ಬೀದರ್‌-ಬೆಂಗಳೂರು ನಾಗರಿಕ ವಿಮಾನಯಾನ ಸೇವೆ ಮುಂದುವರಿಸಲು ಸಚಿವ ಈಶ್ವರ ಖಂಡ್ರೆ ಮನವಿ

Date:

ಕಳೆದ ಒಂದು ವರ್ಷದಿಂದ ರಾಜ್ಯ ಸರ್ಕಾರದ (ಕೆ.ಕೆ.ಆರ್.ಡಿ.ಬಿ.) 13 ಕೋಟಿ ರೂ. ಆರ್ಥಿಕ ಬೆಂಬಲದಿಂದ ಪುನಾರಂಭಗೊಂಡಿರುವ ಬೀದರ್ -ಬೆಂಗಳೂರು ನಾಗರಿಕ ವಿಮಾನಯಾನ ಸೇವೆಯನ್ನು ಮುಂದುವರಿಸುವಂತೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

- Advertisement -

ಬೀದರ್ ನ ಝೀರಾ ಕನ್ವೆನ್ಷನ್ ಹಾಲ್ ನಲ್ಲಿ ನಡೆಯುತ್ತಿರುವ 2 ದಿನಗಳ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮಾತನಾಡಿದ ಅವರು, “ಕೇಂದ್ರ ಸರ್ಕಾರ ಉಡಾನ್ ಯೋಜನೆಯಡಿ ನೀಡುತ್ತಿದ್ದ ಸಬ್ಸಿಡಿ ನಿಲ್ಲಿಸಿದ ಪರಿಣಾಮ ಸ್ಥಗಿತವಾಗಿದ್ದ ವಿಮಾನ ಯಾನ ಸೇವೆಗೆ ಕಳೆದ ವರ್ಷ ಏಪ್ರಿಲ್ 16ರಂದು ನೀವೇ ಮರು ಚಾಲನೆ ನೀಡಿದ್ದಿರಿ. ಈಗ ಅದು ನಿರಂತರ ಸೇವೆಯಾಗಿ ಮುಂದುವರಿಸಿ” ಎಂದು ಜಿಲ್ಲೆಯ ಜನತೆಯ ಪರವಾಗಿ ಮನವಿ ಮಾಡಿದರು.

ಶತಮಾನಗಳ ಶಾಪದಿಂದ ಹಿಂದುಳಿದ ಕಲ್ಯಾಣ ಕರ್ನಾಟಕಕ್ಕೆ ಮತ್ತು ಬೀದರ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಬೆಂಬಲ ಅಭೂತಪೂರ್ವ ಎಂದ ಅವರು ಸಿ.ಎಂ.ಗೆ ಧನ್ಯವಾದ ಅರ್ಪಿಸಿದ್ದಾರೆ. ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿ, 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲಕ್ಕೆ ತಂದು, ರಾಜ್ಯದ ತಲಾದಾಯವನ್ನು ಹೆಚ್ಚಿಸಿದ ಕೀರ್ತಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಂಜಾಬ್ ಚುನಾವಣೆ  | ‘ಎಎಪಿ’ಗೆ ಅಳಿವು-ಉಳಿವಿನ ಕದನ; ಹಳೆಯ...

ಮುಂದಿನ ವರ್ಷದ ಆರಂಭದಲ್ಲಿ, ಅಂದರೆ 2027ರ ಫೆಬ್ರವರಿಯಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ ) ಪಾಲಿಗೆ ಅಕ್ಷರಶಃ 'ಸಾವು-ಬದುಕಿನ' ಪ್ರಶ್ನೆಯಾಗಿ ಪರಿಣಮಿಸಿದೆ. ರಾಷ್ಟ್ರ ರಾಜಕಾರಣದಲ್ಲಿ ತನ್ನ...

‘ಬಿಸ್ಲೆರಿ’ ವಿರುದ್ಧದ ಕ್ರಮಕ್ಕೂ ನೀರು ಮಾರುಕಟ್ಟಗೆ ‘ಅಂಬಾನಿ’ ಪ್ರವೇಶಕ್ಕೂ...

ಭಾರತದ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾರುಕಟ್ಟೆಯಲ್ಲಿ ಸುಮಾರು 35ರಿಂದ 36%ರಷ್ಟು ಮಾರುಕಟ್ಟೆ ಪಾಲನ್ನು ಬಿಸ್ಲೆರಿ ಹೊಂದಿದೆ. ಬಿಸ್ಲೆರಿ ನೀರಿನ ಸಂಸ್ಥೆ ‘ಬಿಸ್ಲೆರಿ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್’ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು...

ಸಂವಿಧಾನ ದಿನ | ಸಂವಿಧಾನಕ್ಕೆ ಮೋದಿ ಸರ್ಕಾರ ಮತ್ತು...

ಭಾರತವು ಸಂವಿಧಾನ ದಿನವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆ ಮತ್ತು ಸಂವಿಧಾನದ ಮೂಲ ಆಶಯಗಳು ಅಭೂತಪೂರ್ವ ಬಿಕ್ಕಟ್ಟಿಗೆ ಸಿಲುಕಿವೆ. 2014ರಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...
WhatsApp Image 2026 04 11 at 3.49.10 PM

“ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಬಜೆಟ್ ನಲ್ಲಿ ವಾರ್ಷಿಕ 5 ಸಾವಿರ ಕೋಟಿ ರೂ. ನೀಡುವುದಾಗಿ ಪಕ್ಷ ನೀಡಿದ್ದ ಭರವಸೆಯನ್ನು ಸಿದ್ದರಾಮಯ್ಯ ಈಡೇರಿಸಿದ್ದಾರೆ. ಈ ಪೈಕಿ ಕಳೆದ 3 ವರ್ಷದಲ್ಲಿ ಬೀದರ್ ಜಿಲ್ಲೆಯ ಅಭಿವೃದ್ಧಿಗೆ 8000 ಕೋಟಿ ರೂ. ಲಭ್ಯವಾಗಿದೆ. ಬೀದರ್ ಜಿಲ್ಲೆಯ ನೀರಾವರಿ ಯೋಜನೆಗಳಿಗೆ 600 ಕೋಟಿ ರೂ, ಲೋಕೋಪಯೋಗಿ ಇಲಾಖೆಯಡಿ ಜಿಲ್ಲೆಯ ಮೂಲಸೌಕರ್ಯ ಅಭಿವೃದ್ಧಿಗಾಗಿ 300 ಕೋಟಿ ರೂ. ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಜಲಜೀವನ ಮಿಷನ್ ಅಡಿಯಲ್ಲಿ 600 ಕೋಟಿ ರೂ. ಮಂಜೂರು ಮಾಡಿದ್ದಾರೆ”ಎಂದರು.

ಇಡೀ ಜಗತ್ತಿಗೆ ಪ್ರಜಾಪ್ರಭುತ್ವ ಮತ್ತು ಸಂಸತ್ತಿನ ಪರಿಕಲ್ಪನೆಯನ್ನು ಕಟ್ಟಿಕೊಟ್ಟ ಬಸವಕಲ್ಯಾಣದಲ್ಲಿ ಅತ್ಯಾಧುನಿಕ ಅನುಭವ ಮಂಟಪ ನಿರ್ಮಾಣ ಮಾಡಬೇಕೆಂಬ ಕೋರಿದಾಗ, ಹಿರಿಯ ಚಿಂತಕರಾದ ಗೊ.ರೂ. ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ಬಜೆಟ್ ನಲ್ಲಿ ಘೋಷಣೆ ಮಾಡಿದರು. ಅನುಭವ ಮಂಟಪ ಕಾಮಗಾರಿಯನ್ನು ಮುಂದಿನ ವರ್ಷದೊಳಗೆ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲು ಸರ್ಕಾರ ಸಂಕಲ್ಪಿಸಿದ್ದು, 2023ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಈವರೆಗೆ ಒಟ್ಟು 280 ಕೋಟಿ ರೂ.ಗಳನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದಾರೆ.

