ಬೀದರ್‌ | ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಸಾಧನೆಗೈದ 58 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Date:

ಬೀದರ ತಾಲೂಕಿನ ಜನವಾಡ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸಾಹಿತ್ಯರತ್ನ ಅಣ್ಣಾಭಾವ ಸಾಠೆ ಸಾಂಸ್ಕೃತಿಕ, ಸಾಹಿತ್ಯಿಕ ಲೋಕಮಂಚ ಟ್ರಸ್ಟ್ ವತಿಯಿಂದ ಮಂಗಳವಾರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

- Advertisement -

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ ಶಾಲೆಗೆ ಶೇ.100ರಷ್ಟು ಫಲಿತಾಂಶ ತಂದುಕೊಟ್ಟ ವಿದ್ಯಾರ್ಥಿಗಳನ್ನು ಟ್ರಸ್ಟ್ ಅಧ್ಯಕ್ಷ ಎಂ.ಎಸ್. ಮನೋಹರ ಅವರು ಶಾಲು ಹೊದಿಸಿ, ಪದಕ ಹಾಗೂ ಪ್ರಶಂಸಾ ಪತ್ರ ನೀಡಿ ಸನ್ಮಾನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಎಂ.ಎಸ್. ಮನೋಹರ ಮಾತನಾಡಿ,” ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿರುವುದು ಹೆಮ್ಮೆಯ ಸಂಗತಿ. ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳು, ಸಾಮಾಜಿಕ ಜವಾಬ್ದಾರಿ, ಹಿರಿಯರಿಗೆ ಗೌರವ, ಪ್ರಾಮಾಣಿಕತೆ, ಶಿಸ್ತು, ಸೇವಾ ಮನೋಭಾವ ಮತ್ತು ದೇಶಪ್ರೇಮವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

DSC 1684

ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯ ಶಿಕ್ಷಕ ಗೋಪಾಲರಾವ ಪಡವಲಕರ್ ಮಾತನಾಡಿ, “ಶಾಲೆಯು ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಸಾಧಿಸಿರುವುದು ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಸಮರ್ಪಣೆ ಹಾಗೂ ಪೋಷಕರ ಸಹಕಾರದ ಫಲವಾಗಿದೆ. 58 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುತ್ತಿರುವ ಟ್ರಸ್ಟ್‌ನ ಕಾರ್ಯ ಶ್ಲಾಘನೀಯ” ಎಂದರು.

ಇದನ್ನೂ ಓದಿ : ಬೀದರ್‌ | JEE ಫಲಿತಾಂಶ : ಚನ್ನಬಸವೇಶ್ವರ ಗುರುಕುಲದ 64 ವಿದ್ಯಾರ್ಥಿಗಳು ಐಐಟಿ ಪ್ರವೇಶಕ್ಕೆ ಅರ್ಹತೆ

ಕಾರ್ಯಕ್ರಮದಲ್ಲಿ ಟ್ರಸ್ಟ್ ಕಾರ್ಯದರ್ಶಿ ಪ್ರವೀಣಚಂದ್ರ ಮೀರಾಗಂಜಕರ್, ಜಂಟಿ ಕಾರ್ಯದರ್ಶಿ ಮನೋಹರ ಮಿರ್ಜಾಪೂರಕರ್, ಎಸ್‌ಡಿಎಂಸಿ ಅಧ್ಯಕ್ಷ ಶಿವಾಜಿ ಪಾಂಡ್ರೆ, ಪಿಕೆಪಿಎಸ್ ಉಪಾಧ್ಯಕ್ಷ ರಾಜಕುಮಾರ ಪಾಂಡ್ರೆ, ಗ್ರಾಮ ಪಂಚಾಯಿತಿ ಸದಸ್ಯ ಗಣಪತಿ ಹಾಗೂ ಎಸ್‌ಡಿಎಂಸಿ ಉಪಾಧ್ಯಕ್ಷೆ ಗೀತಾ ಠಾಕೂರ ಉಪಸ್ಥಿತರಿದ್ದರು. ಶಿಕ್ಷಕ ತಾನಾಜಿ ನವೋಟೆ ಸ್ವಾಗತಿಸಿದರು. ಶಿಕ್ಷಕ ಶಶಿಕಾಂತ ಹೆಗಡೆ ನಿರೂಪಿಸಿದರು. ಶಿಕ್ಷಕ ವಿಜಯಕುಮಾರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...