ಬೀದರ್ | ಎಸ್ಸೆಸ್ಸೆಲ್ಸಿ ಫಲಿತಾಂಶ ಶೂನ್ಯ ಬಂದರೆ ಶಿಕ್ಷಕರೇ ಹೊಣೆ : ಡಿಸಿ ಶಿಲ್ಪಾ ಶರ್ಮಾ

Date:

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೂನ್ಯ ಫಲಿತಾಂಶ ಪಡೆದ ಶಾಲೆಗಳ ಶಿಕ್ಷಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು, ಅಗತ್ಯವಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಎಚ್ಚರಿಸಿದರು.

- Advertisement -

ಬೀದರ್ ನಗರದ ಶಾಹೀನ್ ಪದವಿ‌ ಪೂರ್ವ ಕಾಲೇಜು ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಬೀದರ ವತಿಯಿಂದ 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಭೆ ಹಾಗೂ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

‘ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತೀ ಮುಖ್ಯವಾಗಿದೆ. ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ 1 ಮತ್ತು 2ರಲ್ಲಿ ಶೂನ್ಯ ಹಾಗೂ ಶೇ.50ರಷ್ಟು ಫಲಿತಾಂಶ ಪಡೆದ ಶಾಲೆಗಳಲ್ಲಿ ಬೆಳಿಗ್ಗೆ ಹಾಗೂ ಸಂಜೆ ವಿಶೇಷ ತರಗತಿ ನಡೆಸಿ 3ನೇ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತರುವಂತೆ ಶ್ರಮಿಸಬೇಕು’ ಎಂದು ಸೂಚಿಸಿದರು.

ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆಗಾಗಿ ಎಲ್ಲಾ ಶಿಕ್ಷಕರು ಪ್ರಾಮಾಣಿಕವಾಗಿ ಬೋಧನೆ ಮಾಡಬೇಕು. ಫಲಿತಾಂಶ ಸುಧಾರಣೆಗೆ ಕೆಕೆಆರ್‌ಡಿಬಿ ವತಿಯಿಂದ ಪ್ರತಿ ತಾಲ್ಲೂಕಿಗೆ 25 ಲಕ್ಷ ರೂ. ವೆಚ್ಚದಲ್ಲಿ ವಿಷಯವಾರು ಅತಿಥಿ ಶಿಕ್ಷಕರನ್ನು ನೇಮಿಸಿ ವಿಶೇಷ ಬೋಧನೆಗೆ ಕ್ರಮ ಕೈಗೊಳ್ಳಲಾಗಿದೆ. ಹಲವು ಕಾರ್ಯಾಗಾರಗಳನ್ನು ನಡೆಸಿದರೂ ನಿರೀಕ್ಷಿತ ಫಲಿತಾಂಶ ಸಿಗುತ್ತಿಲ್ಲ’ ಎಂದು ಅವರು ವಿಷಾದಿಸಿದರು.

ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ ಬದೋಲೆ ಮಾತನಾಡಿ, ‘ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಗೊಳಿಸಲು ಶಿಕ್ಷಣ ಇಲಾಖೆ 29 ಅಂಶಗಳ ಕಾರ್ಯಕ್ರಮ ರೂಪಿಸಿದೆ. ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಗುಂಪು ಚಟುವಟಿಕೆ, ಪೋಷಕರ ಸಭೆ ಹಾಗೂ ಪೂರ್ವ ಸಿದ್ಧತಾ ಪರೀಕ್ಷೆಗಳ ಮೂಲಕ ಮಾರ್ಗದರ್ಶನ ನೀಡಲಾಗುತ್ತಿದೆ. ಆದರೂ ಫಲಿತಾಂಶ ಸುಧಾರಣೆ ಆಗುತ್ತಿಲ್ಲ’ ಎಂದರು.

‘ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಪೈಕಿ ಬೀದರ ಜಿಲ್ಲೆಗೆ 34ನೇ ಸ್ಥಾನ ಬಂದಿದೆ. ಖಾಸಗಿ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬರುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳ ಸಾಧನೆ ಏಕೆ ಕಡಿಮೆಯಾಗಿದೆ ಎಂಬುದನ್ನು ಬಿಇಒ ಮತ್ತು ಬಿಆರ್‌ಸಿ ಅಧಿಕಾರಿಗಳು ಪರಿಶೀಲಿಸಬೇಕು. ಉತ್ತಮ ಫಲಿತಾಂಶ ನೀಡುವ ಶಾಲಾ ಶಿಕ್ಷಕರನ್ನು ಜಿಲ್ಲಾಡಳಿತ ವತಿಯಿಂದ ಸನ್ಮಾನಿಸಲಾಗುವುದು’ ಎಂದರು.

ಬೀದರ ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್ ಮಾತನಾಡಿ, ‘ವಿದ್ಯಾರ್ಥಿಗಳು ಯಾವ ವಿಷಯದಲ್ಲಿ ಹಿಂದುಳಿದಿದ್ದಾರೆ ಎಂಬುದನ್ನು ಗುರುತಿಸಿ ವಿಶೇಷ ಬೋಧನೆ ನೀಡಬೇಕು’ ಎಂದು ಶಿಕ್ಷಕರಿಗೆ ಸಲಹೆ ನೀಡಿದರು.

ಇದನ್ನೂ ಓದಿ: ಬೀದರ್ | ಮುಷ್ಕರ : ಹೊಸ ಕಾರ್ಮಿಕ ನೀತಿ ವಿರೋಧಿಸಿ ಬೃಹತ್ ಪ್ರತಿಭಟನೆ

ಪ್ರೊಬೇಷನರಿ ಐಎಎಸ್ ಅಧಿಕಾರಿ ರಮ್ಯಾ ರಂಗನಾಥ, ‘ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಜಿ. ಸುರೇಶ್, ಡಯಟ್ ಪ್ರಾಚಾರ್ಯರು, ಕಾರ್ಯಕ್ರಮ ಸಂಯೋಜಕ ಸೈಯದ್ ಪುರ್ಖಾನ್, ಶಾಹೀನ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಅಬ್ದುಲ್ ಹಜಿಜ್ ಸೇರಿದಂತೆ ವಿವಿಧ ಅಧಿಕಾರಿಗಳು ಮತ್ತು ಎಲ್ಲಾ ತಾಲ್ಲೂಕಿನ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬರ : ಪ್ರತಿ ಎಕರೆಗೆ ₹50 ಸಾವಿರ ಪರಿಹಾರ, ರೈತರ ಸಾಲ ಮನ್ನಾಗೆ ಆಗ್ರಹಿಸಿ ರೈತರಿಂದ ಬೈಕ್‌ ರ‍್ಯಾಲಿ

ರೈತರು ಬೆಳೆಯುವ ಎಲ್ಲ ಬೆಳೆಗಳಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕಾನೂನುಬದ್ಧ...

ಬೀದರ್‌ | ಜ್ಞಾನೇಶಕುಮಾರ ವಜಾಗೊಳಿಸಿ, ಬಂಧಿಸಲು ಆಗ್ರಹಿಸಿ ಕಾಂಗ್ರೆಸ್‌ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶಕುಮಾರ ವಜಾಗೊಳಿಸಿ ಬಂಧಿಸಬೇಕೆಂದು ಆಗ್ರಹಿಸಿ...

ಬೀದರ್‌ | ಸೆ.29ರಂದು ನೀರು, ಬರ, ಪರಿಸರ ಕುರಿತು ವಿಚಾರ ಸಂಕಿರಣ

ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ, ಸಿದ್ದಾರ್ಥ ಪದವಿ ಪೂರ್ವ ಕಾಲೇಜು, ಟೀಮ್...

ಬೀದರ್‌ | ಶಿಕ್ಷಕರು ಸಮಾಜದ ಭವಿಷ್ಯ ನಿರ್ಮಿಸುವ ಶಿಲ್ಪಿಗಳು: ಪುಣ್ಯವತಿ ವಿಸಾಜಿ

ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ಜೊತೆಗೆ ಸಮಾಜದ...