ಬೀದರ್‌ | ಮತದಾನದ ಹಕ್ಕು ಕಸಿದುಕೊಳ್ಳುವ ಎಸ್‌ಐಆರ್ : ಜ್ಞಾನಪ್ರಕಾಶ ಸ್ವಾಮೀಜಿ

Date:

ಕೇಂದ್ರ ಸರ್ಕಾರದ ಸೂಚನೆಯಂತೆ ಚುನಾವಣಾ ಆಯೋಗವು ಎಸ್‌ಐಆರ್ (ಎಸ್‌ಐಆರ್) ಹೆಸರಿನಲ್ಲಿ ಬಡ ಜನರ ಮತದಾನ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಸುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಮೈಸೂರಿನ ಉರಿಲಿಂಗ ಪೆದ್ದಿಮಠ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು.

- Advertisement -

ಬೀದರ ತಾಲ್ಲೂಕಿನ ಬಕ್ಕಚೌಡಿ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವ ಶಾಂತಿ ತಥಾಗತ ಗೌತಮ ಬುದ್ಧ ಮಹಾದ್ವಾರ ಹಾಗೂ ವಿಶ್ವಜ್ಞಾನಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿ ಅನಾವರಣ ಸಮಾರಂಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

“ಭಾರತೀಯ ಸಂವಿಧಾನವು ದೇಶದ ಎಲ್ಲ ನಾಗರಿಕರಿಗೆ ಸಮಾನ ಹಕ್ಕು, ಸಮಾನ ರಕ್ಷಣೆ ಹಾಗೂ ಸಮಾನ ಪ್ರಗತಿಯ ಅವಕಾಶಗಳನ್ನು ನೀಡಿದೆ, ದೇಶದ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅಧಿಕಾರವನ್ನು ಪ್ರಜೆಗಳಿಗೆ ನೀಡಿದೆ. ಹೀಗಾಗಿ ಮತದಾನದ ಹಕ್ಕು ರಕ್ಷಿಸಿಕೊಳ್ಳಲು ಜನರು ಹೋರಾಟ ನಡೆಸುವುದು ಅನಿವಾರ್ಯ” ಎಂದರು.

ಚಿಂತಕ ಶಿವಶರಣಪ್ಪ ಹುಗ್ಗೆ ಪಾಟೀಲ್ ಮಾತನಾಡಿ, “ಜೀವ ಜಗತ್ತಿಗೆ ಸಮತೆ, ಮಮತೆ, ಪ್ರೀತಿ, ಕರುಣೆ ಹಾಗೂ ಶಾಂತಿಯನ್ನು ನೀಡಿದ ಗೌತಮ ಬುದ್ಧರ ಮಹಾದ್ವಾರವು ಮೈತ್ರಿಭಾವನೆ ಮತ್ತು ಭಾವೈಕ್ಯತೆಯ ಸಂದೇಶವನ್ನು ಸಾರುತ್ತದೆ. ಜಗತ್ತಿಗೆ ಮಾನವೀಯ ಮೌಲ್ಯಗಳನ್ನು ಬಿತ್ತಿದ ಬುದ್ಧ, ಬಸವ, ಅಂಬೇಡ್ಕರ್ ಅವರ ವಿಚಾರಧಾರೆ ನಮ್ಮ ಬದುಕಿಗೆ ದಾರಿದೀಪವಾಗಿವೆ” ಎಂದು ಹೇಳಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರವಾದ) ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ, ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶಕುಂತಲಾ ಬೆಲ್ದಾಳೆ, ಮುಖಂಡರಾದ ಹೊಣ್ಣೂರು ಶ್ರೀನಿವಾಸ, ಅನೀಲಕುಮಾರ ಬೆಲ್ದಾರ, ಬಾಬುರಾವ ಪಾಸ್ವಾನ್, ಶ್ರೀಪತರಾವ ದೀನೆ, ರಮೇಶ್ ಡಾಕುಳಗಿ ಹಾಗೂ ಸಿದ್ದರಾಮ ಬೆಲ್ದಾಳ ಶರಣರು ಮಾತನಾಡಿದರು.

ಇದನ್ನೂ ಓದಿ : ಬೀದರ್‌ | ಪ್ರತೀ ಮನೆಯಲ್ಲೂ ಇರಲಿ ಗ್ರಂಥಾಲಯ: ಶೈಲಜಾ ಹುಡುಗೆ

ಡಾ.ಧಮ್ಮಾನಂದ ಥೇರೋ ಅವರು ಸಾನಿಧ್ಯ ವಹಿಸಿ ತ್ರಿಶರಣ ಪಂಚಶೀಲ ಬೋಧಿಸಿದರು. ಆಯೋಜಕರಾಗಿ ಮಾಜಿ ಸದಸ್ಯ ಸಂತೋಷ ಸಂಗಮ, ಪಿಡಿಒ ಕೃಷ್ಣ ಆಣದೂರು, ಪ್ರಭುಲಿಂಗ ವೀರಶೆಟ್ಟಿ ಕಾಂಬಳೆ, ಅಂಬಾದಾಸ ಗಾಯಕವಾಡ, ಪರಮೇಶ್ವರ ಗುಬ್ಬಿ ಸೇರಿದಂತೆ ಗ್ರಾಮಸ್ಥರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಭಜನಾ ತಂಡದ ಕಲಾವಿದರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ದೆಹಲಿ | ‘ಫಾರ್ಮ್ 7’ ಅಸ್ತ್ರ ಬಳಸಿ ಮುಸ್ಲಿಂ ಮತದಾರರ ಹೆಸರು ಡಿಲೀಟ್ ಮಾಡಿಸಿದ ಬಿಜೆಪಿ BLAಗಳು! 

ದೆಹಲಿಯಲ್ಲಿ ಸುದೀರ್ಘ ಕಾಲದಿಂದ ವಾಸಿಸುತ್ತಿರುವ ಮುಸ್ಲಿಂ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...