ಬಸವ ಕಲ್ಯಾಣದಲ್ಲಿ ಅನುಭವ ಮಂಟಪದ ಶೇ. 70ರಷ್ಟು ಕಾಮಗಾರಿ ಮುಗಿದಿದ್ದು, ಉಳಿಕೆ ಕಾಮಗಾರಿ ಪ್ರಗತಿಯಲ್ಲಿದೆ. ಅನುಭವ ಮಂಟಪದಲ್ಲಿ ವರ್ಣಭೇದ, ಲಿಂಗಭೇದವಿಲ್ಲದ ಸಮಾಜಕ್ಕಾಗಿ ಶ್ರಮಿಸಿದ 770 ಅಮರ ಗಣಂಗಳ ಹೆಸರಲ್ಲಿ ಕಂಬಗಳನ್ನು ನಿರ್ಮಿಸಿ ಅದರಲ್ಲಿ ಅವರ ಚಿತ್ರ ಮತ್ತು ವಚನಗಳನ್ನು ಕೆತ್ತಿಸಲಾಗುತ್ತಿದೆ. ಜೊತೆಗೆ ವೈಜ್ಞಾನಿಕವಾಗಿ ಇಷ್ಟಲಿಂಗ ಪೂಜೆ ಮಾಡುವ ವಿಧಾನ ಮತ್ತು ಅದರ ಶಕ್ತಿಯ ಬಗ್ಗೆ ಮಾಹಿತಿ ನೀಡುವ ವ್ಯವಸ್ಥೆಯೂ ಇರುವ ಆಧುನಿಕ ಅನುಭವ ಮಂಟಪ ಜಗತ್ತಿನ ಆಕರ್ಷಕ ಮತ್ತು ಪ್ರಮುಖ ಆಧ್ಯಾತ್ಮಿಕ ತಾಣವಾಗಿ ಹೊರಹೊಮ್ಮಲಿದೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.

ಭಾರತದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ನಿಲ್ಲುವಲ್ಲಿ ಮಾಧ್ಯಮಗಳ ಪಾತ್ರ ಅನನ್ಯ. ನಾವೇ ಮೊದಲು ಎಂಬ ಧಾವಂತದಲ್ಲಿ ತಪ್ಪು ಮಾಹಿತಿಯ ಪ್ರಸಾರ ಆಗದಂತೆ ಮತ್ತು ವ್ಯಕ್ತಿಯ ಚಾರಿತ್ರ್ಯವಧೆ ಆಗದಂತೆ ಮಾಧ್ಯಮಗಳು ಸ್ವಯಂ ನಿಯಂತ್ರಣ ಹಾಕಿಕೊಳ್ಳಬೇಕು ಎಂದು ಹೇಳಿದರು.

ಯಾವುದೇ ಮಾಧ್ಯಮಕ್ಕೆ ತನ್ನ ವಿಶ್ವಾಸಾರ್ಹತೆಯೇ ಜೀವಾಳ. ಎಂದ ಈಶ್ವರ ಖಂಡ್ರೆ, ಹಿರಿಯ ಪತ್ರಕರ್ತರಾದ ಮಾಜಿ ಸಚಿವ ಎಂ.ಎಸ್. ಗುರುಪಾದ ಸ್ವಾಮಿ ಅವರು, ಎಸ್.ವಿ.ಜಯಶೀಲರಾಯರು, ಅರ್ಜುನ್ ದೇವ್, ಬಿ.ವಿ. ಮಲ್ಲಿಕಾರ್ಜುನಯ್ಯ ಹಾಗೂ ಈಗ ಶಿವಾನಂದ ತಗಡೂರ್ ಪತ್ರಕರ್ತರ ಸಂಘವನ್ನು ಮುನ್ನಡೆಸಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಇಂತಹ ಸಮ್ಮೇಳನಗಳ ಮೂಲಕ ಪತ್ರಕರ್ತರಲ್ಲಿ ಮೌಲ್ಯಗಳನ್ನು ಬಳೆಸಬೇಕು ಎಂದರು.

