ಬೀದರ್‌ | ಕಲಾವಿದರ ಮಾಸಾಶನ ವಯೋಮಿತಿ 40ಕ್ಕೆ ಇಳಿಸಲಿ : ಮಾರುತಿ ಬೌದ್ಧೆ

Date:

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿಯಲ್ಲಿ ಕಲಾವಿದರಿಗೆ ನೀಡಲಾಗುವ ಮಾಸಾಶನ ಸೌಲಭ್ಯಕ್ಕೆ ಪ್ರಸ್ತುತ ನಿಗದಿಪಡಿಸಿರುವ 58 ವರ್ಷ ವಯೋಮಿತಿಯನ್ನು ಕಡಿತಗೊಳಿಸಿ 40 ವರ್ಷಕ್ಕೆ ಇಳಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕರಾದಸಂಸ) ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ ಆಗ್ರಹಿಸಿದರು.

- Advertisement -

ನಗರದ ಪೂಜ್ಯ ಚೆನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಚಿಗುರು ಸೋಷಿಯಲ್ ಮತ್ತು ಕಲ್ಚರಲ್ ಟ್ರಸ್ಟ್ ತಡಪಳ್ಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೀದರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪ್ರೊ. ಬಿ. ಕೃಷ್ಣಪ್ಪ ಅವರ ಜಯಂತ್ಯೋತ್ಸವ ಅಂಗವಾಗಿ ನಡೆದ ಜನಪರ ಸಂಗೀತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

“ಎಲ್ಲಾ ಪ್ರಕಾರದ ಕಲೆಗಳನ್ನು ಪ್ರದರ್ಶಿಸುವ ಕಲಾವಿದರಿಗೆ ಮಾಸಾಶನ ಪಡೆಯಲು 58 ವರ್ಷ ವಯಸ್ಸು ಕಡ್ಡಾಯಗೊಳಿಸಿರುವುದು ಅವೈಜ್ಞಾನಿಕ ಕ್ರಮವಾಗಿದೆ. ಅನೇಕ ಕಲಾವಿದರು ಆ ವಯಸ್ಸಿಗೆ ತಲುಪುವ ಮುನ್ನವೇ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಕೆಲವರು ವಯೋಸಹಜ ಕಾರಣಗಳಿಂದ ಮೃತಪಟ್ಟಿರುವ ಉದಾಹರಣೆಗಳೂ ಇವೆ. ಆದ್ದರಿಂದ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಮಾಸಾಶನಕ್ಕೆ ಅರ್ಹತೆ ಪಡೆಯುವ ವಯೋಮಿತಿಯನ್ನು 58 ರಿಂದ 40 ವರ್ಷಕ್ಕೆ ಇಳಿಸುವ ಮೂಲಕ ಕಲಾವಿದರನ್ನು ಗೌರವಿಸಿ ಅವರಿಗೆ ಆರ್ಥಿಕ ಭದ್ರತೆ ಒದಗಿಸಬೇಕು” ಎಂದು ಒತ್ತಾಯಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಗುರು ಟ್ರಸ್ಟ್ ಅಧ್ಯಕ್ಷ ಶಿವರಾಜ ತಡಪಳ್ಳಿ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಶಿಂದೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಹಿರಿಯ ಕಲಾವಿದ ಹಾಗೂ ಹೋರಾಟಗಾರ ಬಕ್ಕಪ್ಪಾ ದಂಡಿನ್ ಅವರು ಪ್ರೊ. ಬಿ. ಕೃಷ್ಣಪ್ಪ ಅವರ ಜೀವನ ಚರಿತ್ರೆಯನ್ನು ಪರಿಚಯಿಸಿದರು. ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ ಅತಿವಾಳೆ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೊನಾರೆ ಅವರು ಮಾತನಾಡಿದರು.

ಹಿರಿಯ ಕಲಾವಿದ ಶಂಭುಲಿಂಗ ವಾಲ್ದೋಡ್ಡಿ ಅವರು ವಿವಿಧ ಜನಪದ ಗೀತೆಗಳನ್ನು ಹಾಡುವ ಮೂಲಕ ಕಲಾವಿದರನ್ನು ರಂಜಿಸಿದರು ಹಾಗೂ ಹುರಿದುಂಬಿಸಿದರು. ಬಳಿಕ ಸುಮಾರು 16 ಕಲಾತಂಡಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟವು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಕಲಾವಿದರು, ವಿಕಲಚೇತನರು ಹಾಗೂ ಸರ್ಕಾರಿ ಸೇವೆಯಿಂದ ನಿವೃತ್ತರಾದ ಸಿಬ್ಬಂದಿಯನ್ನು ಸನ್ಮಾನಿಸಿ ಗೌರವಿಸಲಾಯಿತು.

ಇದನ್ನೂ ಓದಿ : ಬೀದರ್‌ | ರಹೀಂ ಖಾನ್‍ಗೆ ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ಕಚೇರಿ ಎದುರು ಕಾರ್ಯಕರ್ತರ ಪ್ರತಿಭಟನೆ

ಕಾರ್ಯಕ್ರಮದಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಂಬೇಡ್ಕರ್) ರಾಜ್ಯ ಸಂಯೋಜಕ ಮಹೇಶ ಗೋರನಾಳಕರ್, ಭೀಮ ಶಕ್ತಿ ಡಿ.ಎಸ್.ಎಸ್. ಜಿಲ್ಲಾಧ್ಯಕ್ಷ ಮುಖೇಶ್ ರಾಯ್, ಕಿರಣ ಬೆಲ್ದಾಳೆ, ದೇವಿದಾಸ ಚಿಮಕೊಡೆ, ರಾಮಣ್ಣ ಅಮಲಾಪೂರ, ಕು. ಸುರೇಖಾ, ಪ್ರಕಾಶ ಡೊಳೆ ಹಾಗೂ ಟ್ರಸ್ಟ್ ಅಧ್ಯಕ್ಷ ಶಿವರಾಜ ತಡಪಳ್ಳಿ ಹಾಗೂ ಕಾರ್ಯದರ್ಶಿ ಸಂಗೀತಾ ಶಿವರಾಜ ತಡಪಳ್ಳಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಳ್ಳು ಅಫಿಡವಿಟ್‌ ವಿರುದ್ಧ ಮತದಾರರೇ ದೂರು ಸಲ್ಲಿಸಬಹುದು, ಇಸಿ ಅನುಮತಿ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್

ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರದೊಂದಿಗೆ ಸಲ್ಲಿಸುವ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಿದ್ದರೆ,...

ಬೀದರ್‌ | ಜಾತಿರಹಿತ, ಶೋಷಣೆರಹಿತ ಲಿಂಗಾಯತ ಧರ್ಮ : ಎಂ.ಬಿ.ಪಾಟೀಲ್

ವಿಶ್ವಗುರು ಬಸವಣ್ಣನವರ ವಿಚಾರಧಾರೆ, ಶರಣರ ವಚನ ಸಾಹಿತ್ಯ ಹಾಗೂ ಸಮಾನತೆಯ ಆಶಯಗಳಿಗೆ...

ರಾಮನಗರ | ಡಾ. ಬಂಜಗೆರೆ ಜಯಪ್ರಕಾಶ್‌ ಅವರಿಗೆ ಪ್ರಶಸ್ತಿ ಗೌರವ: ‘ಜನಮುಖಿ ಜೆಪಿ’ ಕಾರ್ಯಕ್ರಮ ಸಫಲ

ಹಿರಿಯ ಸಾಹಿತಿ ಡಾ. ಬಂಜಗೆರೆ ಜಯಪ್ರಕಾಶ್ (ಜೆ.ಪಿ) ಅವರಿಗೆ ಕರ್ನಾಟಕ ಸಾಹಿತ್ಯ...

ಕಲಬುರಗಿ | ಪ್ರಾಧ್ಯಾಪಕ ಶಿವಾನಂದ ಬಂಟನೂರಗೆ ಡಾ.ಪ್ರತಿಭಾ ಚಿಣ್ಣಪ್ಪ ಸ್ಮರಣಾರ್ಥ ಪ್ರಶಸ್ತಿ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಂಗೀತ ಮತ್ತು ಲಲಿತ ಕಲಾ ವಿಭಾಗದ ಸಹಾಯಕ...