ಬೀದರ್‌ | ಕಲ್ಯಾಣ ಕರ್ನಾಟಕ ಉತ್ಸವ ಅದ್ದೂರಿ ಆಚರಣೆ : ಡಿಸಿ ಶಿಲ್ಪಾ ಶರ್ಮಾ

Date:

ಪ್ರತಿ ವರ್ಷದಂತೆ ಸೆ.17ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಅತ್ಯಂತ ಅದ್ದೂರಿ ಹಾಗೂ ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೆಪ್ಟೆಂಬರ್ 17ರಂದು ನಡೆಯಲಿರುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, “ಕಲ್ಯಾಣ ಕರ್ನಾಟಕ ಉತ್ಸವ ದಿನಚಾರಣೆಯು ಈ ಬಾರಿಯೂ ಅತ್ಯಂತ ವೈಭವದಿಂದ ಆಚರಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಅಂದು ಬೆಳಿಗ್ಗೆ 7:45ಕ್ಕೆ ಜಿಲ್ಲೆಯ ಎಲ್ಲಾ ಸರ್ಕಾರಿ, ಅರೆ-ಸರ್ಕಾರಿ ಕಚೇರಿಗಳು ಹಾಗೂ ಸಂಘ-ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಧ್ವಜಾರೋಹಣ ನೆರವೇರಿಸಬೇಕು. ನಂತರ 8:15ಕ್ಕೆ ವಿಶ್ವಗುರು ಬಸವೇಶ್ವರ ವೃತ್ತದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆ ಆರಂಭವಾಗಲಿದೆ ಎಂದು ತಿಳಿಸಿದರು.

ಮೆರವಣಿಗೆಯು ಭಗತ್ ಸಿಂಗ್ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಹಾಗೂ ಜನರಲ್ ಕರಿಯಪ್ಪ ವೃತ್ತದ ಮಾರ್ಗವಾಗಿ ನೆಹರು ಕ್ರೀಡಾಂಗಣ ತಲುಪಲಿದೆ. ಮೆರವಣಿಗೆಯಲ್ಲಿ ವಿವಿಧ ಶಾಲಾ-ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದು, ವಿವಿಧ ಕಲಾತಂಡಗಳು ಮೆರಗು ನೀಡಲಿವೆ. ಬಳಿಕ ಬೆಳಿಗ್ಗೆ 9 ಗಂಟೆಗೆ ನೆಹರು ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಲಿದೆ ಎಂದರು.

ಮೆರವಣಿಗೆ ಮಾರ್ಗದಲ್ಲಿ ಸುಗಮ ಸಂಚಾರ ಹಾಗೂ ಸೂಕ್ತ ಪೊಲೀಸ್ ಬಂದೋಬಸ್ತ್, ಕ್ರೀಡಾಂಗಣದಲ್ಲಿ ಕುಡಿಯುವ ನೀರು, ವಾಟರ್‌ಪ್ರೂಫ್ ಟೆಂಟ್, ಶಾಮಿಯಾನ, ಆಸನ ವ್ಯವಸ್ಥೆ ಹಾಗೂ ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಶಾಲೆಗಳು ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಕಡ್ಡಾಯವಾಗಿ ಧ್ವಜಾರೋಹಣ ಮಾಡುವುದು ಮತ್ತು ಪ್ರಮುಖ ವೃತ್ತಗಳಿಗೆ ದೀಪಾಲಂಕಾರ ಮಾಡುವಂತೆ ಅವರು ತಿಳಿಸಿದರು.

ಕಲ್ಯಾಣ ಕರ್ನಾಟಕ ವಿಮೋಚನಾ ಹೋರಾಟಗಾರರ ಸ್ಮರಣಾರ್ಥ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಉಪನ್ಯಾಸ ಕಾರ್ಯಕ್ರಮ ಆಯೋಜಿಸುವಂತೆ ಸಭೆಯಲ್ಲಿ ಪಾಲ್ಗೊಂಡಿದ್ದ ಗಣ್ಯರು ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಅಪರ ಜಿಲ್ಲಾಧಿಕಾರಿ ಸುರೇಖಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಗಣ್ಯರು ಸ್ಥಿತರಿದ್ದರು.

ಅಧಿಕಾರಿಗಳು ಶಿಷ್ಟಾಚಾರ ಪಾಲಿಸಲಿ: 

ಜಿಲ್ಲೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಸರ್ಕಾರದ ಮಾರ್ಗಸೂಚಿಯಂತೆ ಶಿಷ್ಟಾಚಾರ ಪಾಲಿಸತಕ್ಕದ್ದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ : ಬೀದರ್‌ | ಬ್ರಿಮ್ಸ್‌ನಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ, ಗುಣಮಟ್ಟ ಔಷಧಿ ನೀಡಿ : ಕರವೇ ಪ್ರತಿಭಟನೆ

ಈ ಹಿಂದೆ ಕೆಲ ತಾಲೂಕು ಮಟ್ಟದ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದ್ದು, ಇದರಿಂದ ಜಿಲ್ಲಾಡಳಿತಕ್ಕೆ ತೊಂದರೆ ಉಂಟಾಗಿತ್ತು. ಯಾವುದೇ ಅಧಿಕಾರಿಗಳು ಲೋಪ ದೋಷ ಕಂಡು ಬಂದಲ್ಲಿ ಆಯಾ ಇಲಾಖೆಯ ಅಧಿಕಾರಿಗಳೇ ನೇರ ಜವಾಬ್ಧಾರಿಯಾಗುತ್ತಾರೆ. ಸರ್ಕಾರದ ಮಾರ್ಗಸೂಚಿಯಂತೆ ಸರ್ಕಾರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅವರು ಸೂಚಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೇವೆ ಮೊದಲು, ಪರಿಶೀಲನೆ ಆಮೇಲೆ: ಫಲಾನುಭವಿಗಳಿಗೆ ತ್ವರಿತ ಸೇವೆ ನೀಡಲು ರಾಜ್ಯ ಸರ್ಕಾರದ ಹೊಸ ಆದೇಶ

ರಾಜ್ಯ ಸರ್ಕಾರವು ನಾಗರಿಕರಿಗೆ ಮುಂಚಿತವಾಗಿ ಅರ್ಹತೆಯ ಪರಿಶೀಲನೆಯಿಲ್ಲದೆ ಸೇವೆಗಳು ಮತ್ತು ಯೋಜನೆಯ...

ಅವಳ ಕಣ್ಣೋಟ | ‘ಉಯರೆ’- ಸುಟ್ಟದ್ದು ಮುಖವಷ್ಟೇ, ಬದುಕಿನ ಮೇಲಿನ ಹಕ್ಕಲ್ಲ…

ಒಬ್ಬ ಮಹಿಳೆ ತನ್ನನ್ನು ನಿರಾಕರಿಸಿದಳೆಂಬ ಕಾರಣಕ್ಕೆ ಆಕೆಯ ಬದುಕನ್ನೇ ನಾಶಮಾಡುವ ಹಕ್ಕು...

ಬೀದರ್‌ | ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಬಸವರಾಜ ಬಲ್ಲೂರ ಆಯ್ಕೆ

ಅಧ್ಯಯನ, ಅಧ್ಯಾಪನದ ಜೊತೆಗೆ ಸಾಹಿತ್ಯಿಕ ಹಾಗೂ ಸಮಾಜೋಧಾರ್ಮಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ...

ಬೀದರ್ ಜಿಲ್ಲಾ ಪ್ರಥಮ ದಲಿತ-ಬಂಡಾಯ ಸಮ್ಮೇಳನ : ಸರ್ವಾಧ್ಯಕ್ಷರಾಗಿ ಮಾರುತಿ ಬೌದ್ಧೆ ಆಯ್ಕೆ

ಬೀದರ್ ಜಿಲ್ಲಾ ಪ್ರಥಮ ದಲಿತ-ಬಂಡಾಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರಗತಿಪರ ಚಿಂತಕ ಹಾಗೂ...