ಪತ್ರಕರ್ತರ ಆರೋಗ್ಯ ರಕ್ಷಣೆಗಾಗಿ ಯೋಜನೆ ತಂದಿದ್ದಾರೆ. ಹಿರಿಯ ಪತ್ರಕರ್ತರಿಗೆ ನೀಡುತ್ತಿದ್ದ 3 ಸಾವಿರ ರೂ. ಪಿಂಚಣಿಯನ್ನು 15 ಸಾವಿರಕ್ಕೆ ಹೆಚ್ಚಿಸಿದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: ಬೀದರ್‌ | ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

ಇಂದು ನಾವು ಎ.ಐ. ತಂತ್ರಜ್ಞಾನ, ಮಿಷಿನ್ ಲರ್ನಿಂಗ್ ನಂತಹ ಕಾಲಘಟ್ಟದಲ್ಲಿದ್ದೇವೆ. ವಾಟ್ಸ್ ಅಪ್ ನಲ್ಲಿ ಬರುವ ಸುಳ್ಳು ಸುದ್ದಿಗಳೇ ಸತ್ಯವಾಗಬಾರದು ಈ ನಿಟ್ಟಿನಲ್ಲಿ ಅತ್ಯಂತ ವಿವೇಚನಾತ್ಮಕವಾಗಿ ಮಾಧ್ಯಮಗಳು ಕೆಲಸ ಮಾಡಬೇಕು. ಪತ್ರಕರ್ತರು ವೃತ್ತಿಯ ಘನತೆ ಕಾಪಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ರಹೀಂ ಖಾನ್, ಡಾ. ಶರಣ ಪ್ರಕಾಶ್ ಪಾಟೀಲ್, ಸಂಸತ್ ಸದಸ್ಯ ಸಾಗರ್ ಈ ಖಂಡ್ರೆ, ಮಾಜಿ ಸಚಿವ ರಾಜಶೇಖರ ಪಾಟೀಲ್ ಹುಮನಾಬಾದ್, ಶಾಸಕರುಗಳಾದ ಶರಣು ಸಲಗಾರ್, ಭೀಮರಾವ್ ಪಾಟೀಲ್, ಚಂದ್ರಶೇಖರ ಪಾಟೀಲ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ್ ದೇವಪ್ಪ ಹಾರಕೋಡು ಶ್ರೀ ಚನ್ನವೀರ ಶಿವಾಚಾರ್ಯರು, ಭಾಲ್ಕಿ ಹಿರೆಮಠದ ಡಾ. ಬಸವಲಿಂಗ ಪಟ್ಟದೇವರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಆಶಾ’ಗಳು ಇದ್ದರೂ ನಡೆಯುತ್ತೆ, ಇಲ್ಲದಿದ್ದರೂ ನಡೆಯುತ್ತೆ: ಆರೋಗ್ಯ ಸಚಿವ ಯು.ಟಿ ಖಾದರ್

ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು...

ಹವಾಮಾನ ವರದಿ: ರಾಜ್ಯದ 15 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ

ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಏಕಕಾಲದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಮತ್ತು...

ಸಂವಿಧಾನದ ಆಶಯಗಳ ಅನುಷ್ಠಾನಕ್ಕೆ ಜನಾಂದೋಲನವಾಗಲಿ; ಪ್ರಜಾಪ್ರಭುತ್ವದ ರಕ್ಷಣೆಗೆ ಜನರ ಐಕ್ಯತೆ ಬಲವಾಗಲಿ

ನವೆಂಬರ್ 26ರ ಸಂವಿಧಾನ ದಿನಾಚರಣೆಯಿಂದ ನವೆಂಬರ್ 26, 2027ರವರೆಗೆ ಐಕ್ಯ ಹೋರಾಟ...

ನಂದಿನಿ ಮೊಸರಿನ ದರ ಇಳಿಕೆ

ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆಗೆ ಸಾರ್ವಜನಿಕ ವಲಯದಿಂದ ತೀವ್ರ...