ಬೀದರ್‌ | ಹೆಚ್ಚುವರಿ ದರಕ್ಕೆ ರಸಗೊಬ್ಬರ ಮಾರಾಟ: 1,539 ಬ್ಯಾಗ್‌ಗಳ ಜಪ್ತಿ ಮಾಡಿದ ಕೃಷಿ ಅಧಿಕಾರಿಗಳು

Date:

ಬೀದರ್‌ ತಾಲೂಕಿನ ಮನ್ನಳ್ಳಿ ಗ್ರಾಮದ ವೆಂಕಟೇಶ್ವರ ಫರ್ಟಿಲೈಜರ್ಸ್ ರಸಗೊಬ್ಬರ ಮಾರಾಟ ಮಳಿಗೆಯಲ್ಲಿ ನಿಯಮ ಉಲ್ಲಂಘನೆ ಕಂಡುಬಂದ ಹಿನ್ನೆಲೆಯಲ್ಲಿ ಒಟ್ಟು 1,539 ರಸಗೊಬ್ಬರ ಬ್ಯಾಗ್‌ಗಳನ್ನು ಜಪ್ತಿ ಮಾಡಲಾಗಿದ್ದು, ಜಪ್ತಿ ಮಾಡಲಾದ ರಸಗೊಬ್ಬರದ ಮೌಲ್ಯ ಸುಮಾರು ₹9.35 ಲಕ್ಷಗಳಾಗಿದೆ ಎಂದು ಬೀದರ್ ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್. ಅವರು ತಿಳಿಸಿದ್ದಾರೆ.

- Advertisement -

ಜೂನ್ 10ರಂದು ಕೃಷಿ ಇಲಾಖೆಯ ಅಧಿಕಾರಿಗಳ ತಂಡವು ಮನ್ನಳ್ಳಿಯಲ್ಲಿರುವ ವೆಂಕಟೇಶ್ವರ ಫರ್ಟಿಲೈಜರ್ಸ್ ಮಳಿಗೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಪರಿಶೀಲನೆ ವೇಳೆ ರೈತರಿಗೆ ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಯಲ್ಲಿ ರಸಗೊಬ್ಬರ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ಇದು ರಸಗೊಬ್ಬರ ನಿಯಂತ್ರಣ ಆದೇಶ (FCO) 1983ರ ಷರತ್ತು 3(3)ರ ಉಲ್ಲಂಘನೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

“ಪರವಾನಗಿಯಲ್ಲಿ ಅನುಮತಿ ಪಡೆಯದ ರಸಗೊಬ್ಬರಗಳನ್ನು ಮಾರಾಟ ಮಾಡುತ್ತಿರುವುದು ಕೂಡ ಪರಿಶೀಲನೆ ವೇಳೆ ಪತ್ತೆಯಾಗಿದೆ. ಇದು ರಸಗೊಬ್ಬರ ನಿಯಂತ್ರಣ ಆದೇಶ, 1983ರ ಷರತ್ತು 8ರ ಸ್ಪಷ್ಟ ಉಲ್ಲಂಘನೆಯಾಗಿದೆ. ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದು, ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

WhatsApp Image 2026 06 10 at 6.49.49 PM

ಇದನ್ನೂ ಓದಿ : ಬೀದರ್‌ | ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆತ್ಮಹತ್ಯೆ: ಮಾನಸಿಕ ಕಿರುಕುಳದ ಆರೋಪ

ಕಾರ್ಯಾಚರಣೆಯಲ್ಲಿ ಸಹಾಯಕ ಕೃಷಿ ನಿರ್ದೇಶಕ (ಜಾರಿ ದಳ) ಮಛೇಂದ್ರನಾಥ ರೆಡ್ಡಿ, ಸಹಾಯಕ ಕೃಷಿ ನಿರ್ದೇಶಕಿ ಆರತಿ ಪಾಟೀಲ ಹಾಗೂ ರೈತ ಸಂಪರ್ಕ ಕೇಂದ್ರ ಮನ್ನಳ್ಳಿಯ ಕೃಷಿ ಅಧಿಕಾರಿ ವಿಜಯಕುಮಾರ ಸೇರಿದಂತೆ ಕೃಷಿ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ, ಪೊಲೀಸರು, ಕಟ್ಟಡ ಕಾರ್ಮಿಕರಿಗೂ ಆಘಾತ!

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್,...

ವಿಜಯಪುರ | ಅಂತಿಮ ಮತದಾರರ ಪಟ್ಟಿ ಪ್ರಕಟ: ನಾಗಠಾಣದಲ್ಲಿ ಅತಿ ಹೆಚ್ಚು ಮತದಾರರು

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು...

ಆಸ್ಕರ್‌ 2027 | ಇವೇ, ರೇಸ್‌ನಲ್ಲಿರುವ 9 ಬಹುನಿರೀಕ್ಷಿತ ಸಿನಿಮಾಗಳು!

2027ರ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿ (ಆಸ್ಕರ್) ರೇಸ್‌ಗೆ ಈಗಿನಿಂದಲೇ ಕೌಂಟ್‌ಡೌನ್ ಆರಂಭವಾಗಿದೆ....