ಬೀದರ್‌ | ಕಬ್ಬಿನ ಗದ್ದೆಗೆ ಬೆಂಕಿ : 7.5 ಎಕರೆ ಕಬ್ಬು ಬೆಂಕಿಗಾಹುತಿ

Date:

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಕಟಾವಿಗೆ ಬಂದಿದ್ದ ಜಿಲ್ಲೆಯ ನಾಲ್ವರು ರೈತರಿಗೆ ಸೇರಿದ ಸುಮಾರು 7.5 ಎಕರೆ ಕಬ್ಬು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಬುಧವಾರ ನಡೆದಿದೆ.

- Advertisement -

ಭಾಲ್ಕಿ ತಾಲ್ಲೂಕಿನ ಬೀರಿ (ಬಿ) ಗ್ರಾಮದ ರೈತರಾದ ನರಸಿಂಗ ಬಿರಾದಾರ ಅವರ 1.5 ಹಾಗೂ ರಾಜಕುಮಾರ ಬಿರಾದಾರ ಅವರ ಜಮೀನಿನಲ್ಲಿದ್ದ ಒಂದು ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿದೆ. ಇನ್ನು ಹುಲಸೂರ ಪಟ್ಟಣದ ಹೊರವಲಯದ ಜಮೀನಿನಲ್ಲಿ ಬೆಳೆದಿದ್ದ ರೈತರಾದ ಧನರಾಜ ಕಾಶೆಪ್ಪ ಹಾಗೂ ಸಚಿನ್‌ ಪ್ರಕಾಶ ಅವರಿಗೆ ಸೇರಿದ ಒಟ್ಟು ನಾಲ್ಕು ಎಕರೆ ಕಬ್ಬು ನಾಶವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ವಿದ್ಯುತ್ ಪರಿವರ್ತಕದಿಂದಾಗಿ ಕಬ್ಬಿನ ಹೊಲಕ್ಕೆ ಬೆಂಕಿ ಹೊತ್ತಿಕೊಂಡ ತಕ್ಷಣ ರೈತರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ವಾಹನಗಳ ಮೂಲಕ ಬೆಂಕಿ ನಂದಿಸಲು ಹರಸಾಹಸಪಟ್ಟರಾದರೂ, ಅಷ್ಟರಲ್ಲಾಗಲೇ ಕಬ್ಬು ಸಂಪೂರ್ಣ ಸುಟ್ಟು ಕರಕಲಾಗಿದೆ.

ಸಾಲ ಮಾಡಿ, ವರ್ಷವಿಡೀ ಬೆವರು ಸುರಿಸಿ, ಗೊಬ್ಬರ ಹಾಕಿ, ನೀರುಣಿಸಿ ಕಷ್ಟಪಟ್ಟು ಬೆಳೆಸಿದ್ದ ಕಬ್ಬು ಕಣ್ಣೆದುರೇ ಬೆಂಕಿಗಾಹುತಿಯಾಗಿದ್ದನ್ನು ಕಂಡ ರೈತರು ಕಣ್ಣೀರಿಟ್ಟರು. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು, ಅಪಾರ ನಷ್ಟದಿಂದ ಕಂಗಾಲಾಗಿದ್ದಾರೆ.

ಸರ್ಕಾರ ನೆರವಿಗೆ ಬರಲಿ: ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಸರ್ಕಾರ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಬೇಕು. ಸೂಕ್ತ ಪರಿಹಾರ ನೀಡಿ ಸಂಕಷ್ಟದಲ್ಲಿರುವ ತಮ್ಮ ನೆರವಿಗೆ ಬರಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಅನುಭವ ಮಂಟಪ ಉತ್ಸವ | ಹಂಸಲೇಖ, ಸಿ.ಆರ್.ಚಂದ್ರಶೇಖರ್‌ ಸೇರಿ ನಾಲ್ವರಿಗೆ ಪ್ರಶಸ್ತಿ ಘೋಷಣೆ

WhatsApp Image 2026 10 10 at 7.46.08 PM 42
WhatsApp Image 2026 10 10 at 6.59.42 PM 21
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಡಾಖ್‌ನಲ್ಲಿ ಚಳಿಗಾಲದ ಚುನಾವಣೆ ವಿರೋಧಿಸಿ ಪ್ರತಿಭಟನೆಗೆ ಕರೆ; ಲೇಹ್-ಕಾರ್ಗಿಲ್‌ನಲ್ಲಿ ಧರಣಿ ಬ್ಯಾನ್ ಮಾಡಿದ ಸಿಇಒ

ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ಮುಂಬರುವ ಸಾಲು ಸಾಲು ಚುನಾವಣೆಗಳ ಬೆನ್ನಲ್ಲೇ ರಾಜಕೀಯ...

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು...