ಬೀದರ್‌ | ಸ್ಪರ್ಧಾತ್ಮಕ ಪರೀಕ್ಷೆ ಯಶಸ್ಸಿಗೆ ಅಧ್ಯಯನ ಅಗತ್ಯ : ಶಿವಕುಮಾರ ಸ್ವಾಮಿ

Date:

ಯಶಸ್ಸು ಒಂದೇ ದಿನದಲ್ಲಿ ಸಿಗುವುದಿಲ್ಲ. ನಿರಂತರ ಪ್ರಯತ್ನ, ಶಿಸ್ತುಬದ್ಧ ಅಧ್ಯಯನ ಮತ್ತು ಸಕಾರಾತ್ಮಕ ಮನೋಭಾವದಿಂದ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಬಹುದು ಎಂದು ನಿವೃತ ಶಿಕ್ಷಣಾಧಿಕಾರಿ ಶಿವಕುಮಾr ಸ್ವಾಮಿ ಹೇಳಿದರು.

- Advertisement -

ವಿನ್ನರ್ ಹಾಗೂ ಸ್ಪರ್ಧಾ ಜಿನಿಯಸ್ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ವತಿಯಿಂದ ನಗರದ ನರ್ಚರ್ ಸ್ಪರ್ಧಾತ್ಮಕ ಅಧ್ಯಯನ ಕೇಂದ್ರದಲ್ಲಿ ಭಾನುವಾರ ಆಯೋಜಿಸಿದ ಎಚ್.ಎಸ್.ಟಿ.ಆರ್, ಜಿ.ಪಿ.ಎಸ್.ಟಿ.ಆರ್, ಪಿ.ಎಸ್.ಟಿ.ಆರ್, ಕ್ರೈಸ್ ಶಿಕ್ಷಕರ ನೇಮಕಾತಿಯ ಉಚಿತ ವಿಶೇಷ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

“ಪ್ರತಿಯೊಬ್ಬರಲ್ಲೂ ಅಗಾಧವಾದ ಸಾಮರ್ಥ್ಯ, ಪ್ರತಿಭೆ ಇರುತ್ತದೆ. ಅದನ್ನು ಕಠಿಣ ಪರಿಶ್ರಮದಿಂದ ಹೊರತರಬೇಕಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ನಿರ್ದಿಷ್ಟ ಗುರಿ, ಉತ್ತಮ ಯೋಜನೆ, ನಿರಂತರ ಅಧ್ಯಯನ ಅಗತ್ಯವಿದೆ. ಆತ್ಮವಿಶ್ವಾಸ ಕಳೆದುಕೊಳ್ಳದೆ ಸತತ ಪ್ರಯತ್ನ ಇರಬೇಕು. ತಂತ್ರಜ್ಞಾನ ಮುಂದುವರೆದಂತೆ ನಾವೂ ಅಪ್ಡೇಟ್ ಆಗುವುದು ಅನಿವಾರ್ಯವಾಗಿದೆ. ವಿನ್ನರ್‌ ಹಾಗೂ ಸ್ಪರ್ಧಾ ಜಿನಿಯಸ್‌ ಅವರು ನಡೆಸುವ ಇಂತಹ ಉಚಿತ ಕಾರ್ಯಗಾರಗಳನ್ನು ಅಭ್ಯರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು” ಎಂದು ಸಲಹೆ ನೀಡಿದರು.

ಧಾರವಾಡದ ಸಂಪನ್ಮೂಲ ವ್ಯಕ್ತಿ ಡಾ.ಎಂ.ವಿ.ವಿಜಯಕುಮಾರ ಮಾತನಾಡಿ, “ಜೀವನದಲ್ಲಿ ಅವಕಾಶಗಳು ಮತ್ತೆ ಮತ್ತೆ ಸಿಗುವುದಿಲ್ಲ. ದೊರೆತ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ನಿರಂತರ ಅಧ್ಯಯನ ಮತ್ತು ಶ್ರಮದಿಂದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬೇಕು. ದೃಢ ಸಂಕಲ್ಪ, ಸಮಯದ ಸಮರ್ಪಕ ನಿರ್ವಹಣೆ, ನಿರಂತರ ಅಭ್ಯಾಸ ಹಾಗೂ ಆತ್ಮವಿಶ್ವಾಸ ಅತ್ಯಗತ್ಯ. ಪ್ರತಿದಿನ ನಿಗದಿತ ವೇಳಾಪಟ್ಟಿಯಂತೆ ಅಧ್ಯಯನ ನಡೆಸಬೇಕು. ಶಿಕ್ಷಕ ವೃತ್ತಿ ಕೇವಲ ಉದ್ಯೋಗವಲ್ಲ, ಅತ್ಯಂತ ಗೌರವಯುತ ಮತ್ತು ಜವಾಬ್ದಾರಿಯುತ ವೃತ್ತಿಯಾಗಿದೆ” ಎಂದರು.

