ಬೀದರ್‌ | ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ : ಮುಕುಲ್ ಜೈನ್

Date:

ಮಕ್ಕಳು ಮೊಬೈಲ್‌ ಗೀಳಿನಿಂದ ದೂರವುಳಿದು, ಉತ್ತಮ ಮೌಲ್ಯಗಳನ್ನು ಮೈಗೂಡಿಸಿಕೊಂಡು ಅಭ್ಯಾಸದ ಕಡೆಗೆ ಗಮನ ಹರಿಸಿದಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದು ಬೀದರ ಮಹಾನಗರ ಪಾಲಿಕೆ ಪೌರಾಯುಕ್ತ ಮುಕುಲ ಜೈನ್ ತಿಳಿಸಿದರು.

- Advertisement -

ಬೀದರ್ ನಗರದ ಪನ್ನಾಲಾಲ್ ಹೀರಾಲಾಲ್ ಪ್ರಾಥಮಿಕ ಶಾಲೆಯ 25ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಿದ ಬೆಳ್ಳಿ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿ, ʼಮಕ್ಕಳು ಕಠಿಣ ಪರಿಶ್ರಮದಿಂದ ಅಧ್ಯಯನ ನಡೆಸಿದಾಗ ಗುರಿ ತಲುಪಲು ಸಾಧ್ಯʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ʼಮನೆಯಲ್ಲಿ ಪಾಲಕರು ಹಾಗೂ ಶಾಲೆಯಲ್ಲಿ ಶಿಕ್ಷಕರು ಅವರಿಗೆ ಮಕ್ಕಳಿಗೆ ಉತ್ತಮ ಸಂಸ್ಕಾರ ಜೊತೆಗೆ ಶಿಕ್ಷಣ ನೀಡಬೇಕು. ಮೊಬೈಲ್ ಹಿಡಿಯದಂತೆ ಕಠಿಣ ನಿಯಮ ಜಾರಿಗೆ ತರುವಂತೆ ಶಾಲಾ ಸಿಬ್ಬಂದಿ ಪ್ರಯತ್ನಿಸಬೇಕು. ರಾಷ್ಟ್ರಭಾಷಾ ಸಂವರ್ಧನಾ ಸಮಿತಿಯು ಕನ್ನಡ ಶಾಲೆ ಆರಂಭಿಸಿ ಮಕ್ಕಳಿಗೆ ಮಾತೃಭಾಷೆಯ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು.‌

WhatsApp Image 2026 01 29 at 7.39.30 AM
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಕ್ಕಳಿಂದ ನೃತ್ಯ ಪ್ರದರ್ಶನ ಮನಸೂರೆಗೊಳಿಸಿತು.

ಕಾರ್ಯಕ್ರಮ ಉದ್ಘಾಟಿಸಿದ ಪನ್ನಾಲಾಲ್ ಹೀರಾಲಾಲ್ ಎಜುಕೇಶನ್ ಟ್ರಸ್ಟ್ ಸಂಸ್ಥಾಪಕ ಟ್ರಸ್ಟಿ ಕೈಲಾಸ ನಾರಾಯಣ ಭಾಂಗಡಿಯಾ ಮಾತನಾಡಿ, ʼಮಾತೃಭಾಷೆ ಕನ್ನಡದಲ್ಲಿ ಶಾಲೆಯನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುತ್ತಿರುವ ಆಡಳಿತ ಮಂಡಳಿಯ ಎಲ್ಲಾ ಸದಸ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದುʼ ಎಂದು ತಿಳಿಸಿದರು.

ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಮಾತನಾಡಿ, ʼಆಡಳಿತ ಮಂಡಳಿಯ ಬಹುತೇಕ ಸದಸ್ಯರ ಮಾತೃಭಾಷೆ ಹಿಂದಿಯಾಗಿದ್ದರೂ ಸಹಿತ ಕನ್ನಡ ಮಾಧ್ಯಮದಲ್ಲಿ ಶಾಲೆ ಆರಂಭಿಸಿ ಉತ್ತಮ ಶಿಕ್ಷಣ ಮತ್ತು ಮಕ್ಕಳಿಗೆ ಸಂಸ್ಕಾರ ನೀಡುತ್ತಿರುವುದು ಶ್ಲಾಘನೀಯ ಕಾರ್ಯ. ಈ ಶಾಲೆಯಲ್ಲಿ ಸುಮಾರು 800ಕ್ಕೂ ಹೆಚ್ಚು ಮಕ್ಕಳು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಓದಿದ ಮಕ್ಕಳು ಕ್ರಿಯಾಶೀಲರು, ಸೃಜನಶೀಲರಾಗಿ ಬೆಳೆಯುತ್ತಾರೆ. ಆಡಳಿತ ಮಂಡಳಿಯ ಕನ್ನಡ ಪ್ರೇಮ ಮೆಚ್ಚುವಂತಹದುʼ ಎಂದರು.

