ಬೀದರ್ ಜಿಲ್ಲೆಯ ಸಾಹಿತಿ ಗುರುನಾಥ ಅಕ್ಕಣ್ಣ ಅವರ ‘ಕೊಂದವರುಳಿದರೇ’ ಕಾದಂಬರಿಗೆ ಬೆಂಗಳೂರಿನ ಸ್ವಾಭಿಮಾನಿ ಕರ್ನಾಟಕ ವೇದಿಕೆ ವತಿಯಿಂದ ನೀಡಲಾಗುವ 2025ನೇ ಸಾಲಿನ ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ ಲಭಿಸಿದೆ.
ಲೇಖಕಿಯರ ಸಂಘದ ಅಧ್ಯಕ್ಷೆ ಆರ್.ಸುನಂದಮ್ಮ, ಡಾ. ದ್ವಾರನಕುಂಟೆ ಪಾತಣ್ಣ ಹಾಗೂ ಹೆಚ್.ಆರ್.ಸುಜಾತಾ ಅವರು ತೀರ್ಪುಗಾರರಾಗಿದ್ದರು.
ಪ್ರಶಸ್ತಿ ಪ್ರದಾನ ಸಮಾರಂಭವು ಜೂ.13ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನಲ್ಲಿ ನಡೆಯಲಿದ್ದು, ಪ್ರೊ. ಎಸ್.ಜಿ. ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ನಾಡೋಜ ಡಾ. ವೋಡೆ ಪಿ. ಕೃಷ್ಣ ಹಾಗೂ ಎಂ. ತಿಮ್ಮಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾದಂಬರಿ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಡಾ. ಬಸವರಾಜ ಬಲ್ಲೂರು, ಡಾ. ರಾಮಚಂದ್ರ ಗಣಾಪೂರ, ಟಿ.ಎಂ. ಮಚ್ಚೆ, ಪ್ರೊ. ಜಗನ್ನಾಥ ಕಮಲಾಪುರೆ, ಕಾಶಿನಾಥ ಬೆಳ್ಳೂರು, ದೇವೇಂದ್ರ ಕರಂಜೆ ಸೇರಿದಂತೆ ಹಲವಾರು ಸಾಹಿತಿಗಳು ಗುರುನಾಥ ಅಕ್ಕಣ್ಣ ಅವರನ್ನು ಅಭಿನಂದಿಸಿದ್ದಾರೆ.
ಇದನ್ನೂ ಓದಿ : ‘ಕಲ್ಯಾಣ’ದಲ್ಲಿ ಏಕೈಕ ಕೃಷಿ ಡಿಪ್ಲೋಮಾ ಕಾಲೇಜು : ಕೃಷಿಕರ ಮಕ್ಕಳಿಗೆ ಶೇ.50 ಸೀಟು ಮೀಸಲು





