ಬೀದರ್‌ | ನಾಮಫಲಕಗಳಲ್ಲಿ ಕನ್ನಡ ಭಾಷೆ ಬಳಕೆಗೆ ಒತ್ತಾಯ

Date:

ಬೀದರ್ ನಗರದ ಅಂಗಡಿ-ಮುಂಗಟ್ಟುಗಳು, ಶಾಲಾ-ಕಾಲೇಜುಗಳು, ಆಸ್ಪತ್ರೆಗಳು, ಹೋಟೆಲ್‌ಗಳು ಸೇರಿದಂತೆ ಎಲ್ಲ ವಾಣಿಜ್ಯ ಮತ್ತು ಸಾರ್ವಜನಿಕ ಸಂಸ್ಥೆಗಳ ನಾಮಫಲಕಗಳ ಮೇಲ್ಭಾಗದ ಶೇ.60ರಷ್ಟು ಜಾಗದಲ್ಲಿ ಕನ್ನಡ ಭಾಷೆ ಬಳಸುವುದನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು ಎಂದು ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕ ಆಗ್ರಹಿಸಿದೆ.

- Advertisement -

ಈ ಕುರಿತು ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ ಮಹಾನಗರ ಪಾಲಿಕೆ ಆಯುಕ್ತರಿಗೆ ಉದ್ದೇಶಿಸಿ ಬರೆದ ಮನವಿ ಪತ್ರವನ್ನು ಪಾಲಿಕೆ ಅಧಿಕಾರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ರಾಜ್ಯ ಸರ್ಕಾರವು ನಾಮಫಲಕಗಳಲ್ಲಿ ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದರೂ, ಬೀದರ್ ನಗರದಲ್ಲಿ ಅದರ ಸಮರ್ಪಕ ಅನುಷ್ಠಾನವಾಗುತ್ತಿಲ್ಲ. ಅನ್ಯ ಭಾಷೆಗಳ ನಾಮಫಲಕಗಳೇ ಹೆಚ್ಚಾಗಿ ಕಾಣಿಸುತ್ತಿವೆ ಎಂದು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ಆರೋಪಿಸಿದರು.

ನಾಮಫಲಕಗಳಲ್ಲಿ ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸುವಂತೆ ಈ ಹಿಂದೆಯೂ ಎರಡು ಬಾರಿ ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಲಾಗಿದೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕನ್ನಡ ಭಾಷೆಯ ಅನುಷ್ಠಾನದ ವಿಷಯದಲ್ಲಿ ಪಾಲಿಕೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ಸರಿಯಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

WhatsApp Image 2026 10 10 at 7.46.08 PM 27
ಜಾಹೀರಾತು

ನಗರದ ಸೌಂದರ್ಯ ಹೆಚ್ಚಿಸುವ ಉದ್ದೇಶದಿಂದ ಅಳವಡಿಸಿರುವ ಆಕರ್ಷಕ ವಿದ್ಯುತ್ ಕಂಬಗಳಿಗೂ ಆಂಗ್ಲ ಭಾಷೆಯ ಪೋಸ್ಟರ್‌ಗಳನ್ನು ಅಂಟಿಸಲಾಗುತ್ತಿದೆ. ಇಂತಹ ಪೋಸ್ಟರ್‌ಗಳನ್ನು ಅಳವಡಿಸಲು ಪಾಲಿಕೆ ಅಧಿಕಾರಿಗಳು ಹೇಗೆ ಅನುಮತಿ ನೀಡಿದ್ದಾರೆ. ಸರ್ಕಾರದ ಆದೇಶಕ್ಕೆ ಬೆಲೆ ಇಲ್ಲವೇ. ನಗರದ ಎಲ್ಲ ಖಾಸಗಿ ಆಸ್ಪತ್ರೆ, ಹೋಟೆಲ್‌ಗಳು, ವಾಣಿಜ್ಯ ಮಳಿಗೆಗಳು, ಸಾರ್ವಜನಿಕ ಸಂಸ್ಥೆಗಳು ಹಾಗೂ ಇತರ ಕಟ್ಟಡಗಳ ನಾಮಫಲಕಗಳಲ್ಲಿ ಅ.30ರೊಳಗೆ ಕನ್ನಡ ಬಳಕೆ ಕಡ್ಡಾಯವಾಗಿ ಜಾರಿಗೊಳಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಅಕ್ಟೋಬರ್ ಅಂತ್ಯದೊಳಗೆ ಬೀದರ್ ನಗರದ ಎಲ್ಲ ನಾಮಫಲಕಗಳು ಕನ್ನಡಮಯವಾಗಬೇಕು. ಇಲ್ಲವಾದಲ್ಲಿ ನವೆಂಬರ್ ಮೊದಲ ವಾರದಲ್ಲಿ ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕ ಎಚ್ಚರಿಕೆ ನೀಡಿದೆ.