ನರ್ಚರ್‌ ಅಧ್ಯಯನ ಕೇಂದ್ರದ ಅಧ್ಯಕ್ಷ ದತ್ತಾತ್ರಿ ಮೂಳೆ ಮಾತನಾಡಿ, “ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಗೆ ಮಾನಸಿಕ ಸಾಮರ್ಥ್ಯ ಪ್ರಮುಖ ಪಾತ್ರ ವಹಿಸುತ್ತದೆ. ಬದುಕಿನಲ್ಲಿ ಸೋಲು-ಗೆಲುವು ಸಾಮಾನ್ಯ ಸಂಗತಿಗಳಾಗಿವೆ. ಒಂದು ಸೋಲಿನಿಂದ ನಿರಾಶರಾಗದೆ, ಮುಂದಿನ ಪ್ರಯತ್ನಕ್ಕೆ ಸಿದ್ಧರಾಗಬೇಕು. ನಕರಾತ್ಮಕ ಯೋಚನೆಗಳಿಂದ ದೂರವಿದ್ದು, ಪರೀಕ್ಷೆಗೆ ಸಿದ್ಧತೆ ನಡೆಸಬೇಕು” ಎಂದು ತಿಳಿಸಿದರು.

ಪತ್ರಕರ್ತ ಬಾಲಾಜಿ ಕುಂಬಾರ ಮಾತನಾಡಿ, “ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಸರಿಯಾದ ಯೋಜನೆ, ಸತತ ಅಧ್ಯಯನ ಹಾಗೂ ಸಮಯದ ಸಮರ್ಪಕ ನಿರ್ವಹಣೆ ಅತ್ಯಂತ ಅಗತ್ಯವಾಗಿದೆ. ನಿಗದಿತ ಪಠ್ಯ ವಿಷಯಗಳ ಅಧ್ಯಯನದ ಜೊತೆಗೆ ಪ್ರತಿದಿನ ದಿನಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಇದರಿಂದ ದೇಶ-ವಿದೇಶದ ಸಾಮಾನ್ಯ ಜ್ಞಾನ ಮತ್ತು ಸಮಕಾಲೀನ ವಿದ್ಯಮಾನಗಳ ಕುರಿತು ಅರಿವು ವೃದ್ಧಿಯಾಗುತ್ತದೆ” ಎಂದು ಅವರು ಹೇಳಿದರು.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ 150ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿಗಳಾದ ಎಂ.ವಿ.ವಿಜಯಕುಮಾರ ಧಾರವಾಡ, ಬಸವರಾಜ ಜನಕಟ್ಟಿ ಧಾರವಾಡ ಅವರು ಸುಧೀರ್ಘವಾದ ವಿವರ ನೀಡಿದರು.

ಇದನ್ನೂ ಓದಿ : ಬೀದರ್‌ | ಯುವ ಬರಹಗಾರರಿಂದ ಗಟ್ಟಿ ಸಾಹಿತ್ಯ ಹೊರಬರಲಿ : ಸುರೇಶ ಚನ್ನಶೆಟ್ಟಿ

ನಿವೃತ್ತ ಬ್ಯಾಂಕ್‌ ಅಧಿಕಾರಿ ಚಂದ್ರಕಾಂತ ಪಟ್ನೆ, ನಿವೃತ್ತ ಉಪನ್ಯಾಸಕ ಓಂಕಾರ ಕಾಕನಾಳೆ, ಶಿಕ್ಷಕಿ ರೇಣುಕಾ ಎಂ.ಬಿ, ವಿನ್ನರ್ ಹಾಗೂ ಸ್ಪರ್ಧಾ ಜಿನಿಯಸ್ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ನಿರ್ದೇಶಕ ಮನೋಜಕುಮಾರ ಬುಕ್ಕಾ, ಸಂಪನ್ಮೂಲ ವ್ಯಕ್ತಿ ಹಣಮಂತರಾವ ಪಾಟೀಲ್‌ ಸೇರಿದಂತೆ ಮಹಾದೇವಿ ಬುಕ್ಕಾ, ಪೂಜಾ ಪಾಟೀಲ್‌ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಎ.ಪಿ. ರಂಗನಾಥ್ ಗೆಲುವು

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ದ್ವೈವಾರ್ಷಿಕ ಚುನಾವಣೆ-2026ರ ಬೆಂಗಳೂರು...

ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಗೆಲುವು

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ...

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು ‘ರನ್‌ಆಫ್’ ವ್ಯವಸ್ಥೆ, ಭಾರತಕ್ಕೂ ಇದು ಅಗತ್ಯವೇ?

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ, ಪೊಲೀಸರು, ಕಟ್ಟಡ ಕಾರ್ಮಿಕರಿಗೂ ಆಘಾತ!

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್,...