ಬೀದರ್‌ | ಜನ-ಜಾನುವಾರುಗಳಿಗೆ ನೀರಿನ ಅಭಾವ ಆಗದಂತೆ ಮುಂಜಾಗ್ರತೆವಹಿಸಿ : ಸಚಿವ ಈಶ್ವರ ಖಂಡ್ರೆ

Date:

ಬೇಸಿಗೆ ಹಿನ್ನೆಲೆ ಬೀದರ ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಸೂಚಿಸಿದರು.

- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.11 ರಂದು ಬೀದರ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆ ಗುರುವಾರ ಬೀದರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೀದರ ಜಿಲ್ಲಾ ಘಟಕದ ವತಿಯಿಂದ ಏ.11, 12ರಂದು ಹಮ್ಮಿಕೊಂಡಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೆಳನದ ಉದ್ಘಾಟನೆಗೆ ಏ.11ರಂದು ಬೀದರ್‌ ನಗರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಆಗಮಿಸುತ್ತಿದ್ದು, ಜಿಲ್ಲೆಯ ತುರ್ತಾಗಿರುವ ಸಮಸ್ಯೆಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಗತ್ಯ ಕ್ರಮಕೈಗೊಳ್ಳಲು ನಿರ್ದೇಶಿಸಿದರು.

“ಬೇಸಿಗೆ ಇರುವುದರಿಂದ ಜಿಲ್ಲೆಯ ಗ್ರಾಮ, ತಾಂಡಾ, ಜನವಸತಿ ಪ್ರದೇಶ ಸೇರಿದಂತೆ ಇತರೆ ಯಾವುದೇ ಭಾಗದಲ್ಲಿ ನೀರಿನ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕು. ಜಾನುವಾರುಗಳಿಗೂ ಕುಡಿಯುವ ನೀರಿನ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಎಲ್ಲೇ ನೀರಿನ ಸಮಸ್ಯೆಗಳಿದ್ದರೆ ದಿನದ 24ಗಂಟೆಗಳಲ್ಲಿ ಸಂಬಂಧಿಸಿದ ಇಲಾಖೆಯವರು ಪರಿಹಾರ ಒದಗಿಸಬೇಕು” ಎಂದರು.

“ಗ್ರಾಮ ಪಂಚಾಯತ ಹಂತದಲ್ಲಿ ಪಿಡಿಒ, ತಾಲ್ಲೂಕು ಹಂತದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ನಗರ, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ನೀರಿನ ಯಾವುದೇ ಸಮಸ್ಯೆಗಳಿದ್ದರೆ ತಕ್ಷಣ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತರಬೇಕು. ಮೇ ಮತ್ತು ಜೂನ್ ಇನ್ನೂ 2 ತಿಂಗಳು ಜಿಲ್ಲೆಯ ಯಾವುದೇ ಭಾಗದಲ್ಲಿ ನೀರಿನ ಸಮಸ್ಯೆ ಆಗಬಾರದು. ಕುಡಿಯುವ ನೀರಿನ ಯಾವುದೇ ಬಿಲ್‌ಗಳನ್ನು ಪೆಂಡಿಂಗ್ ಇದ್ದರೆ, ತಕ್ಷಣ ಅವುಗಳನ್ನು ಕ್ಲೀಯರ್ ಮಾಡಬೇಕು” ಎಂದು ಸೂಚಿಸಿದರು.

ʼಜಿಲ್ಲೆಯ ಆಯಾ ತಾಲ್ಲೂಕಿನ ತಹಸೀಲ್ದಾರರು, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಟಾಸ್ಕ್‌ಪೋರ್ಸ್‌ ಸಮಿತಿ ಸಭೆ ನಡೆಸಿ ಯಾವ ಗ್ರಾಮಗಳಲ್ಲಿ ನೀರಿನ ಸಮಸ್ಯೆಗಳಿವೆ, ಏನು ಕ್ರಮ ವಹಿಸಬೇಕು ಎಂಬುದರ ಕುರಿತು ಚರ್ಚಿಸಬೇಕು. ಔರಾದ, ಭಾಲ್ಕಿ, ಹುಮನಾಬಾದ, ಬಸವಕಲ್ಯಾಣ ಸೇರಿದಂತೆ ಎಲ್ಲಾ ತಾಲೂಕಿನ ತಹಸೀಲ್ದಾರರು, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಪಿಡಿಒಗಳು ಈ ಕುರಿತು ಮುಂಜಾಗ್ರತೆ ವಹಿಸಬೇಕು. ಬಡಾವಣೆಗೆ ಬಿಡುವ ನೀರಿನ ಗುಣಮಟ್ಟ ಪರೀಕ್ಷಿಸಿ, ಓವರ್ ಹೆಡ್ ಟ್ಯಾಂಕ್‌ಗಳನ್ನು ಸ್ವಚ್ಚಗೊಳಿಸಬೇಕುʼ ಎಂದು ತಿಳಿಸಿದರು.

WhatsApp Image 2026 04 09 at 3.37.58 PM
ಸಭೆಯಲ್ಲಿ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದರು.

ಜಿಲ್ಲೆಯಲ್ಲಿ ಸಿಲಿಂಡರ್ ಗ್ಯಾಸ್ ಸಮಸ್ಯೆ ಇದೆಯೇ ಎಂಬುದರ ಕುರಿತು ಮಾಹಿತಿ ಪಡೆದು, ಎಲ್ಲಿಯೂ ಗ್ಯಾಸ್‌ಗಳನ್ನು‌ ಕಾಳಸಂತೆಯಲ್ಲಿ ಮಾರಾಟ ಆಗದಂತೆ ನೋಡಿಕೊಳ್ಳಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ : ಅತ್ತ ಧಗೆ, ಇತ್ತ ದಾಹ: ತುಂಬಿದ ಕೆರೆಕಟ್ಟೆಗಳಿದ್ದರೂ ಕುಡಿಯುವ ನೀರಿಗೆ ಹಾಹಾಕಾರ!

ʼಬೀದರ ನಗರದಲ್ಲಿ ರಾಜ್ಯ ಮಟ್ಟದ ಪರ್ತಕರ್ತರ ಅದ್ದೂರಿ ಸಮ್ಮೇಳನ ನಡೆಯುತ್ತಿರುವುದರಿಂದ ಬೀದರ್ ನಗರ ಸ್ವಚ್ಛತೆ ನಡೆಸಬೇಕು. ಎಲ್ಲಿಯೂ ಪ್ಲಾಸ್ಟಿಕ್ ತ್ಯಾಜ್ಯ ಕಾಣದಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮಕ್ಕೆ ಬರುವ ಜನರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಆಗಬೇಕುʼ ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ಜಾತ್ರೆಗೆ ತೆರಳಿ ಬರುವಾಗ ರಸ್ತೆ ಅಪಘಾತ : ಓರ್ವ ಸಾವು; ಹಲವರಿಗೆ ಗಾಯ

ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್, ಬೀದರ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಷ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಹಾಗೂ ಸಹಾಯಕ ಆಯುಕ್ತರು, ಜಿಲ್ಲೆಯ ಎಲ್ಲಾ ತಾಲ್ಲೂಕಿನ ತಹಸೀಲ್ದಾರರು, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಬೀದರ್‌ | ನ.28, 29ರಂದು ಅನುಭವ ಮಂಟಪ ಉತ್ಸವ : ತುಮಕೂರು ಸಿದ್ಧಗಂಗೆ ಶ್ರೀಗಳಿಗೆ ಆಹ್ವಾನ

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28...