ಬೀದರ್‌ | ನೂತನ ಅಪರ ಜಿಲ್ಲಾಧಿಕಾರಿಯಾಗಿ ಸುರೇಖಾ ನೇಮಕ

Date:

ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಕೆಎಎಸ್ (ಹಿರಿಯ ಶ್ರೇಣಿ) ಸುರೇಖಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

- Advertisement -

ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಉಪ ಕಾರ್ಯದರ್ಶಿಯಾಗಿದ್ದ ಸುರೇಖಾ ಅವರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ ಹಿಂದಿನ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರ ಜಾಗಕ್ಕೆ ವರ್ಗಾಯಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್‌ ಕೆ.ಎಚ್.‌ ಆದೇಶ ಆ.5ರಂದು ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬೀದರ್‌ ವಿಶ್ವವಿದ್ಯಾಲಯ ಕುಲಸಚಿವರಾಗಿದ್ದ ಸುರೇಖಾ ಅವರು ಅದೇ ಸಂದರ್ಭದಲ್ಲಿ ಕೆಲ ದಿನಗಳ ಕಾಲ ಪ್ರಭಾರ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಇದೀಗ ಪುನಃ ಅಪರ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದಾರೆ.

ಬೀದರ್ ಅಪರ ಜಿಲ್ಲಾಧಿಕಾರಿಯಾಗಿದ್ದ ಕೆಎಎಸ್‌ (ಸೂಪರ್‌ ಟೈಂ ಸ್ಕೇಲ್) ಶಿವಾನಂದ ಬಿ.ಕರಾಳೆ ಅವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಆಪ್ತ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಬೀದರ್‌ | ಹಳ್ಳಕ್ಕೆ ವಿಷಯುಕ್ತ ರಾಸಾಯನಿಕ ತ್ಯಾಜ್ಯ: ಕ್ರಮಕ್ಕೆ ಈಶ್ವರ ಖಂಡ್ರೆ ಸೂಚನೆ

ಶಿವಾನಂದ ಬಿ.ಕರಾಳೆ ಅವರು 2010ನೇ ಸಾಲಿನ ಕೆಎಎಸ್ ಅಧಿಕಾರಿಯಾಗಿದ್ದು, ಈ ಹಿಂದೆ ಕಾರವಾರ ಜಿಲ್ಲೆಯ ಸಹಾಯಕ ಆಯುಕ್ತರಾಗಿ ಹಾಗೂ ಗದಗ, ಧಾರವಾಡ, ತುಮಕೂರ ಜಿಲ್ಲೆಗಳಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...