ಬೀದರ | ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ : 105 ಸಿಲಿಂಡರ್ ವಶಕ್ಕೆ, ನಾಲ್ವರ ಬಂಧನ

Date:

ಬೀದರ ತಾಲೂಕಿನ ಜನವಾಡ ಸಮೀಪದ ಔರಾದ್ ರಸ್ತೆಯಲ್ಲಿ ಕಾಳಸಂತೆಯಲ್ಲಿ ಅಕ್ರಮವಾಗಿ ಸಿಲಿಂಡರ್ ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ 105 ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ಭಾನುವಾರ ಸಂಜೆ ಜನವಾಡ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಗೃಹಬಳಕೆ ಹಾಗೂ ವಾಣಿಜ್ಯ ಬಳಕೆಯ (ಖಾಲಿ 82, ತುಂಬಿದ 23) ಒಟ್ಟು 105 ಸಿಲಿಂಡರ್ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಬೀದರ್ ಗ್ರಾಮೀಣ ವೃತ್ತ ಸಿಪಿಐ ಜಿ.ಎಸ್. ಬಿರಾದರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ₹2.55 ಲಕ್ಷ ಮೌಲ್ಯದ ಸಿಲಿಂಡರ್‌ಗಳ ಜೊತೆಗೆ ₹16 ಲಕ್ಷ ಮೌಲ್ಯದ ಎರಡು ವಾಹನಗಳನ್ನು ಸೇರಿ ಒಟ್ಟು ₹18.55 ಲಕ್ಷ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಜನವಾಡ ಠಾಣೆಯ ಪ್ರಭಾರ ಎಎಸ್ಐ ವಿಶ್ವನಾಥ, ಸಿಬ್ಬಂದಿಗಳಾದ ವಿಜಯಕುಮಾರ್, ಶಿವಕುಮಾರ್, ಶಾಂತಕುಮಾರ್, ಆಹಾರ ನಿರೀಕ್ಷಕ ಶ್ರೀನಿವಾಸ ಹಾಗೂ ಬೀದರ್ ಡಿಎಸ್ಬಿ ಘಟಕದ ಗುಂಡಪ್ಪ, ಸಂತೋಷ ಸೇರಿದಂತೆ ಇತರರು ಭಾಗವಹಿಸಿದ್ದರು.

1005017545 1
ಪತ್ರಿಕಾಗೋಷ್ಠಿ

ಈ ಸಂಬಂಧ ಜನವಾಡ ಠಾಣೆಯಲ್ಲಿ ನಾಲ್ವರು ಆರೋಪಿಗಳ ಜೊತೆಗೆ ನಾಲ್ಕು ಏಜೆನ್ಸಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಅಶಾಂತಿ ಹಾಗೂ ಯುದ್ಧ ಪರಿಸ್ಥಿತಿಯಿಂದ ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಈ ಹಿನ್ನೆಲೆ ಕೆಲವರು ಗೃಹ ಬಳಕೆಯ ಸಿಲಿಂಡರ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಎಎಸ್ಪಿ ಚಂದ್ರಕಾಂತ ಪೂಜಾರ್, ಡಿಎಸ್ಪಿ ದೂದ್ ಪೀರ್ ಹುಸೇನಸಾಬ್ ಮುಲ್ಲಾ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸೆ.17ರಂದು ಕಲಬುರಗಿಯಲ್ಲಿ ಸಂಕಲ್ಪ ಸಮಾವೇಶ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿ ಕೇಂದ್ರ ಸಮಿತಿ ವತಿಯಿಂದ...

ಬೀದರ್‌ | ಬಾರದ ಮಳೆ, ಒಣಗಿದ ಬೆಳೆ : ಟ್ರ್ಯಾಕ್ಟರ್‌ನಿಂದ ಸೋಯಾಬೀನ್‌ ಬೆಳೆ ನಾಶಪಡಿಸಿದ ರೈತ

ಮಳೆ ಕೊರತೆಯಿಂದ ಬೆಳೆ ಬಾಡುತ್ತಿರುವುದನ್ನು ಕಂಡು ನಿರಾಸೆಗೊಂಡ ರೈತರೊಬ್ಬರು, ಮೂರು ಎಕರೆ...

ಹುಲಸೂರ ತಾಲೂಕು ಬರ ಘೋಷಣೆಗೆ ಆಗ್ರಹ : 5ನೇ ದಿನ ಪೂರೈಸಿದ ಧರಣಿ ಸತ್ಯಾಗ್ರಹ

ಹುಲಸೂರ ತಾಲೂಕು ಬರಪೀಡಿತ ಘೋಷಿಸಬೇಕೆಂದು ಆಗ್ರಹಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು...

ಬೀದರ್‌ | ನೆಟ್‌ವರ್ಕ್ ಸಮಸ್ಯೆ : ಮೊಬೈಲ್‌ ಕರೆ, ರೇಷನ್‌ ಕಾರ್ಡ್ ಬಯೋಮೆಟ್ರಿಕ್‌ಗಾಗಿ ಗ್ರಾಮಸ್ಥರ ಪರದಾಟ!

ದೇಶ 5ಜಿ ಅಂತರ್ಜಾಲ ಸೇವೆ, ಎಐ ತಂತ್ರಜ್ಞಾನದಂತಹ ಅತ್ಯಾಧುನಿಕ ಕಾಲದಲ್ಲಿದೆ. ಆದರೆ,...