ಬೀದರ್ | ಬಸವಾದಿ ಶರಣರ ಹಿಂದೂ ಸಮಾವೇಶ ವಿರೋಧಿಸಿ ಪ್ರತಿಭಟನೆ ಶುರು

Date:

ಕನೇರಿ ಶ್ರೀಗಳ ನೇತೃತ್ವದಲ್ಲಿ ಬಸವಕಲ್ಯಾಣದಲ್ಲಿ ಭಾನುವಾರ ಆಯೋಜಿಸಿರುವ ‘ಬಸವಾದಿ ಶಿವ ಶರಣರ ಬೃಹತ್ ಹಿಂದೂ ಸಮಾವೇಶ’ ವಿರೋಧಿಸಿ ಚಲೋ ಬಸವಕಲ್ಯಾಣ ಹೋರಾಟ ಸಮಿತಿ, ಸೌಹಾರ್ದ ಕರ್ನಾಟಕ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.

- Advertisement -

ಬಸವಕಲ್ಯಾಣದ ಬಂಗ್ಲಾದ ರಾಷ್ಟ್ರೀಯ ಹೆದ್ದಾರಿ ಸಮೀಪ ಬೆಳಿಗ್ಗೆ 10:30 ಗಂಟೆಗೆ ಜಮಾಯಿಸಿದ ಬಸವ ಅನುಯಾಯಿಗಳು ಬಸವಾದಿ ಶರಣರ ಹಿಂದೂ ಸಮಾವೇಶ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಬಳಿಕ ಬಸವ ಮಹಾದ್ವಾರ ಸಮೀಪದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪ್ರತಿಭಟನೆ ಶುರುವಾಗಿದೆ.

ಬಸವಾದಿ ಶರಣರು ಅವೈದಿಕ ಸಿದ್ಧಾಂತ ಪ್ರತಿಪಾದಕರು. ಹಿಂದೂ ಸಮಾವೇಶಕ್ಕೂ ಶರಣರಿಗೆ ಯಾವುದೇ ಸಂಬಂಧವಿಲ್ಲ. ಕೇವಲ ಹಿಂದೂ ಸಮಾವೇಶ ನಡೆಸಲು ನಮ್ಮ ಅಭ್ಯಂತರವಿಲ್ಲ. ಆದರೆ, ಬಸವಾದಿ ಶರಣರ ಹೆಸರಿನೊಂದಿಗೆ ಹಿಂದೂ ಪದ ಹೋಲಿಸುವುದು ನಾವು ಒಪ್ಪುವುದಿಲ್ಲ. ಇದು ಹಿಂದೂ ಸಮಾವೇಶ ಅಲ್ಲ. ಮನುವಾದ ಸಮಾವೇಶ ಆಗಿದೆ. ಈ ತಂತ್ರಗಾರಿಕೆ ಹಿಂದೆ ಸಂಘ ಪರಿವಾರವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಸೌಹಾರ್ದ ಕರ್ನಾಟಕ ವೇದಿಕೆಯ ಪ್ರಮುಖರಾದ ಆರ್.ಕೆ.ಹುಡಗಿ, ಕೆ.ನೀಲಾ, ಮೀನಾಕ್ಷಿ ಬಾಳಿ, ಮಾರುತಿ ಗೋಖಲೆ, ಕಾಶಿನಾಥ್ ಅಂಬುಲಗಿ ಸೇರಿದಂತೆ ಚಲೋ ಬಸವಕಲ್ಯಾಣ ಸಮಿತಿಯ ಸಿದ್ದಪ್ಪ ಮೂಲಗೆ, ರವಿ ಪಾಪಡೆ, ಸಿದ್ರಾಮ ಶೆಟಕಾರ್, ಬಸವ ಪಾಟೀಲ್, ಬಸವರಾಜ ಬುಳ್ಳಾ, ವಿಜಯಲಕ್ಷ್ಮಿ ಗಡ್ಡೆ, ಆರ್.ಜಿ.ಶೆಟಗಾರ್, ರವೀಂದ್ರ ಕೋಳಕೂರ್ ಸೇರಿದಂತೆ ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ ಸೇರಿದಂತೆ ನಾನಾ ಭಾಗಗಳಿಂದ ಬಸವ ಅನುಯಾಯಿಗಳು ಪಾಲ್ಗೊಂಡಿದ್ದಾರೆ.

