ಬೀದರ್‌ | ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನೋತ್ಸವ ಆಚರಣೆ

Date:

ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ಜಿಲ್ಲಾ ಸಮಿತಿ ಸಹಯೋಗದಲ್ಲಿ ದಲಿತ ಚಳವಳಿಯ ಪ್ರಖರ ಹೋರಾಟಗಾರ ಹಾಗೂ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರ 89ನೇ ಜನ್ಮದಿನೋತ್ಸವವನ್ನು ಮಂಗಳವಾರ ಸಂಭ್ರಮದಿಂದ ಆಚರಿಸಲಾಯಿತು.

- Advertisement -

ದಸಂಸ ಜಿಲ್ಲಾ ಸಂಚಾಲಕ ಧನರಾಜ್ ಮುಸ್ತಾಪುರ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಸಂಸ ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಭಾಗವಹಿಸಿ ಕೇಕ್ ಕತ್ತರಿಸುವ ಮೂಲಕ ಜನ್ಮದಿನವನ್ನು ಆಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ಕಾರ್ಯಕ್ರಮದ ಆರಂಭದಲ್ಲಿ ಪ್ರೊ. ಬಿ. ಕೃಷ್ಣಪ್ಪ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ಹೋರಾಟಮಯ ಜೀವನ, ಸಾಮಾಜಿಕ ನ್ಯಾಯಕ್ಕಾಗಿ ನಡೆಸಿದ ಸಂಘಟನಾ ಕಾರ್ಯಗಳು ಹಾಗೂ ಶೋಷಿತ ಸಮುದಾಯಗಳ ಸಬಲೀಕರಣಕ್ಕಾಗಿ ನೀಡಿದ ಕೊಡುಗೆಗಳನ್ನು ಸ್ಮರಿಸಲಾಯಿತು.

ಧನರಾಜ ಮುಸ್ತಾಪುರ ಮಾತನಾಡಿ, “ಪ್ರೊ. ಬಿ. ಕೃಷ್ಣಪ್ಪ ಅವರು ಕರ್ನಾಟಕದಲ್ಲಿ ದಲಿತ ಚಳವಳಿಗೆ ಹೊಸ ಚೈತನ್ಯ ತುಂಬಿದ ನಾಯಕರಾಗಿದ್ದು, ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ತತ್ವದ ಮೂಲಕ ಸಮಾಜದ ಅಸಮಾನತೆಗಳ ವಿರುದ್ಧ ನಿರಂತರ ಹೋರಾಟ ನಡೆಸಿದರು. ಅವರ ನೇತೃತ್ವದಲ್ಲಿ ದಲಿತ ಸಂಘರ್ಷ ಸಮಿತಿಯು ರಾಜ್ಯದಾದ್ಯಂತ ಸಾಮಾಜಿಕ ಜಾಗೃತಿ ಮೂಡಿಸಿ, ಶೋಷಿತ ಸಮುದಾಯಗಳ ಹಕ್ಕುಗಳಿಗಾಗಿ ಬಲಿಷ್ಠ ಧ್ವನಿಯಾಗಿ ಹೊರಹೊಮ್ಮಿತು” ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಮುಖಂಡ ಶಂಕರರಾವ ದೊಡ್ಡಿ ಮಾತನಾಡಿ, “ಪ್ರೊ. ಬಿ. ಕೃಷ್ಣಪ್ಪ ಅವರು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಪರ ಹೋರಾಡಿದ ಅಪರೂಪದ ನಾಯಕರಾಗಿದ್ದರು. ದಲಿತರು, ಹಿಂದುಳಿದವರು ಹಾಗೂ ಶೋಷಿತ ವರ್ಗಗಳ ಹಕ್ಕುಗಳಿಗಾಗಿ ಅವರು ನಡೆಸಿದ ಹೋರಾಟ ಇಂದಿಗೂ ಸಮಾಜಕ್ಕೆ ಮಾರ್ಗದರ್ಶನವಾಗಿದೆ. ಅವರ ಆದರ್ಶಗಳು ಮತ್ತು ವಿಚಾರಧಾರೆಗಳು ಯುವಜನತೆಗೆ ಪ್ರೇರಣೆಯಾಗಿದ್ದು, ಸಮಾಜದಲ್ಲಿ ಸಮಾನತೆಯ ಮೌಲ್ಯಗಳನ್ನು ಬಲಪಡಿಸುತ್ತವೆ” ಎಂದು ತಿಳಿಸಿದರು.

