ಬೀದರ್‌ | ಬೇಸಿಗೆ ತಾಪ : ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಹಸಿರು ನೆರಳಿನ ಪರದೆ ಅಳವಡಿಸಲು ಮನವಿ

Date:

ಬೇಸಿಗೆಯ ಬಿಸಿಲಿನ ತಾಪ ಹೆಚ್ಚುತ್ತಿದ್ದು, ಬೀದರ ನಗರದ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ವಿಶೇಷವಾಗಿ ಟ್ರಾಫಿಕ್ ಸಿಗ್ನಲ್‌ಗಳಲ್ಲಿ ನಿಲ್ಲಬೇಕಾಗುವ ದ್ವಿಚಕ್ರ ವಾಹನ ಸವಾರರು ಉರಿ ಬಿಸಿಲಲ್ಲಿ ನಿಂತುಕೊಳ್ಳುವುದು ಬಹಳ ಕಷ್ಟಕರವಾಗಿದೆ. ಹೀಗಾಗಿ ನಗರದ ಪ್ರಮುಖ ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಹಸಿರು ಪರದೆಯ ನೆರಳಿನ ವ್ಯವಸ್ಥೆ ಕಲ್ಪಿಸಬೇಕೆಂದು ಕರ್ನಾಟಕ ಯುವ ಸಂಘ ಸಂಸ್ಥೆಗಳ ಒಕ್ಕೂಟ ಮನವಿ ಮಾಡಿದೆ.

- Advertisement -

ಈ ಸಂಬಂಧ ಒಕ್ಕೂಟದ ಪ್ರಮುಖರು ಗುರುವಾರ ಬೀದರ್ ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗುತ್ತಿದ್ದು, ಸದ್ಯವೇ ಸುಮಾರು 35 ರಿಂದ 38 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಇನ್ನೂ ಮುಂದಿನ ದಿನಗಳಲ್ಲಿ ಬಿಸಿಲಿನ ತಾಪ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ಜನರು ಮನೆಯಿಂದ ಹೊರ ಬಂದರೆ ಟ್ರಾಫಿಕ್ ಸಿಗ್ನಲ್ ಬಳಿ ನಿಲ್ಲುವಾಗ ಬಿಸಿಲಿನ ತಾಪ ಸಹಿಸಲು ಆಗದ ಪರಿಸ್ಥಿತಿ ಎದುರಾಗುತ್ತದೆ.

“ನಗರದ ಅಂಬೇಡ್ಕರ್ ಚೌಕ್, ಭಗತ್ ಸಿಂಗ್ ಚೌಕ್, ಬಸವೇಶ್ವರ ಚೌಕ್ ಹಾಗೂ ಗುಂಪಾ ರಿಂಗ್ ರೋಡ್ ಸಿಗ್ನಲ್ ಬಳಿ ವಾಹನ ಸಂಚಾರ ಹೆಚ್ಚಿರುವ ಪ್ರಮುಖ ಸ್ಥಳಗಳಾಗಿವೆ. ಇಲ್ಲಿ ಸಿಗ್ನಲ್ ಬೀಳುವಾಗ ನೂರಾರು ವಾಹನಗಳು ಸಾಲಾಗಿ ನಿಂತುಕೊಳ್ಳುತ್ತವೆ. ಈ ವೇಳೆ ಸವಾರರು ಬಿರು ಬಿಸಿಲಲ್ಲೇ ಕಾಯಬೇಕಾಗುತ್ತದೆ. ಹೀಗಾಗಿ ಈ ಪ್ರಮುಖ ವೃತ್ತಗಳಲ್ಲಿ ಹಸಿರು ನೆರಳಿನ ಪರದೆ ಅಳವಡಿಸಿದರೆ ಜನರಿಗೆ ತುಂಬಾ ಅನುಕೂಲವಾಗಲಿದೆ” ಎಂದು ಮನವಿಯಲ್ಲಿ ತಿಳಿಸಲಾಗಿದೆ.

“ಈಗಾಗಲೇ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬೇಸಿಗೆಯ ಉರಿ ಬಿಸಿಲಿನಿಂದ ವಾಹನ ಸವಾರರನ್ನು ರಕ್ಷಿಸಲು ಟ್ರಾಫಿಕ್ ಸಿಗ್ನಲ್‌ಗಳಲ್ಲಿ ನೆರಳಿನ ಪರದೆ ಅಳವಡಿಸುವ ಕ್ರಮ ಕೈಗೊಳ್ಳಲಾಗಿದೆ. ಅದೇ ಮಾದರಿಯನ್ನು ಬೀದರ ಮಹಾನಗರ ಪಾಲಿಕೆ ಕೂಡ ಅನುಸರಿಸಿದರೆ ನಗರದ ಜನರಿಗೆ ತುಂಬಾನೇ ಉಪಯೋಗವಾಗಲಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಹೆಡ್‌ ಕಾನ್‌ಸ್ಟೆಬಲ್ ಸಂತೋಷ ಮಹಾರಾಜಗೆ ಮುಖ್ಯಮಂತ್ರಿಗಳ ಪದಕ ಪ್ರದಾನ

ಕರ್ನಾಟಕ ಯುವ ಸಂಘ ಸಂಸ್ಥೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಸುನೀಲ ಭಾವಿಕಟ್ಟಿ, ಮುಖಂಡರಾದ ಬಾಬುರಾವ್ ಕುಂಬಾರ್, ಗಣಪತಿ ಶಕ್ರಪ್ಪನೋರ್, ಚಂದ್ರಕಾಂತ ಹಳ್ಳಿಖೇಡಕರ್, ಶರಣಬಸವ.ಕೆ, ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಬೀದರ್ ತಾಲೂಕು ಅಧ್ಯಕ್ಷರಾಗಿ ವೀರೇಂದ್ರಕುಮಾರ್

ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ (6ರಿಂದ 8ನೇ ತರಗತಿ) ಶಿಕ್ಷಕರ ಸಂಘದ...

ಭಾಲ್ಕಿ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಉತ್ತಮ ಶಿಂಧೆ ಪುನರಾಯ್ಕೆ

ಸರ್ಕಾರದ ಮಾನ್ಯತೆ ಪಡೆದ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಭಾಲ್ಕಿ ತಾಲೂಕು...

ಭಾಲ್ಕಿ | ಗಾಂಧೀಜಿ ಅಹಿಂಸಾ ತತ್ವ ಬದುಕಿನಲ್ಲಿ ಅನುಸರಿಸಿ : ಮಲ್ಲಿಕಾರ್ಜುನ ಹಲ್ಮಂಡಗೆ

ಭಾಲ್ಕಿಯ ನಿರ್ಮಲಾ ಹಲ್ಮಂಡಗೆ ಶಿಕ್ಷಣ ಸಂಸ್ಥೆಯಲ್ಲಿ ಮಹಾತ್ಮ ಗಾಂಧೀಜಿ ಅವರ 157ನೇ...

ಬೀದರ್‌ | ಎಚ್‌ಐವಿ ಬಾಧಿತರು ಆತಂಕಕ್ಕೊಳಗಾಗದೆ ನಿಯಮಿತ ಔಷಧಿ ಸೇವಿಸಿ

ಎಚ್‌ಐವಿ ಬಾಧಿತರು ಯಾವುದೇ ರೀತಿಯ ಭಯ, ಆತಂಕಕ್ಕೆ ಒಳಗಾಗದೆ ವೈದ್ಯರ ಸಲಹೆಯಂತೆ...