ಬಿಎಸ್‌ಎಸ್‌ಕೆ ಹರಾಜು ಪ್ರಕ್ರಿಯೆ ತಡೆದು ಲೀಜ್‌ಗೆ ನೀಡಿ ಪುನಶ್ಚೇತನಗೊಳಿಸಿ

Date:

ರೈತರ ಜೀವನಾಡಿಯಾಗಿರುವ ಬಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯ ಹರಾಜು ಪ್ರಕ್ರಿಯೆಯನ್ನು ತಡೆದು, ಕಾರ್ಖಾನೆಯನ್ನು ಲೀಜ್‌ಗೆ ನೀಡಿ ಪುನಶ್ಚೇತನಗೊಳಿಸುವಂತೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಹಾಗೂ ಹುಮನಾಬಾದ್ ಕ್ಷೇತ್ರದ ಶಾಸಕ ಡಾ.ಸಿದ್ದು ಪಾಟೀಲ್ ಅವರು ಬೆಂಗಳೂರಿನಲ್ಲಿ ಸಕ್ಕರೆ ಮತ್ತು ಜವಳಿ ಇಲಾಖೆಯ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಮನವಿ ಸಲ್ಲಿಸಿದರು.

- Advertisement -

“ಬಿಎಸ್‌ಎಸ್‌ಕೆ ಕಾರ್ಖಾನೆ ಹಲವು ವರ್ಷಗಳಿಂದ ಸ್ಥಗಿತಗೊಂಡಿರುವುದರಿಂದ ಈ ಭಾಗದ ಕಬ್ಬು ಬೆಳೆಗಾರರು ತೊಂದರೆ ಅನುಭವಿಸುತ್ತಿದ್ದಾರೆ. ಕಾರ್ಖಾನೆ ಪುನರಾರಂಭಗೊಂಡರೆ ಬೀದರ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ಕಬ್ಬು ಬೆಳೆಗಾರರಿಗೆ ಸ್ಥಳೀಯವಾಗಿ ಮಾರುಕಟ್ಟೆ ದೊರೆಯುವುದರ ಜೊತೆಗೆ ಸಾಗಾಣಿಕೆ ವೆಚ್ಚವೂ ಕಡಿಮೆಯಾಗಲಿದೆ. ಅಲ್ಲದೆ, ಕಾರ್ಖಾನೆಯನ್ನು ಅವಲಂಬಿಸಿರುವ ಕಾರ್ಮಿಕರು ಹಾಗೂ ಸಾವಿರಾರು ಕುಟುಂಬಗಳಿಗೆ ಉದ್ಯೋಗ ಮತ್ತು ಜೀವನೋಪಾಯದ ಅವಕಾಶಗಳು ದೊರೆಯಲಿವೆ” ಎಂದು ಸಚಿವರ ಗಮನಕ್ಕೆ ತಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬಿಎಸ್‌ಎಸ್‌ಕೆ ಕಾರ್ಖಾನೆಯನ್ನು ಹರಾಜು ಮಾಡುವ ಬದಲು ಸೂಕ್ತ ಸಂಸ್ಥೆಗೆ ಲೀಜ್ ಆಧಾರದ ಮೇಲೆ ನೀಡಿ ವೈಜ್ಞಾನಿಕ, ಆರ್ಥಿಕವಾಗಿ ಪುನಶ್ಚೇತನಗೊಳಿಸುವುದು ರೈತರು ಮತ್ತು ಕಾರ್ಮಿಕರ ಹಿತದೃಷ್ಟಿಯಿಂದ ಸೂಕ್ತ ಕ್ರಮವಾಗಿದೆ. ಸರ್ಕಾರ ವಿಶೇಷ ಆದ್ಯತೆ ನೀಡಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಬಿಎಸ್‌ಎಸ್‌ಕೆ ಪುನಶ್ಚೇತನಗೊಂಡರೆ ಕಬ್ಬು ಬೆಳೆಗಾರರಿಗೆ ಉತ್ತಮ ಮಾರುಕಟ್ಟೆ ಸೌಲಭ್ಯ ದೊರೆಯುವುದರ ಜೊತೆಗೆ ನೇರ ಹಾಗೂ ಪರೋಕ್ಷ ಉದ್ಯೋಗಾವಕಾಶಗಳು ಹೆಚ್ಚಾಗಲಿವೆ. ಇದರಿಂದ ಬೀದರ್ ಜಿಲ್ಲೆಯ ವ್ಯಾಪಾರ, ಸಾರಿಗೆ ಹಾಗೂ ಸಣ್ಣ ಕೈಗಾರಿಕೆಗಳು ಸೇರಿದಂತೆ ಒಟ್ಟಾರೆ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದೆ ಎಂದು ಶಾಸಕರು ತಿಳಿಸಿದ್ದಾರೆ.

ರೈತರು, ಕಾರ್ಮಿಕರು ಹಾಗೂ ಈ ಭಾಗದ ಆರ್ಥಿಕ ಹಿತದೃಷ್ಟಿಯಿಂದ ಬಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯನ್ನು ಶೀಘ್ರ ಪುನರಾರಂಭಿಸುವ ನಿಟ್ಟಿನಲ್ಲಿ ಸರ್ಕಾರ ಸಕಾರಾತ್ಮಕ ನಿರ್ಧಾರ ಕೈಗೊಳ್ಳಬೇಕು ಎಂದು ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಡಾ. ಸಿದ್ದು ಪಾಟೀಲ್ ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ವಚನ ಕಲ್ಯಾಣ | ಎನಗೆ ಗುರುವಾಗಿ ಬಂದನಯ್ಯಾ ಬಸವಣ್ಣನು!

ಮನವಿಗೆ ಸ್ಪಂದಿಸಿದ ಸಚಿವರು, ಹರಾಜು ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳ ಸಭೆ ಕರೆದು ಈ ಕುರಿತು ಸಮಗ್ರವಾಗಿ ಚರ್ಚಿಸಿ, ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...