ಬೀದರ್‌ | ಶಿಕ್ಷಕರು ರಾಷ್ಟ್ರ ನಿರ್ಮಾಣದ ಶಿಲ್ಪಿಗಳು

Date:

ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪಿಸುವ ಮೂಲಕ ಉತ್ತಮ ಸಮಾಜ ಹಾಗೂ ರಾಷ್ಟ್ರ ನಿರ್ಮಾಣ ಮಾಡುವ ಶಿಲ್ಪಿಗಳಾಗಿದ್ದಾರೆ ಎಂದು ಶಿಕ್ಷಕ ಎಂ.ಎಸ್.‌ಮನೋಹರ ಮಾತನಾಡಿದರು.

- Advertisement -

ಬೀದರ್‌ ನಗರದಲ್ಲಿ ಆದಿತ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

“ಶಿಕ್ಷಕರು ವಿದ್ಯಾರ್ಥಿಗಳಿಗೆ ಕೇವಲ ಪುಸ್ತಕದ ಜ್ಞಾನ ನೀಡುವುದಕ್ಕೆ ಸೀಮಿತವಾಗದೆ, ಜೀವನ ಮೌಲ್ಯಗಳನ್ನು ಕಲಿಸಬೇಕು. ಮಕ್ಕಳಲ್ಲಿ ಶಿಸ್ತು, ಸಂಸ್ಕಾರ, ಮಾನವೀಯತೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ” ಎಂದರು.

ಭಾರತದ ಶ್ರೇಷ್ಠ ಶಿಕ್ಷಣ ತಜ್ಞ, ತತ್ವಜ್ಞಾನಿ ಹಾಗೂ ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಟಿ.ಜೆ. ಹಾದಿಮನಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ” ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಅವರ ಜೀವನ, ವಿಚಾರಧಾರೆ ಹಾಗೂ ಶಿಕ್ಷಣದ ಮೇಲಿನ ನಂಬಿಕೆ ಇಂದಿನ ಪೀಳಿಗೆಗೆ ಉತ್ತಮ ಮಾರ್ಗದರ್ಶನ ನೀಡುತ್ತದೆ. ಶಿಕ್ಷಕರು ಅವರ ಆದರ್ಶಗಳನ್ನು ತಮ್ಮ ವೃತ್ತಿಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ದೇವಿದಾಸ ತುಮಕುಂಟೆ ಮಾತನಾಡಿ, “ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜೀವನ, ಸಾಹಿತ್ಯ, ಶಿಕ್ಷಣ ಚಿಂತನೆ ಹಾಗೂ ಆಡಳಿತ ಕ್ಷೇತ್ರದ ಸಾಧನೆಗಳನ್ನು ವಿವರಿಸಿದರು. ಬದಲಾಗುತ್ತಿರುವ ತಂತ್ರಜ್ಞಾನವನ್ನು ಶಿಕ್ಷಣದೊಂದಿಗೆ ಸಮರ್ಪಕವಾಗಿ ಬಳಸಿಕೊಳ್ಳುವುದರ ಜೊತೆಗೆ, ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ” ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಗುರುತಿಸಿ ಶಾಲು ಹೊದಿಸಿ, ಸ್ಮರಣಿಕೆ ಹಾಗೂ ಗೌರವಪತ್ರ ನೀಡಿ ಸನ್ಮಾನಿಸಲಾಯಿತು.

ಇದನ್ನೂ ಓದಿ : ಬಸವಕಲ್ಯಾಣ | ಶಿಕ್ಷಕರು ಸಮಾಜದ ಅಭಿವೃದ್ಧಿಗೆ ಮೂಲಸ್ತಂಭ: ರವೀಂದ್ರ ಗಾಯಕವಾಡ

ಕಾರ್ಯಕ್ರಮದಲ್ಲಿ ಗಂಗಾಧರ ಕೋರಿ, ಗಣಪತಿ ಸಾಕ್ರೆ, ಧನರಾಜ ತುಡಮೆ, ಅನಿತಾ ತುಮಕುಂಟೆ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋನಿಯಾ ಗಾಂಧಿ ಇನ್‌ಸ್ಟಾಗ್ರಾಮ್‌ಗೆ ಪದಾರ್ಪಣೆ: ‘ಬಿಲಾಂಗಿಂಗ್’ ಆತ್ಮಕಥೆಯ ಮೊದಲ ನೋಟ ಬಿಡುಗಡೆ

ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಾಮಾಜಿಕ ಜಾಲತಾಣ...

ಎಪ್‌ಸ್ಟೀನ್ ಫೋಟೊ ಬಾಂಬ್‌! ಮೋದಿ-ಪುರಿ ವಿರುದ್ಧ ವಿಪಕ್ಷಗಳ ವಾಗ್ದಾಳಿ

ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಅಮೆರಿಕದ ಕುಖ್ಯಾತ ಅಪರಾಧಿ ಜೆಫ್ರಿ ಎಪ್‌ಸ್ಟೀನ್...

ಛಾಯಾಚಿತ್ರ ಪ್ರದರ್ಶನಕ್ಕೂ ಸೆನ್ಸಾರ್: ರೇಹಾನ್ ವಾದ್ರಾರ 74 ಚಿತ್ರಗಳು ತೆರವು; ಖಾಲಿ ಫ್ರೇಮ್‌ಗಳಿಗೂ ನಿರ್ಬಂಧ!

ದೆಹಲಿಯ ಬಿಕಾನೇರ್ ಹೌಸ್‌ನಲ್ಲಿ ನಡೆಯುತ್ತಿದ್ದ ಯುವ ಛಾಯಾಗ್ರಾಹಕ ರೇಹಾನ್ ರಾಜೀವ್ ವಾದ್ರಾ...