ಬೀದರ್‌ | ಕೃಷ್ಣಮೃಗ ಬೇಟೆ ಪ್ರಕರಣ: ಮತ್ತೆ ಮೂವರು ಆರೋಪಿಗಳ ಬಂಧನ

Date:

ಬೀದರ್ ಅರಣ್ಯ ವಿಭಾಗದ ವ್ಯಾಪ್ತಿಯ ಹೊನ್ನಿಕೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದ ಸಮೀಪದ ಚೊಂಡಿ, ಮಮದಾಪುರ ಹುಲ್ಲುಗಾವಲು ಪ್ರದೇಶದಲ್ಲಿ ಕೃಷ್ಣಮೃಗ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಜನ ಆರೋಪಿಗಳನ್ನು ಬಂಧಿಸಿ, ಅವರಿಂದ 2 ವಾಹನ ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ರೈಫಲ್‌ನ್ನು ಅರಣ್ಯ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

- Advertisement -

ಆಗಸ್ಟ್ 17ರಂದು ಕೃಷ್ಣಮೃಗಗಳ ಆವಾಸಸ್ಥಾನವಾಗಿರುವ ಚೊಂಡಿ, ಮಮದಾಪುರ ಹುಲ್ಲುಗಾವಲು ಪ್ರದೇಶದಲ್ಲಿ ಕೃಷ್ಣಮೃಗ ಬೇಟೆಯಾಡಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಬೀದರ್ ತಾಲೂಕಿನ ಜೊಂಡಿ ತಾಂಡಾ, ಮಮದಾಪುರ ತಾಂಡಾದ ಗ್ರಾಮಸ್ಥರು ಮೂವರು ಆರೋಪಿಗಳನ್ನು ಹಿಂಬಾಲಿಸಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಬಳಿಕ ಕಾನೂನು ಕ್ರಮಕ್ಕಾಗಿ ಆರೋಪಿಗಳನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಘಟನೆಯ ಸಂದರ್ಭದಲ್ಲಿ ಇನ್ನೂ 3 ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಅವರ ಪತ್ತೆಗಾಗಿ ಅರಣ್ಯ ಇಲಾಖೆ ವಿಶೇಷ ಹುಡುಕಾಟ ತಂಡ ರಚಿಸಿ ಕಾರ್ಯಾಚರಣೆ ಕೈಗೊಂಡಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ಮಾರ್ಗದರ್ಶನದಲ್ಲಿ, ಕಲಬುರಗಿ ಜಿಲ್ಲೆಯ ಪೊಲೀಸರು, ಕಲಬುರಗಿ ವಿಭಾಗದ ಅರಣ್ಯ ಅಧಿಕಾರಿಗಳು ಹಾಗೂ ತೆಲಂಗಾಣ ರಾಜ್ಯದ ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಯಿತು.

ಬಸವಕಲ್ಯಾಣ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮುನೀರ್ ಅಹ್ಮದ್ ಅವರ ನೇತೃತ್ವದಲ್ಲಿ ಬಸವಕಲ್ಯಾಣ ಆರ್‌ಎಫ್‌ಒ ಶಿವಕುಮಾರ ರಾಠೋಡ, ಹುಮನಾಬಾದ ಆರ್‌ಎಫ್‌ಒ ಪವನಕುಮಾರ ಧೂಳೆ ಹಾಗೂ ಭಾಲ್ಕಿ ಡಿಆರ್‌ಎಫ್‌ಒ ಶಾಂತಕುಮಾರ ಅವರ ತಂಡ ಆಗಸ್ಟ್ 18ರಂದು ಕಾರ್ಯಾಚರಣೆ ನಡೆಸಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದೆ.

ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಕಲಬುರಗಿ ಜಿಲ್ಲೆಯ ಮೂವರು ಹಾಗೂ ನೆರೆಯ ತೆಲಂಗಾಣದ ಹೈದರಾಬಾದ್ ಮೂಲದ ಮೂವರು ವ್ಯಕ್ತಿಗಳು ಪ್ರಕರಣದಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ. ತೆಲಂಗಾಣದ ಹೈದರಾಬಾದ್ ಮೂಲದ ಕೆಲವರು ಅತ್ಯಾಧುನಿಕ ಲಾಂಗ್‌ರೇಂಜ್ ರೈಫಲ್‌ಗಳನ್ನು ಬಳಸಿಕೊಂಡು ವನ್ಯಪ್ರಾಣಿಗಳ ಬೇಟೆಯಲ್ಲಿ ತೊಡಗಿರುವ ಕುರಿತು ಅರಣ್ಯ ಇಲಾಖೆಯ ಗಮನಕ್ಕೆ ಬಂದಿದ್ದು, ಈ ಪ್ರಕರಣವನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಮುಂದಿನ ತನಿಖೆಯನ್ನು ಬೀದರ್ ಆರ್‌ಎಫ್‌ಒ ಪ್ರವೀಣಕುಮಾರ ಮುಂದುವರಿಸಿದ್ದಾರೆ.

WhatsApp Image 2026 08 19 at 3.48.03 PM

ಕೃಷ್ಣಮೃಗ ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅಡಿಯಲ್ಲಿ ಶೆಡ್ಯೂಲ್–1ರ ಸಂರಕ್ಷಿತ ವನ್ಯಜೀವಿಯಾಗಿದೆ. ಇದರ ಬೇಟೆ ಅಥವಾ ಹತ್ಯೆ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದ್ದು, ಇಂತಹ ಕೃತ್ಯಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ.

ವನ್ಯಜೀವಿ ಬೇಟೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಧೈರ್ಯ ಹಾಗೂ ಸಮಯಪ್ರಜ್ಞೆಯಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ ಜೊಂಡಿ ಮತ್ತು ಮಮದಾಪುರ ತಾಂಡಾದ ಗ್ರಾಮಸ್ಥರ ಕಾರ್ಯವನ್ನು ಇಲಾಖೆ ಶ್ಲಾಘಿಸಿದೆ.

ಇದನ್ನೂ ಓದಿ : ಬೀದರ್‌ | ಭಾರತ ಜೋಡೊ ಯುವ ಸಂಘಗಳ ನೋಂದಣಿ ಪ್ರಾರಂಭ

ಜಿಲ್ಲೆಯ ಸಾರ್ವಜನಿಕರು ತಮ್ಮ ಗಮನಕ್ಕೆ ಬರುವ ಯಾವುದೇ ವನ್ಯಜೀವಿ ಬೇಟೆ, ಅಕ್ರಮ ಬೇಟೆ ಅಥವಾ ವನ್ಯಜೀವಿಗಳಿಗೆ ಸಂಬಂಧಿಸಿದ ಕಾನೂನುಬಾಹಿರ ಚಟುವಟಿಕೆಗಳ ಕುರಿತು ತಕ್ಷಣ ಸಮೀಪದ ಅರಣ್ಯ ಇಲಾಖೆ ಅಧಿಕಾರಿಗಳು ಅಥವಾ ಸಿಬ್ಬಂದಿಗೆ ಮಾಹಿತಿ ನೀಡಬೇಕು. ಸಾರ್ವಜನಿಕರ ಸಹಕಾರ ವನ್ಯಜೀವಿ ಸಂರಕ್ಷಣೆಯಲ್ಲಿ ಅತ್ಯಂತ ಮಹತ್ವದ್ದಾಗಿದ್ದು, ಎಲ್ಲರೂ ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸಿ ವನ್ಯಜೀವಿಗಳ ರಕ್ಷಣೆಗೆ ಸಹಕರಿಸುವಂತೆ ಬೀದರ್ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮೀತಕುಮಾರ್ ಸುಭಾಷರಾವ್ ಪಾಟೀಲ್ ಅವರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...