ಬೀದರ್ ನಗರದಲ್ಲಿರುವ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು 2026-27ನೇ ಶೈಕ್ಷಣಿಕ ಸಾಲಿನಲ್ಲಿ ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಒಟ್ಟು ₹22.42 ಕೋಟಿ ವಿದ್ಯಾರ್ಥಿವೇತನ ವಿತರಿಸಿದೆ.
ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಸಂಸ್ಥೆಯು ವಿದ್ಯಾರ್ಥಿವೇತನ ಯೋಜನೆಯನ್ನು ಮುಂದುವರಿಸಿದ್ದು, ಮುಂಬರುವ ಶೈಕ್ಷಣಿಕ ವರ್ಷದಲ್ಲಿಯೂ ವಿದ್ಯಾರ್ಥಿವೇತನ ನೀಡಲು ನಿರ್ಧರಿಸಿದೆ.
2027-28ನೇ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿವೇತನ ಪಡೆಯಲು ಅರ್ಹ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಡಿಸೆಂಬರ್ 13ರಂದು ಶಾಹೀನ್ ಪ್ರತಿಭಾನ್ವೇಷಣೆ ಪರೀಕ್ಷೆ ಆಯೋಜಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಹೆಸರು ನೋಂದಣಿ ಮಾಡಿಕೊಳ್ಳಲು ಹಾಗೂ ಪರೀಕ್ಷೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ www.shaheengroup.org ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ : ಬೀದರ್ | ಸಾಹಿತಿಗಳು ಜನಜಾಗೃತಿಯ ಕುಲುಮೆ ಆರದಂತೆ ನೋಡಿಕೊಳ್ಳಲಿ: ಅಮೀನ್ ಮಟ್ಟು