WhatsApp Image 2026 10 10 at 6.59.42 PM 14

ಇದನ್ನೂ ಓದಿ : ಬೀದರ್‌ | ಹಸ್ತಪ್ರತಿಗಳ ಸಂಗ್ರಹ, ಸಂರಕ್ಷಣೆ ಅತ್ಯಗತ್ಯ : ವೀರಣ್ಣ ದಂಡೆ

ಸೇನೆಯ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ದತ್ತು ಅಲ್ಲಂಕೇರೆ, ಉದಯ ಅಷ್ಟೂರೆ, ಶಿವತೀರ್ಥ ಸ್ವಾಮಿ, ಬೀದರ್ ಉತ್ತರ ಘಟಕದ ಅಧ್ಯಕ್ಷ ಅನಿಲ್ ರಾಜಗೀರಾ, ನಗರ ಘಟಕದ ಅಧ್ಯಕ್ಷ ಸಂತೋಷ್ ಪಾಟೀಲ, ಪದಾಧಿಕಾರಿಗಳಾದ ಗಿರೀಶ್ ಬಿರಾದಾರ, ಮಹಾರುದ್ರ ಅಮದಲಪಾಡೆ, ರವಿ ಪಾಟೀಲ, ಅನಿಲ್ ರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥರನ್ನು ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ಗೆ ದೂರು

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸುತ್ತಿರುವ...

ರೈತರ ನಷ್ಟ ತಡೆಯಲು ಹಾಲಿನ ದರ ಏರಿಕೆ: ಸಿಎಂ ಡಿ ಕೆ ಶಿವಕುಮಾರ್

“ಕಳೆದ ಒಂದೆರಡು ವರ್ಷದಿಂದ ಹಾಲಿನ ದರ ಏರಿಸಲು ಬೇಡಿಕೆ ಇತ್ತು. ರೈತರ...

ಸಿಇಸಿ ಗ್ಯಾನೇಶ್ ವಿರುದ್ಧ ‘ಮಹಾಭಿಯೋಗ’ಕ್ಕೆ ‘ಇಂಡಿಯಾ’ ಒಕ್ಕೂಟದಿಂದ ಅಣಕು ಸಂಸತ್ ಅಧಿವೇಶನ

ಸಿಇಸಿ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಸಾಂಕೇತಿಕವಾಗಿ 'ಮಹಾಭಿಯೋಗ' (ವಜಾ) ನಿರ್ಣಯ...

ಬ್ಲೂಟೂತ್‌ ಪದಕ್ಕಿದೆ ಸಾವಿರ ವರ್ಷಗಳ ಇತಿಹಾಸ: ಇದು ನಿಮಗೆ ಗೊತ್ತೇ?

ಬ್ಲೂಟೂತ್‌ನ ಲೋಗೋ ಸಹ ಕೇವಲ ಒಂದು ಜ್ಯಾಮಿತೀಯ ವಿನ್ಯಾಸವಲ್ಲ. ಅದು ಹರಾಲ್ಡ್...