ಬೀದರ್‌ | ಬ್ರಿಮ್ಸ್‌ ಅವ್ಯವಸ್ಥೆ ಸರಿಪಡಿಸದಿದ್ದರೆ ಹೋರಾಟ ಅನಿವಾರ್ಯ : ಸ್ವಾಮಿದಾಸ

Date:

ರೋಗಿಗಳ ಚಿಕಿತ್ಸೆಗಾಗಿ ಸರ್ಕಾರ ಕೋಟ್ಯಂತರ ಹಣ ವೆಚ್ಚದಿಂದ ಬ್ರಿಮ್ಸ್‌ನಲ್ಲಿ ವಿವಿಧ ಉಪಕರಣಗಳನ್ನು ನೀಡಿದೆ. ಆದರೆ
ಅವುಗಳ ಸದುಪಯೋಗ ಆಗದಿರುವುದು ದುರಂತ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಕ್ರಮ
ಕೈಗೊಳ್ಳಬೇಕೆಂದು ಬಹುಜನ ಸೇವಾ ಸಮಿತಿ ರಾಜ್ಯ ಸಂಚಾಲಕ ಸ್ವಾಮಿದಾಸ ಕೆಂಪೆನೋರ್ ತಿಳಿಸಿದರು.

- Advertisement -

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ʼಜಿಲ್ಲಾ ಉಸ್ತುವಾರಿ ಸಚಿವರು ಕ್ಯಾಥ್‌ಲ್ಯಾಬ್ ಉದ್ಘಾಟಿಸಿ 1 ವರ್ಷ ಕಳೆದರೂ ಜನತೆಗೆ ಅದರ ಉಪಯೋಗ ಆಗುತ್ತಿಲ್ಲ. ಡಯಾಲಿಸಿಸ್ ವಿಭಾಗ ಸರಿಯಾಗಿ ನಡೆಯುತ್ತಿಲ್ಲ. ಈ ನಡುವೆ ಲಕ್ಷಾಂತರ ಮೌಲ್ಯದ ಎಸಿ ಮತ್ತು ಕಾಪರ್ ತಂತಿ ಕಳವು ಆಗಿದೆ. ಇದನ್ನೆಲ್ಲ ಗಮನಿಸಿದರೆ ಬ್ರಿಮ್ಸ್ ಆಸ್ಪತ್ರೆಯ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ’ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ಹೆಚ್ಚಿನ ಚಿಕಿತ್ಸೆಗಾಗಿ ನೆರೆಯ ಹೈದರಾಬಾದ, ಸೋಲಾಪುರ ಕಡೆಗೆ ಹೋಗಬಾರದು. ರೋಗಿಗಳ ಸಮಯ ಮತ್ತು ಹಣದ ಉಳಿತಾಯಗಾಗಿ ಬೀದರ್‌ನ ಬ್ರಿಮ್ಸ್ ನಲ್ಲಿ ಕ್ಯಾಥ್‌ಲ್ಯಾಬ್ ಮತ್ತು ಡಯಾಲಿಸಿಸ್ ಮತ್ತು ಇನ್ನಿತರ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳುವ ಜನಪ್ರತಿನಿಧಿಗಳ ಮಾತು ಭಾಷಣಕ್ಕೆ ಮಾತ್ರ ಸೀಮಿತವಾಯಿತೇ ಎಂದು ಸ್ವಾಮಿದಾಸ್ ಪ್ರಶ್ನಿಸಿದರು.

ಈಗಿರುವ ಬ್ರಿಮ್ಸ್ ನಿರ್ದೇಶಕಿ ಡಾ.ಶಾಂತಲಾ ಕೌಜಲಗಿಗೆ ಕೈಬಿಟ್ಟು ನುರಿತ ಅನುಭವಿ ನಿರ್ದೇಶಕರನ್ನು ನೇಮಕ ಮಾಡಬೇಕು. ತುರ್ತಾಗಿ ಕ್ಯಾಥ್‌ಲ್ಯಾಬ್ ಆರಂಭಿಸಬೇಕು. ವೈದ್ಯರು ಆಸ್ಪತ್ರೆಯಲ್ಲಿಯೇ ಠಿಕಾಣಿ ಹೂಡಿ ಉತ್ತಮ ಸೇವೆ ಒದಗಿಸಬೇಕು. ಅನಧಿಕೃತವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜೈಸಿಂಗ್ ಅವರನ್ನು ವಜಾ ಮಾಡಬೇಕು. ಎಸಿ ಮತ್ತು ಕಾಪರ್ ತಂತಿ ಕಳವು ಪ್ರಕರಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಹಲವು ವರ್ಷಗಳಿಂದ ಒಂದೇ ಕಡೆ ಠಿಕಾಣಿ
ಹೂಡಿರುವ ಪ್ರಕಾಶ ಮಡಿವಾಳ ಅವರ ವರ್ಗಾವಣೆ ಮಾಡಬೇಕು. ಬ್ರಿಮ್ಸ್‌ ನ ಎಲ್ಲಾ ಸಿಸಿ ಕ್ಯಾಮೆರಾ ಚಾಲ್ತಿಯಲ್ಲಿಡಬೇಕುʼ ಎಂದು ಒತ್ತಾಯಿಸಿದರು.

ಬಹುಜನ ಸೇವಾ ಸಮಿತಿ ಜಿಲ್ಲಾ ಉಪಾಧ್ಯಕ್ಷ ಶ್ರೀನಾಥ ದರ್ಗಾ ಮಾತನಾಡಿ, ʼಕಡಿಮೆ ಗುಣಮಟ್ಟದ ಸಲೈನ್ ಬಳಸಿದ್ದಕ್ಕಾಗಿ ಇತ್ತಿಚೆಗೆ 7 ಜನ ಮಕ್ಕಳಿಗೆ ರಿಯಾಕ್ಷನ್ ಆಗಿ ಅಸ್ವಸ್ಥಗೊಂಡಿದ್ದರು. ಆದ್ದರಿಂದ ಉತ್ತಮ ಗುಣಮಟ್ಟದ ಸಲೈನ್ ಮತ್ತು ಔಷಧಿಗಳನ್ನು ವೈದ್ಯರು ಬಳಸಬೇಕುʼ ಎಂದು ತಿಳಿಸಿದರು.

15 ದಿನಗಳ ಒಳಗಾಗಿ ಬ್ರಿಮ್ಸ್‌ ಅವ್ಯವಸ್ಥೆ ಸರಿಪಡಿಸಿ, ಬೇಡಿಕೆ ಈಡೇರಿಸದಿದ್ದರೆ ಬ್ರಿಮ್ಸ್ ಆಸ್ಪತ್ರೆ ಮುಂದೆ ಹೋರಾಟ ಮಾಡಲಾಗುವುದು ಎಂದು ಸ್ವಾಮಿದಾಸ ತಿಳಿಸಿದರು.

ಇದನ್ನೂ ಓದಿ : ಔರಾದ್‌ | ಎಸ್ಸೆಸ್ಸೆಲ್ಸಿ, ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಇದೇ ವೇಳೆ ಸಮಿತಿಯ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಕಮಲ ಹಾಸನ್, ಕ.ಕ.ನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ಡಾ. ಜಾನಿಶ್ ಇಸ್ಲಾಂಪುರ, ಸೇನೆಯ ಜಿಲ್ಲಾ ಉಪಾಧ್ಯಕ್ಷ ಡಾನಿಯಲ್ ಮಂಗಲಪೇಟ್, ಪ್ರಮುಖರಾದ ನಾಗನಾಥ ಭೂರೆ, ನಾಗಣ್ಣ ಕೌಠಾ, ಅಮಿತ್ ಸ್ಟಾಲಿನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಕ್ಕೀಡಾಗಿ ಜೈಲು ಸೇರಿದ್ದ ನಿವೃತ್ತ ನ್ಯಾಯಮೂರ್ತಿ ಸಿ.ಎಸ್ ಕರ್ಣನ್ ನಿಧನ

ಕಲ್ಕತ್ತಾ ಹೈಕೋರ್ಟ್‌ ನ್ಯಾಯಮೂರ್ತಿಯಾಗಿದ್ದ ಸಂದರ್ಭದಲ್ಲಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾಗಿದ್ದ...

ಅಮೆರಿಕ-ಭಾರತ ವ್ಯಾಪಾರ ಒಪ್ಪಂದ: ಸುಂಕದಲ್ಲಿ ಭಾರತಕ್ಕೆ ವಿಶೇಷ ರಿಯಾಯಿತಿ ನೀಡಲಿದೆ ಅಮೆರಿಕ; ಕೇಂದ್ರ ಸರ್ಕಾರ ಹೇಳಿಕೆ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ ಬೆಲೆ 20,000 ಗಡಿ ದಾಟುವ ಆತಂಕ

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ ಕೇಂದ್ರ!

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ...