ಬೀದರ್‌ | ಜಮಾಅತೆ ಇಸ್ಲಾಮಿ ಹಿಂದ್‌ ಘಟಕದಿಂದ ವಿಶ್ವ ಪರಿಸರ ದಿನ ಆಚರಣೆ, ಪುಸ್ತಕ ಬಿಡುಗಡೆ

Date:

ಜೂ.5ರಂದು ವಿಶ್ವ ಪರಿಸರ ದಿನಾಚರ ಣೆಯ ಪ್ರಯುಕ್ತ ಜಮಾಅತೆ ಇಸ್ಲಾಮಿ ಹಿಂದ್ ಜಿಲ್ಲಾ ಘಟಕದಿಂದ ಬೀದರ್‌ ನಗರದಲ್ಲಿ ಪರಿಸರ ಜಾಗೃತಿ, ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಘಟಕದ ನಗರ ಅಧ್ಯಕ್ಷ ಮೊಹಮ್ಮದ್ ಮೌಆಜಮ್ ತಿಳಿಸಿದ್ದಾರೆ.

- Advertisement -

ಬುಧವಾರ ನಗರದ ಜಮಾಅತೆ ಇಸ್ಲಾಮಿ ಹಿಂದ್‌ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಪರಿಸರ ಮನುಷ್ಯನ ಬದುಕಿಗೆ ಅನಿವಾರ್ಯವಾಗಿದೆ. ಆದರೆ, ಇಂದು ಮನುಷ್ಯನ ಆಡಂಬರ ಜೀವನದಿಂದ ಪರಿಸರ ಮಾಲಿನ್ಯಗೊಳ್ಳುತ್ತಿದೆ. ಹೀಗಾಗಿ ಪರಿಸರ ಸಂರಕ್ಷಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಜಮಾಅತೆ ಇಸ್ಲಾಮಿ ಹಿಂದ್‌ ವತಿಯಿಂದ ರಾಜ್ಯಾದ್ಯಂತ ನಡೆಯುತ್ತಿದ್ದು, ಈ ಅಭಿಯಾನ ಬೀದರ್‌ ನಗರದಲ್ಲಿಯೂ ಹಮ್ಮಿಕೊಳ್ಳಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಜೂ.4ರಂದು ಬೀದರ್ ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್ ಅವರನ್ನು ಭೇಟಿಯಾಗಿ ಗ್ರೀನ್‌ ಸಿಟಿ ಹಾಗೂ ಕಸ, ಪ್ಲಾಸ್ಟಿಕ್‌ ಮುಕ್ತ ನಗರ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿ ಮನವಿ ಪತ್ರ ಸಲ್ಲಿಸಲಾಗುವುದು. ಜೂನ್ 5ರಂದು ಶಾಹಿನ್ ಕ್ಯಾಂಪಸ್‌ನಲ್ಲಿರುವ ಸಭಾಂಗಣದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಪರಿಸರ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ʼಪರಿಸರ ಸಂರಕ್ಷಣೆ ಮತ್ತು ಇಸ್ಲಾಮಿನ ಬೋಧನೆಗಳುʼ ಎಂಬ ಕಿರುಪುಸ್ತಕ ಬಿಡುಗಡೆ ಮಾಡಲಾಗುವುದುʼ ಎಂದು ಮಾಹಿತಿ ನೀಡಿದರು.

ಜಮಾಅತೆ ಘಟಕದ ಮುಹಮ್ಮದ್ ನಿಜಾಮುದ್ದೀನ್ ಮಾತನಾಡಿ, “ಪರಿಸರ ಮಾಲಿನ್ಯದಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ನಮ್ಮ ಬದುಕಿಗೆ ಆಧಾರವಾದ ಗಾಳಿ, ನೀರು ಹಾಗೂ ಭೂಮಿಯನ್ನು ಸ್ವಚ್ಛವಾಗಿಟ್ಟು ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಬೀದರ್‌ ನಗರದ ಕೋಟೆಯಿಂದ ಫತೇ ದರ್ವಾಜಾ ಹಾಗೂ ಚೌಬಾರಾದಿಂದ ನಯಾಕಮಾನ್‌ ತನಕ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶುಕ್ರವಾರದ ಧಾರ್ಮಿಕ ಪ್ರವಚನಗಳ ಮೂಲಕ ನಿಸರ್ಗ ಸಂರಕ್ಷಣೆಯ ಮಹತ್ವದ ಕುರಿತು ಜನಜಾಗೃತಿ ಮೂಡಿಸಲಾಗುವುದು” ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಗ್ರಾಮ ಆಡಳಿತ ಅಧಿಕಾರಿ ಮಹಾದೇವ ಆತ್ಮಹತ್ಯೆ

ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಸಲಹಾ ಮಂಡಳಿಯ ಸದಸ್ಯ ಮುಹಮ್ಮದ್ ಆಸಿಫೋ ದೀನ್, ಮಹಿಳಾ ವಿಭಾಗದ ಸಂಚಾಲಕಿ ಆಸ್ಮಾ ಸುಲ್ತಾನಾ, ಜಿಲ್ಲಾ ಸಂಚಾಲಕಿ ರೀಜ್ಞಾನಾ ಬೇಗಂ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಎಲ್ಲರ ಜವಾಬ್ದಾರಿ: ಡಿ.ಕೆ. ಶಿವಕುಮಾರ್

ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇವಲ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ ಸಂಚೇ?

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು...

ಜಿಮ್ ಇಲ್ಲ, ಟ್ರೆಡ್‌ಮಿಲ್ ಇಲ್ಲ; ಮನೆಯಲ್ಲೇ ಓಡಿ 4 ತಿಂಗಳಲ್ಲಿ 40 ಕೆಜಿ ತೂಕ ಇಳಿಸಿಕೊಂಡ ವ್ಯಕ್ತಿ!

ತೂಕ ಇಳಿಸಿಕೊಳ್ಳಲು ಜಿಮ್‌ಗೆ ಹೋಗಲೇಬೇಕು, ದುಬಾರಿ ವ್ಯಾಯಾಮ ಉಪಕರಣಗಳನ್ನು ಖರೀದಿಸಲೇಬೇಕು ಎಂಬ...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ ಆತಂಕದಲ್ಲಿ ಮೋದಿ ಸರ್ಕಾರ

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ...