ಬೀದರ್‌ | ವಿದ್ಯಾರ್ಥಿಗಳು ಕಲೆ, ಸಂಗೀತ ಹವ್ಯಾಸ ಬೆಳೆಸಿಕೊಳ್ಳಬೇಕು: ಸಿದ್ರಾಮ ಸಿಂಧೆ

Date:

ವಿದ್ಯಾರ್ಥಿಗಳಲ್ಲಿ ಅಡಗಿರುವ ಸಂಗೀತ ಹಾಗೂ ಕಲಾ ಪ್ರತಿಭೆಯನ್ನು ಗುರುತಿಸಿ, ಅವುಗಳನ್ನು ಬೆಳೆಸುವ ಉದ್ದೇಶದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸುಗಮ ಸಂಗೀತ ಕಲಾ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಹೇಳಿದರು.

- Advertisement -

ಬೀದರ್ ಸಮೀಪದ ಮನ್ನಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 2026–27ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸುಗಮ ಸಂಗೀತ ಕಲಾ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

“ಸಂಗೀತವು ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿದ್ದು, ಕಲೆಯ ಮೂಲಕ ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ ಹಾಗೂ ಸೃಜನಶೀಲತೆ ಬೆಳೆಯುತ್ತದೆ. ತರಬೇತಿಯಲ್ಲಿ ಭಾಗವಹಿಸಿರುವ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಆಸಕ್ತಿಯಿಂದ ಕಲಿತು ತಮ್ಮ ಪ್ರತಿಭೆಯನ್ನು ಮತ್ತಷ್ಟು ವಿಕಸನಗೊಳಿಸಬೇಕು” ಎಂದು ಕರೆ ನೀಡಿದರು.

ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯ ವಿಜಯಕುಮಾರ ಸೋನಾರೆ ಮಾತನಾಡಿ, “ಇಂದಿನ ಮಕ್ಕಳು ಅನವಶ್ಯಕವಾಗಿ ಮೊಬೈಲ್ ಬಳಕೆಯಲ್ಲಿ ಸಮಯ ವ್ಯರ್ಥ ಮಾಡದೆ ಶಿಕ್ಷಣ ಮತ್ತು ಪ್ರತಿಭೆ ಬೆಳವಣಿಗೆಯ ಕಡೆ ಹೆಚ್ಚಿನ ಗಮನ ಹರಿಸಬೇಕು” ಎಂದು ಸಲಹೆ ನೀಡಿದರು.

“ಮೊಬೈಲ್ ಅನ್ನು ಅಗತ್ಯವಿದ್ದಾಗ ಮಾತ್ರ ಬಳಸಬೇಕು. ವಿದ್ಯಾರ್ಥಿಗಳು ಜೀವನದಲ್ಲಿ ದೊಡ್ಡ ಗುರಿ ಹಾಗೂ ಕನಸುಗಳನ್ನು ಹೊಂದಿ ನಿರಂತರ ಶ್ರಮಿಸಿದರೆ ಯಶಸ್ಸು ಸಾಧಿಸಬಹುದು. ಸಂಗೀತ ಸೇರಿದಂತೆ ವಿವಿಧ ಕಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು” ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ತರಬೇತಿ ಗುರು ರಮೇಶ ಅವರು ಸುಗಮ ಸಂಗೀತ ತರಬೇತಿ ನೀಡುತ್ತಿದ್ದು, ಈ ತರಬೇತಿ 2026ರ ಆಗಸ್ಟ್ 1ರಿಂದ 2027ರ ಜನವರಿ 30ರವರೆಗೆ ನಡೆಯಲಿದೆ. ತೇಜಶ್ವಿನಿ, ಶ್ರೀನಿಧಿ, ಅಂಕಿತಾ, ಐಶ್ವರ್ಯ, ಪ್ರಿಯಾ, ಗೌತಮಿ, ಅಕ್ಷಿತಾ, ಜೀವಿಕಾ, ವೈಷ್ಣವಿ ಎಸ್., ದೀಕ್ಷಿತಾ, ಸಮಾರಿಯಾ, ಸೃಷ್ಟಿ ಹಾಗೂ ಎಸ್ತರ್ ರಾಣಿ ಸೇರಿದಂತೆ ವಿದ್ಯಾರ್ಥಿನಿಯರು ತರಬೇತಿಯಲ್ಲಿ ಭಾಗವಹಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಸ್ವಾತಂತ್ರ್ಯ ದಿನಾಚರಣೆ ಅದ್ದೂರಿ ಆಚರಣೆಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪಾಲಕರಾದ ಮಹಾಂತಪ್ಪ ದೊಡ್ಡಮನಿ ವಹಿಸಿದ್ದರು. ಗೋಪಾಲ ರಾಠೋಡ್ ಹಾಗೂ ದೇವಿದಾಸ್ ಜೋಶಿ ಮಾತನಾಡಿದರು. ಗಾಯಕ ದಿಲೀಪ ಕಾಡವಾದ ಸೇರಿದಂತೆ ಗಣ್ಯರು ಹಾಗೂ ಶಾಲೆಯ ಶಿಕ್ಷಕರಾದ ಶ್ರೀಕಾಂತ, ಬಸಪ್ಪಾ, ರಜನಿಕಾಂತ, ಸವಿತಾ, ಸಪನಾ, ವಿನೋದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಗೀತಾ ಪಾಟೀಲ್ ಕಾರ್ಯಕ್ರಮ ನಿರೂಪಿಸಿದರೆ, ಕ್ಲೆಮೆಂಟಿನಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಮೆರಿಕ ದಾದಾಗಿರಿಗೆ ಮೋದಿ ಮೌನ- ರಾಜತಾಂತ್ರಿಕತೆಯಲ್ಲ, ಶರಣಾಗತಿ!

ಅಮೆರಿಕ ಜೊತೆಗಿನ ಭಾರತದ ನಂಟು 'ಸಮಾನ ಸಾರ್ವಭೌಮತ್ವ'ದ ಮೇಲೆ ಆಧಾರಿತವಾಗಿರಬೇಕೇ ಹೊರತು,...

ಅಮೆರಿಕದ ಅಹಂಕಾರಕ್ಕೆ ಪೆಟ್ಟು: ಯುದ್ಧದ ನಡುವೆಯೂ ಇರಾನ್ ನಾಯಕರಿಗೆ ವೀಸಾ ನೀಡಿಕೆ

ಅಮೆರಿಕ ಮತ್ತು ಇರಾನ್ ನಡುವೆ ಭೀಕರ ಯುದ್ಧ ಆರಂಭವಾಗಿ ಸುಮಾರು ಏಳು...

ಮುದ್ದೇಬಿಹಾಳ | ಸೆ.21ರಂದು ಕ್ರಾಂತಿ ಜ್ಯೋತಿ ಪ್ರವಾದಿ ಮುಹಮ್ಮದ್ ಸೀರತ್ ಸಮಾರಂಭ

ಜಮಾಅತೆ ಇಸ್ಲಾಮಿ ಹಿಂದ್ ಮುದ್ದೇಬಿಹಾಳ ಘಟಕದ ವತಿಯಿಂದ ‘ಕ್ರಾಂತಿಯ ಜ್ಯೋತಿ ಪ್ರವಾದಿ...