WhatsApp Image 2026 01 29 at 7.39.47 AM

ಇದನ್ನೂ ಓದಿ : ʼಈದಿನʼ ಸಂದರ್ಶನ | ಬಹುಭಾಷಿಕ ನೆಲೆಯಲ್ಲಿ ಕನ್ನಡಕ್ಕಿರಲಿ ಮನ್ನಣೆ : ಡಾ.ಮನ್ಮಥ ಡೋಳೆ

ಸಿಆರ್‌ಪಿ ತ್ರಿಂಬಕ್ ದೇವರ್ಸೆ, ಶಾಲೆಯ ಮ್ಯಾನೇಜಿಂಗ್ ಟ್ರಸ್ಟಿ ಕಮಲನಾರಾಯಣ ಭಾಂಗಡಿಯಾ, ನಂದಕಿಶೋರ ವರ್ಮಾ, ರಾಷ್ಟ್ರಭಾಷಾ ಸಂವರ್ಧನಾ ಸಮಿತಿಯ ಅಧ್ಯಕ್ಷ ರಾಜಕುಮಾರ ಅಗರವಾಲ್, ಪ್ರಧಾನ ಕಾರ್ಯದರ್ಶಿ ಬ್ರಿಜ್‌ ಕಿಶೋರ್ ಮಾಲಾನಿ, ಸಂಸ್ಥೆಯ ಉಪಾಧ್ಯಕ್ಷ ರಾಜೇಂದ್ರಸಿಂಗ್ ಪವಾರ್, ಸಹ ಕಾರ್ಯದರ್ಶಿ ಸತ್ಯನಾರಾಯಣ ಬದವಾ, ಖಜಾಂಚಿ ಓಂಪ್ರಕಾಶ ಬಜಾಜ್, ಘನಶ್ಯಾಮಜಿ ಗೋಯೆಲ್, ಪ್ರಾಚಾರ್ಯ ಸುಮತಿ ಪಡಶೆಟ್ಟಿ, ಅಂಬಾದಾಸ ಮೋರೆ, ಪ್ರೌಢ ಶಾಲಾ ಮುಖ್ಯಗುರು ಸುಧಾರಾಣಿ ಬಿರಾದಾರ, ಪ್ರಾಥಮಿಕ ಶಾಲೆಯ ಮುಖ್ಯಗುರು ಸಂಜೀವಕುಮಾರ ಬೇಲೂರ ಸೇರಿದಂತೆ ಪೋಷಕರು, ವಿದ್ಯಾರ್ಥಿಗಳು, ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಶಿಕ್ಷಕರ ಮಾತು ಆಜ್ಞೆಯಂತೆ ಪಾಲಿಸುವ ಮಕ್ಕಳು ಸೋಲುವುದಿಲ್ಲ : ಶಾಸಕ ಪ್ರಭು ಚವ್ಹಾಣ

ಶಿಕ್ಷಕರು ನೀಡುವ ಮೌಲ್ಯಯುತ ಮಾತುಗಳನ್ನು ಆಜ್ಞೆಯಂತೆ ಪಾಲಿಸುವ ಮಕ್ಕಳು ಜೀವನದಲ್ಲಿ ಸೋಲದೆ,...

ಬೀದರ್‌ | ʼಆಪ್‌ʼ ರಾಜ್ಯ ಅಲ್ಪಸಂಖ್ಯಾತರ ಘಟಕಕ್ಕೆ ಸೈಯದ್‌ ಜಮೀಲ್‌ ನೇಮಕ : ಸನ್ಮಾನ

ಆಮ್ ಆದ್ಮಿ ಪಕ್ಷದ ರಾಜ್ಯ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿ ಬೀದರ್‌ನ ಸೈಯದ್‌...

ಬೀದರ್‌ | ಅಂತರಂಗ ಶುದ್ಧಿಯಿಂದ ಬದುಕಿಗೆ ನೆಮ್ಮದಿ

ಚಟ್ನಾಳ ಗ್ರಾಮದಲ್ಲಿ ವಿಶೇಷ ಶಕ್ತಿಯಿದ್ದು, ಅಂತರಂಗ ಶುದ್ಧಿಯಿಂದ ಸೇವೆಗೈಯುವ ಪರಂಪರೆ ಇಲ್ಲಿದೆ....

ಬೀದರ್‌ | ಶಿಷ್ಟಾಚಾರ ಉಲ್ಲಂಘನೆ : ಡಿಎಚ್‌ಒ ಸೇರಿ ಇಬ್ಬರು ಅಧಿಕಾರಿಗಳು ಅಮಾನತು

ಬಸವಕಲ್ಯಾಣ ತಾಲೂಕಿನ ಉಪವಿಭಾಗ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ...