ಬೀದರ್‌ | ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ತಕ್ಷಣ ಜಾರಿಗೆ ಆಗ್ರಹಿಸಿ ಸಾಂಕೇತಿಕ ಪ್ರತಿಭಟನೆ

Date:

ಯಾವುದೇ ಷರತ್ತುಗಳಿಲ್ಲದೆ ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸುವಂತೆ ಆಗ್ರಹಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಸಮೀಪದ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.

- Advertisement -

ಜನವಾದಿ ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷೆ ವಿಜಯಲಕ್ಷ್ಮಿ ಗಡ್ಡೆ ಮಾತನಾಡಿ, “ಭಾರತೀಯ ಸಂವಿಧಾನ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ನೀಡಿದ್ದರೂ ರಾಜಕೀಯ ಕ್ಷೇತ್ರದಲ್ಲಿ ಅವರಿಗೆ ಸಮರ್ಪಕ ಪ್ರಾತಿನಿಧ್ಯ ದೊರೆತಿಲ್ಲ. ಸುಮಾರು ಐದು ದಶಕಗಳಿಂದ ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಗಾಗಿ ಹೋರಾಟ ನಡೆಯುತ್ತಿದ್ದರೂ ಅದು ಇನ್ನೂ ಜಾರಿಯಾಗುತ್ತಿಲ್ಲ” ಎಂದು ವಿಷಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

“ಸಂಸತ್ತಿನಲ್ಲಿ ಅಂಗೀಕರಿಸಲಾದ ಮಹಿಳಾ ಮೀಸಲಾತಿ ಕುರಿತ ಸಂವಿಧಾನ ತಿದ್ದುಪಡಿ ಕಾಯ್ದೆಯ ಜಾರಿಯನ್ನು ಜನಗಣತಿ ಹಾಗೂ ಕ್ಷೇತ್ರ ಮರುವಿಂಗಡಣೆ (ಡಿಲಿಮಿಟೇಶನ್) ಪ್ರಕ್ರಿಯೆಗೆ ಷರತ್ತು ಬದ್ಧಗೊಳಿಸಿರುವುದನ್ನು ಕೈಬಿಟ್ಟು, ಪ್ರಸಕ್ತ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿಯೇ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜಾರಿಗೊಳಿಸಬೇಕು. ಈ ಬೇಡಿಕೆ ಈಡೇರಿಸದಿದ್ದರೆ ದೇಶಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು” ಎಂದು ಎಚ್ಚರಿಸಿದರು.

ಮಹಿಳೆಯರಿಗೆ ರಾಜಕೀಯ ಮೀಸಲಾತಿಯ ಜೊತೆಗೆ ಉಚಿತ ಶಿಕ್ಷಣ, ಉದ್ಯೋಗಾವಕಾಶ ಮತ್ತು ಆರ್ಥಿಕ ಭದ್ರತೆಯನ್ನು ಸರ್ಕಾರ ಕಲ್ಪಿಸಬೇಕು. ಮಹಿಳೆಯರು ಶಿಕ್ಷಣ ಮತ್ತು ಆರ್ಥಿಕವಾಗಿ ಸಬಲರಾದಾಗ ಮಾತ್ರ ಸಮಾಜದಲ್ಲಿ ನೈಜ ಸಮಾನತೆ ಸಾಧಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ರಾಷ್ಟ್ರೀಯ ಮಹಿಳಾ ಮೀಸಲಾತಿ ಒಕ್ಕೂಟದ ನೇತೃತ್ವದಲ್ಲಿ ರಾಜ್ಯಾದ್ಯಂತ ಮಹಿಳಾ ಮೀಸಲಾತಿ ಕುರಿತು ಜನಜಾಗೃತಿ ಅಭಿಯಾನ ನಡೆಯುತ್ತಿದ್ದು, ವಿವಿಧ ರಾಜಕೀಯ ಮುಖಂಡರು, ಸಾಹಿತಿಗಳು, ಸಮಾಜಮುಖಿ ಚಿಂತಕರು ಹಾಗೂ ಸಾರ್ವಜನಿಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ಹೋರಾಟವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಜೆಸ್ಕಾಂನಿಂದ ಮರಗಳ ಅವೈಜ್ಞಾನಿಕ ಕೊಂಬೆ ಕತ್ತರಿಸುವಿಕೆ : ಕ್ರಮಕ್ಕೆ ವಿನಯ ಮಾಳಗೆ ಆಗ್ರಹ

ಪ್ರತಿಭಟನೆಯಲ್ಲಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಶೀಲಾ ರೆಡ್ಡಿ, ರಾಜ್ಯ ಉಪಾಧ್ಯಕ್ಷೆ ರೇಷ್ಮಾ ಹಂಸರಾಜ್, ಜಿಲ್ಲಾ ಉಪಾಧ್ಯಕ್ಷೆ ಇಸಾಬೇಗಂ ಹಾಗೂ ಪ್ರಮುಖರಾದ ಸುಶಿಲಾ ಹುಣಜಿ, ಲೀಲಾ ಸಂಗ್ರಾಮ್, ಸಾವಿತ್ರಿ ಸ್ವಾಮಿ, ರೇಖಾ ಹಮಿಲಾಪುರೆ, ರುಕ್ಮಿಣಿ, ವನಮಾಲಾ, ನೀಲಮ್ಮ ರೋಗನ್, ಸುಧಾರಾಣಿ ಗುಪ್ತಾ, ಮಂಜುಳಾ ಎಂ., ಮಹಾನಂದ ಬೊಕ್ಕೆ, ಕಲ್ಯಾಣಮ್ಮ, ಪ್ರಜ್ಞಾ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತೆಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾಲ್ಕಿ | ಖಟಕ್ ಚಿಂಚೋಳಿಯಲ್ಲಿ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಭಾಲ್ಕಿ ತಾಲ್ಲೂಕಿನ ಖಟಕ್ ಚಿಂಚೋಳಿ ಗ್ರಾಮದಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನ...

ದಸರಾ ಹಬ್ಬದಂದು 500ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳ ಪ್ರದರ್ಶಿಸಿದ ಉತ್ತರ ಪ್ರದೇಶದ ಶಾಸಕ

ಉತ್ತರ ಪ್ರದೇಶದ ಕುಂದಾ ಕ್ಷೇತ್ರದ 'ಜನಸತ್ತಾ ದಳ (ಲೋಕತಾಂತ್ರಿಕ)' ಪಕ್ಷದ ಪ್ರಭಾವಿ...

ಸಿಜೆಪಿಗೆ ಅಣ್ಣಾಮಲೈ ಬೆಂಬಲ: ‘ಬಂಧನವು ಅವರನ್ನು ಮತ್ತಷ್ಟು ಬಲಶಾಲಿಗಳನ್ನಾಗಿಸುತ್ತದೆ’ ಎಂದ ನಾಯಕ

ಚುನಾವಣಾ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ಅಕ್ರಮಗಳು ನಡೆದಿವೆ ಎಂದು...