ಸಂಜೆ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶ

ಇಲ್ಲಿನ ಅಕ್ಕಮಹಾದೇವಿ ಕಾಲೇಜು ಆವರಣದಲ್ಲಿ ಸಂಜೆ ಬಸವಾದಿ ಶಿವ ಶರಣರ ಬೃಹತ್ ಹಿಂದೂ ಸಮಾವೇಶ ನಡೆಯಲಿದೆ.ಕನೇರಿ ಕಾಡ ಸಿದ್ದೇಶ್ವರ ಮಠದ ಸ್ವಾಮೀಜಿ ನೇತೃತ್ವದಲ್ಲಿ ಸಮಾವೇಶ ನಡೆಯಲಿದ್ದು, ನೂರಾರು ಜನರಿಗೆ ಆಸನ ಕುಳಿತುಕೊಳ್ಳಲು ಬೃಹತ್ ವೇದಿಕೆ ಸಿದ್ಧಗೊಂಡಿದೆ.

ಇದನ್ನೂ ಓದಿ: ಚದುರಿದ ಚಿತ್ರ | ಡಿಜಿಟಲ್ ಸಂತೆಯಲ್ಲಿ ಮಹಿಳಾ ಸುರಕ್ಷತೆಯ ಬಿಕರಿ

ಕನೇರಿ ಸ್ವಾಮೀಜಿ ಸಮಾವೇಶದಲ್ಲಿ ಭಾಗವಹಿಸಬಹುದು. ಆದರೆ ಮಾತನಾಡಬಾರದು. ಸಮಾವೇಶದಲ್ಲಿ 2,500ಕ್ಕೂ ಅಧಿಕ ಜನರಿಗೆ ಸೇರಿಸಬಾರದು ಎಂದು ಕೋರ್ಟ್ ನೀಡಿದ ಅನುಮತಿಯಂತೆ ಕಾರ್ಯಕ್ರಮ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಮನ್ನಳ್ಳಿಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ಬೀದರ್ ತಾಲ್ಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಿಸಬೇಕು ಎಂದು ಬೀದರ್...

ಬಿಎಸ್‌ಎಸ್‌ಕೆ ಹರಾಜು ಪ್ರಕ್ರಿಯೆ ತಡೆದು ಲೀಜ್‌ಗೆ ನೀಡಿ ಪುನಶ್ಚೇತನಗೊಳಿಸಿ

ರೈತರ ಜೀವನಾಡಿಯಾಗಿರುವ ಬಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯ ಹರಾಜು ಪ್ರಕ್ರಿಯೆಯನ್ನು ತಡೆದು, ಕಾರ್ಖಾನೆಯನ್ನು...

ಬೀದರ್‌ | ಕೃಷ್ಣಮೃಗ ಬೇಟೆ ಪ್ರಕರಣ: ಮತ್ತೆ ಮೂವರು ಆರೋಪಿಗಳ ಬಂಧನ

ಬೀದರ್ ಅರಣ್ಯ ವಿಭಾಗದ ವ್ಯಾಪ್ತಿಯ ಹೊನ್ನಿಕೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದ ಸಮೀಪದ...

ಬೀದರ್‌ | ಜಿಂಕೆ ಬೇಟೆಯಾಡಿದ ಮೂವರ ಬಂಧನ

ಬೀದರ್‌ ತಾಲೂಕಿನ ಚೊಂಡಿ ಗ್ರಾಮ ಸಮೀಪದಲ್ಲಿ ಜಿಂಕೆ ಬೇಟೆಯಾಡಿದ ಮೂವರು ಆರೋಪಿಗಳನ್ನು...