ಬೀದರ್‌ | ಸ್ವಂತ ಖರ್ಚಿನಲ್ಲಿ ವಿದ್ಯಾರ್ಥಿಗಳಿಗೆ ವಿಮಾನಯಾನ ಭಾಗ್ಯ ಕಲ್ಪಿಸಿದ ಶಿಕ್ಷಕ!

Date:

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನದ ಅನುಭವವನ್ನು ಬಹುಮಾನವಾಗಿ ನೀಡುವ ಮೂಲಕ ಕನ್ನಡ ಮಾಧ್ಯಮದ ವಿಜ್ಞಾನ ಶಿಕ್ಷಕ ರಫೀಕ್ ತಾಳಿಕೋಟಿ ಅವರು ಗಮನ ಸೆಳೆದಿದ್ದಾರೆ.

- Advertisement -

ಬೀದರ್‌ನ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಕರ್ನಾಟಕ ಪ್ರೌಢ ಶಾಲೆಯ ಎಂಟು ವಿದ್ಯಾರ್ಥಿಗಳಿಗೆ ಶಿಕ್ಷಕ ರಫೀಕ್ ತಾಳಿಕೋಟಿ ಅವರು ವಿಮಾನಯಾನದ ವಿಶೇಷ ಅನುಭವ ಕಲ್ಪಿಸಿದ್ದಾರೆ. ಮಂಗಳವಾರ ಬೆಳಿಗ್ಗೆ ಬೀದರ್ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸುವ ಅವಕಾಶ ಪಡೆದ ವಿದ್ಯಾರ್ಥಿಗಳು, ಶಿಕ್ಷಕರೊಂದಿಗೆ ಪ್ರಯಾಣಿಸಿ ಸಂಭ್ರಮಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...
WhatsApp Image 2026 10 27 at 4.40.13 PM

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ಒಟ್ಟು 10 ವಿದ್ಯಾರ್ಥಿಗಳನ್ನು ಸ್ವಂತ ಖರ್ಚಿನಲ್ಲಿ ವಿಮಾನದಲ್ಲಿ ಕರೆದೊಯ್ಯಲು ಶಿಕ್ಷಕರು ಯೋಜಿಸಿದ್ದರು. ನಾಲ್ವರು ವಿದ್ಯಾರ್ಥಿನಿಯರು ಹಾಗೂ ನಾಲ್ವರು ವಿದ್ಯಾರ್ಥಿಗಳು ಸೇರಿ ಎಂಟು ಮಂದಿ ಈ ಅವಕಾಶ ಪಡೆದಿದ್ದು, ಇನ್ನುಳಿದ ಇಬ್ಬರು ವಿದ್ಯಾರ್ಥಿಗಳು ಅನಿವಾರ್ಯ ಕಾರಣಗಳಿಂದ ಪ್ರಯಾಣಕ್ಕೆ ಬರಲು ಸಾಧ್ಯವಾಗಲಿಲ್ಲ.

“ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ಮಾಡಲು ಪ್ರೋತ್ಸಾಹಿಸುವ ಉದ್ದೇಶದಿಂದ ನನ್ನ ಸ್ವಂತ ₹50 ಸಾವಿರ ವೆಚ್ಚದಲ್ಲಿ ಮಕ್ಕಳನ್ನು ವಿಮಾನದಲ್ಲಿ ಕರೆದೊಯ್ದಿದ್ದೇನೆ” ಎಂದು ಶಿಕ್ಷಕ ರಫೀಕ್ ತಾಳಿಕೋಟಿ ‘ಈದಿನ’ಕ್ಕೆ ತಿಳಿಸಿದರು.

ಸಾಮಾನ್ಯವಾಗಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪುಸ್ತಕ, ಪ್ರಶಸ್ತಿ ಅಥವಾ ನಗದು ಬಹುಮಾನ ನೀಡುವುದು ವಾಡಿಕೆ. ಆದರೆ, ವಿಮಾನಯಾನದ ಅನುಭವದ ಮೂಲಕ ವಿದ್ಯಾರ್ಥಿಗಳ ಕನಸಿಗೆ ರೆಕ್ಕೆ ನೀಡಿರುವ ಶಿಕ್ಷಕರ ಈ ವಿಭಿನ್ನ ಪ್ರಯತ್ನ ವಿಶೇಷ ಗಮನ ಸೆಳೆದಿದೆ. ಹೊಸ ಅನುಭವದ ಜೊತೆಗೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹಾಗೂ ಭವಿಷ್ಯದಲ್ಲಿ ಇನ್ನಷ್ಟು ಸಾಧನೆ ಮಾಡುವ ಉತ್ಸಾಹ ಮೂಡಿಸುವ ಈ ಕಾರ್ಯಕ್ಕೆ ಶೈಕ್ಷಣಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

WhatsApp Image 2026 10 10 at 7.46.08 PM 25

ಇದನ್ನೂ ಓದಿ : ಬೀದರ್‌ | ಸೋಯಾಬೀನ್‌: ತಗ್ಗಿದ ಇಳುವರಿ, ಧಾರಣೆ ಏರಿಕೆ

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಎಣ್ಣೆಕಾಳು ಉತ್ಪಾದನೆ ಸ್ವಾವಲಂಬನೆ ಅಗತ್ಯ : ಡಿಸಿ ಶಿಲ್ಪಾ ಶರ್ಮಾ

ಜಿಲ್ಲೆಯಲ್ಲಿ ಎಣ್ಣೆಕಾಳು ಬೆಳೆಗಳ ಉತ್ಪಾದನೆ ಹೆಚ್ಚಿಸುವ ಮೂಲಕ ಸ್ವಾವಲಂಬನೆ ಸಾಧಿಸಬೇಕು. ಕುಸುಬೆ,...

ರೈಲು ಶೌಚಾಲಯದಲ್ಲಿ ನೀರಿಲ್ಲದೆ ಪರದಾಟ: ಇಲಾಖೆಗೆ ದಂಡ ವಿಧಿಸಿದ ಶಿವಮೊಗ್ಗ ಗ್ರಾಹಕ ಆಯೋಗ

ರೈಲಿನಲ್ಲಿ ನೀರಿನ ಸೌಲಭ್ಯ ಕಲ್ಪಿಸದೆ ಸೇವಾ ನ್ಯೂನ್ಯತೆ ಎಸಗಿದ್ದಕ್ಕೆ ಸಂಬಂಧಿಸಿದಂತೆ ರೈಲ್ವೆ...

ಈ ದಿನ ಸಂಪಾದಕೀಯ | ಮೋದಿಯ 56 ಇಂಚಿನ ಅಳ್ಳೆದೆ ಮತ್ತು ಚೀನಾದ ಅತಿಕ್ರಮಣ

ಒಂದು ಕಡೆ ಚೀನಾ ನಮ್ಮ ಗಡಿ ಅತಿಕ್ರಮಿಸುತ್ತಿದ್ದರೆ, ಇನ್ನೊಂದು ಕಡೆ ಅದೇ...