ಮಾದರ ಚೆನ್ನಯ್ಯ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ರಮೇಶ್ ಕಟ್ಟಿತುಗಾಂವ ಮಾತನಾಡಿ, “ಬಿ. ಕೃಷ್ಣಪ್ಪ ಅವರ ಹೋರಾಟದ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿ ಇಂದಿನ ಯುವಕರ ಮೇಲಿದೆ. ಸಾಮಾಜಿಕ ಅಸಮಾನತೆ, ಜಾತಿ ದೌರ್ಜನ್ಯ ಹಾಗೂ ಅನ್ಯಾಯದ ವಿರುದ್ಧ ಸಂಘಟಿತ ಹೋರಾಟ ನಡೆಸುವ ಮೂಲಕ ಸಮಾನತೆಯ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು” ಎಂದು ಕರೆ ನೀಡಿದರು.

ರಾಜಕುಮಾರ ಮೂಲಭಾರತಿ ಮಾತನಾಡಿ, “ಕೃಷ್ಣಪ್ಪನವರು ಕೇವಲ ದಲಿತ ಸಮುದಾಯದ ನಾಯಕನಲ್ಲ, ಸಮಗ್ರ ಸಮಾಜ ಪರಿವರ್ತನೆಯ ಸಂಕೇತವಾಗಿದ್ದರು. ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಸಾಮಾಜಿಕ ನ್ಯಾಯ ಮತ್ತು ಮಾನವೀಯ ಮೌಲ್ಯಗಳ ಸ್ಥಾಪನೆಗೆ ದಾರಿದೀಪವಾಗಿವೆ” ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ : ಬೀದರ್‌ | ರಸಗೊಬ್ಬರ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಕ್ರಮ : ಸಿಇಒ ಗಿರೀಶ ಬದೋಲೆ

ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಮಾರುತಿರಾವ ಶಾಖಾ ಸೇರಿದಂತೆ ಪ್ರಮುಖರಾದ ಶಿವಮೂರ್ತಿ ಸುಬಾನೆ, ವಿಜಯಕುಮಾರ ಐಹೊಳೆ, ವಿಶಾಲ ದೊಡ್ಡಿ, ಪ್ರಶಾಂತ ಭಾವಿಕಟ್ಟಿ, ಬಸವರಾಜ ಭಾವಿದೊಡ್ಡಿ, ಗೌತಮ ಮೇತ್ರೆ, ಗೌತಮ ಬಗದಲ್, ಅನೀಲ ಕಾಂಬಳೆ, ಜೈಪ್ರಕಾಶ ಕೇರೂರಕರ್, ಶಿವು ಗುನ್ನಳ್ಳಿ, ಉಮೇಶ ಮೂಗನೂರೆ, ಎವನ್‌ಕುಮಾರ ಲಾಧೇಕರ್, ಪಪ್ಪು ಯೆರನಳ್ಳಿ, ರಾಮಣ್ಣ ಗಡಿಕೂಸನೂರ, ಗುಂಡಪ್ಪ ದಂಡೆ, ದೇವೇಂದ್ರ ವರ್ಮಾ ಸೇರಿದಂತೆ ದಸಂಸ ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನ ಥೇಣಿ ಕಾರಾಗೃಹದಿಂದ 17 ಖೈದಿಗಳ ಪರಾರಿ: ನಾಟಕವಾಡಿ ಸಿಬ್ಬಂದಿ ಮೇಲೆ ಹಲ್ಲೆ

ತಮಿಳುನಾಡಿನ ಥೇಣಿ ಉಪ ಕಾರಾಗೃಹದಲ್ಲಿ ಸೋಮವಾರ ತಡರಾತ್ರಿ ಸಿನಿಮೀಯ ರೀತಿಯಲ್ಲಿ 17...

‌ಅ.28ರಂದು ಅಪ್ಪಳಿಸಲಿರುವ ʼಅರ್ನಬ್ʼ ಚಂಡಮಾರುತ | 89 ಸಾವಿರ ಜನರ ಸ್ಥಳಾಂತರ; ಆಂಧ್ರದಲ್ಲಿ ಹೈ ಅಲರ್ಟ್

ಆಂಧ್ರಪ್ರದೇಶದ ಕರಾವಳಿಗೆ ‘ಅರ್ನಬ್’ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕೆ...