ಬೀದರ್‌ | ಅ.2ಕ್ಕೆ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ

Date:

ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಅಬ್ದುಲ್ ಮನ್ನಾನ್ ಸೇಠ್ ಅವರ ಪದಗ್ರಹಣ ಸಮಾರಂಭ ಅಕ್ಟೋಬರ್ 2ರಂದು ಬೆಳಿಗ್ಗೆ 11 ಗಂಟೆಗೆ ನಗರದ ಪ್ರತಾಪನಗರದ ವಿಆರ್‌ಸಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಮಾಜಿ ಸಚಿವ ರಾಜಶೇಖರ ಬಿ.ಪಾಟೀಲ ತಿಳಿಸಿದ್ದಾರೆ.

- Advertisement -

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಅಂದಿನ ಪದಗ್ರಹಣ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಸಂಸದ ಸಾಗರ ಖಂಡ್ರೆ, ಮಾಜಿ ಸಚಿವ ಹಾಗೂ ಶಾಸಕ ರಹೀಂ ಖಾನ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ ಹಾಗೂ ಭೀಮರಾವ ಪಾಟೀಲ ಸೇರಿದಂತೆ ಪಕ್ಷದ ಹಲವು ಮುಖಂಡರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ಬೂಡಾ ಅಧ್ಯಕ್ಷ ವಿನೋದಕುಮಾರ ಅಪ್ಪೆ, ಮಾಜಿ ಸಂಸದ ನರಸಿಂಗರಾವ ಸೂರ್ಯವಂಶಿ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಅರವಿಂದಕುಮಾರ ಅರಳಿ, ವಿಜಯಸಿಂಗ್ ಹಾಗೂ ಕೆ. ಪುಂಡಲಿಕರಾವ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಅಮೃತರಾವ ಚಿಮಕೊಡೆ ಸೇರಿದಂತೆ ಬೀದರ್ ಮಹಾನಗರ ಪಾಲಿಕೆ ಸದಸ್ಯರು, ಪಕ್ಷದ ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಈ ಬಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಅತ್ಯಂತ ಪಾರದರ್ಶಕವಾಗಿ ನಡೆದಿದೆ ಎಂದು ರಾಜಶೇಖರ ಪಾಟೀಲ ಹೇಳಿದರು.

ದೆಹಲಿಯಿಂದ ಉಸ್ತುವಾರಿಗಳು ಹಾಗೂ ವೀಕ್ಷಕರು ಜಿಲ್ಲೆಗೆ ಆಗಮಿಸಿ, ಇಲ್ಲಿಯೇ ಠಿಕಾಣಿ ಹೂಡಿ, ವಿವಿಧೆಡೆ ಸಂಚರಿಸಿ ಪಕ್ಷದ ಕಾರ್ಯಕರ್ತರ ಅಭಿಪ್ರಾಯವನ್ನು ಲಿಖಿತ ರೂಪದಲ್ಲಿ ಸಂಗ್ರಹಿಸಿದ್ದಾರೆ. ಈ ಪ್ರಕ್ರಿಯೆಯ ಆಧಾರದ ಮೇಲೆ ನೂತನ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಆಯ್ಕೆ ಪ್ರಕ್ರಿಯೆ ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿ ನಡೆದಿದೆ ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ ಜಿಲ್ಲಾ ಮಟ್ಟದ ಕಾವ್ಯ ಕಮ್ಮಟ ಅ.4ರಂದು

ಸುದ್ದಿಗೋಷ್ಠಿಯಲ್ಲಿ ಶಾಸಕ ರಹೀಮ್ ಖಾನ್, ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ, ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಂಕರರಾವ ದೊಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಎಂ.ಎ. ಸಮಿ, ಒಬಿಸಿ ಅಧ್ಯಕ್ಷ ಶಂಕರ ರೆಡ್ಡಿ ಚಿಟ್ಟಾ, ಪ್ರದೀಪ ಕುಶನೂರ, ಅಜಮತ್ ಪಟೇಲ್, ವೈಜಿನಾಥ ಎನಗುಂದೆ ಹಾಗೂ ಲಕ್ಷ್ಮಣ ಬುಳ್ಳಾ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಟಿಯು ವಾರ್ಷಿಕ ಘಟಿಕೋತ್ಸವ: ಉತ್ತರ ಕನ್ನಡದ ಪ್ರತಿಭೆಗಳಿಗೆ ರಾಜ್ಯಮಟ್ಟದ ಗರಿ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ...

ಬೀದರ್‌ ಜಿಲ್ಲಾ ಮಟ್ಟದ ಕಾವ್ಯ ಕಮ್ಮಟ ಅ.4ರಂದು

ಕಾವ್ಯ ರಚನೆಯಲ್ಲಿ ಆಸಕ್ತಿ ಹೊಂದಿರುವವರಿಗಾಗಿ ಜನಪರ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಜಿಲ್ಲಾ...

‘ನಾವು ಹೋದಾಗ ನೀವು ಬರ್ತೀರಿ’ ಎಂದಿದ್ದ ಮೋದಿ ಮಾತಿನ ಮರ್ಮವೇನು? ರಾಹುಲ್ ಈ ಘಟನೆ ನೆನೆದದ್ದು ಯಾಕೆ?

ಚುನಾವಣಾ ಆಯೋಗದ ಪಾರದರ್ಶಕತೆ ಪ್ರಶ್ನಿಸಿರುವ ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ನಿರ್ಣಾಯಕ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ ಪುನಃ ಭುಗಿಲೆಬ್ಬಿಸಿದ ವಿವಾದ

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ...