಯಲ್ಲಿ ಬರದ ಕಾರ್ಮೋಡ!

ಪತ್ರಿಕಾಗೋಷ್ಠಿಯಲ್ಲಿ ಆಯೋಗದ ಸದಸ್ಯರಾದ ಮಾರುತಿ ದೊಡ್ಡಲಿಂಗಣ್ಣವರ ಲಿಂಗರಾಜ ಕೋಟೆ, ಸುಮಂತ ರಾವ್, ಕೆ.ಎಸ್.ವಿಜಯಲಕ್ಷ್ಮೀ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...