ಬೀದರ್‌ | ಬೇಸಿಗೆಯಲ್ಲಿ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ : ಸಂಸದ ಸಾಗರ್ ಖಂಡ್ರೆ

Date:

ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಜಲ ಜೀವನ್ ಮಿಷನ್ ಯೋಜನೆಯಡಿ ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಸಂಸದ ಸಾಗರ್ ಖಂಡ್ರೆ ಸೂಚಿಸಿದರು.

- Advertisement -

ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ʼಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಹಾಗೂ ವಿಳಂಬ ಧೋರಣೆ ಅನುಸರಿಸುವ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದುʼ ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬೀದರ್ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ ಎಂಬ ದೂರುಗಳು ಬಂದಿರುವುದರಿಂದ, ರೈತರಿಗೆ ವಿಮೆ ಹಣ ತಲುಪುವಲ್ಲಿ ಆಗುತ್ತಿರುವ ವಿಳಂಬ ಕುರಿತು ತಕ್ಷಣ ಸಮಗ್ರ ವರದಿ ಸಲ್ಲಿಸಲು ಕೃಷಿ ಇಲಾಖೆಗೆ ಸೂಚಿಸಿದರು.

ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದರು. ಜಲ ಜೀವನ್ ಮಿಷನ್ ಯೋಜನೆಯಡಿ ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಇತ್ತೀಚೆಗೆ ಔರಾದ್ ತಾಲೂಕಿನ ಜಮಾಲಪುರ ಗ್ರಾಮದ ಶಾಲೆಯಲ್ಲಿ ಬಿಸಿ ಊಟ ಸೇವನೆಯಿಂದ ಮಕ್ಕಳು ಅಸ್ವಸ್ಥಗೊಂಡ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಸಂಸದರು, ಕಾರಣಕರ್ತರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದರು. ಗರ್ಭಿಣಿಯರಿಗೆ ಸಮರ್ಪಕ ಚಿಕಿತ್ಸೆ ದೊರಕುವಂತೆ ಕ್ರಮವಹಿಸಬೇಕು. ಹೆಚ್ಚುತ್ತಿರುವ ಮಾದಕ ವಸ್ತು ವ್ಯಸನ ತಡೆಗಟ್ಟಲು ಪುನರ್ವಸತಿ ಕೇಂದ್ರ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.

WhatsApp Image 2026 02 16 at 9.47.22 PM

ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ನಿವಾರಣೆ, ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಫಲಿತಾಂಶ ಸುಧಾರಣೆ, ಮಧ್ಯಾಹ್ನದ ಬಿಸಿ ಊಟದ ಗುಣಮಟ್ಟ ಪರಿಶೀಲನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದ ಅವರು, ʼರಾಷ್ಟ್ರೀಯ ಹೆದ್ದಾರಿಗಳ ಅಪಘಾತ ವಲಯಗಳನ್ನು ಗುರುತಿಸಿ ತಕ್ಷಣ ದುರಸ್ತಿ ಮಾಡುವಂತೆ, ರೈಲ್ವೆ ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡಿ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕುʼ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ʼಸರ್ಕಾರದ ಯೋಜನೆಗಳು ಕೇವಲ ದಾಖಲೆಗಳಲ್ಲಿ ಸೀಮಿತವಾಗಬಾರದು. ಅವುಗಳ ಲಾಭ ಜನರಿಗೆ ತಲುಪಬೇಕು. ಕರ್ತವ್ಯ ಲೋಪ ಎಸಗುವವರನ್ನು ಸಹಿಸುವುದಿಲ್ಲʼ ಎಂದು ಸಂಸದ ಸಾಗರ ಖಂಡ್ರೆ ಹೇಳಿದರು.

ಇದನ್ನೂ ಓದಿ : ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು

ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ ಬದೋಲೆ, ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

6378a520579666f153c2fe302416fd40eb44392fa3ff3c717bc425bc472039bf?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಲ್ಯಾಣ ಕರ್ನಾಟಕದ ಪ್ರಗತಿಗೆ ಗುಣಮಟ್ಟದ ಶಿಕ್ಷಣ ಅಗತ್ಯ : ಮೀನಾಕ್ಷಿ ಬಿರಾದರ್

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕ , ಔದ್ಯೋಗಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ...

ಬೀದರ್‌ | ಹಾಲಿಗಿಂತ ನೀರು ದುಬಾರಿಯಾಗುವ ಕಾಲ ದೂರವಿಲ್ಲ: ಮಾರುತಿ ಬೌದ್ಧೆ

ನಿಸರ್ಗದತ್ತವಾಗಿ ಉಚಿತವಾಗಿ ದೊರೆಯಬೇಕಾದ ನೀರು ಮುಂದೊಂದು ದಿನ ಹಾಲಿನ ದರಕ್ಕಿಂತಲೂ ದುಬಾರಿಯಾಗಿ...

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದಿಂದ 2025-26ನೇ ಸಾಲಿನಲ್ಲಿ 1,970 ಮಂದಿಗೆ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...