ಬೀದರ್‌ | ಭಗವಂತ ಖೂಬಾ ಮೇಲಿನ ಪ್ರಕರಣ ದ್ವೇಷ ರಾಜಕಾರಣಕ್ಕೆ ಸಾಕ್ಷಿ : ಸೋಮನಾಥ ಪಾಟೀಲ್

Date:

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಬಿಜೆಪಿ ಪಕ್ಷದ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಸಮಯ ಸಂದರ್ಭಕ್ಕೆ ತಕ್ಕಂತೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ದ್ವೇಷ ರಾಜಕಾರಣ ಮುಂದುವರೆಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ಹೇಳಿದ್ದಾರೆ.

- Advertisement -

ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಮೇಲೆ ಭಾಲ್ಕಿಯಲ್ಲಿ ಪ್ರಕರಣ ದಾಖಲಿಸಿದ್ದು ಸಹ ಅವರ ದ್ವೇಷ ರಾಜಕಾರಣಕ್ಕೆ ಮತ್ತೊಂದು ಸಾಕ್ಷಿಯಾಗಿದೆ, ಇದನ್ನ ಭಾರತೀಯ ಜನತಾ ಪಾರ್ಟಿ ಖಂಡಿಸುತ್ತದೆ ಎಂದು ಸೋಮನಾಥ ಪಾಟೀಲ್ ಪ್ರಕಟಣೆಯಲ್ಲಿ ಬುಧವಾರ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ʼಪಾಪನಾಶ ದೇವಸ್ಥಾನಕ್ಕೆ ನಾವು ನಮ್ಮ ಕಾರ್ಯಕರ್ತರೊಂದಿಗೆ ಶಾಂತಿಯುತವಾಗಿ ಪೂಜೆ ಮಾಡಲು ತೆರಳಿದಾಗ ಈಶ್ವರ ಖಂಡ್ರೆ ಅವರು ಪೊಲೀಸ್‌ರನ್ನು ಮುಂದೆ ತಂದು ನಮ್ಮನ್ನು ತಡೆದು, ಬಿಸಿಲಿನಲ್ಲಿ ಎರಡ್ಮೂರು ಗಂಟೆಗಳ ಕಾಲ ಕಾಯಿಸಿ, ಕೊನೆಗೆ ಕಾರ್ಯಕರ್ತರಿಗೆ ಪೂಜೆ, ಅಭಿಷೇಕ ಮಾಡಲು ಅವಕಾಶ ನೀಡಲಿಲ್ಲ. ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಈ ಘಟನೆ ಕಂಡು ಆವೇಶದಲ್ಲಿ ಭಗವಂತ ಖೂಬಾ ಅವರು ಖಂಡ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರುʼ ಎಂದಿದ್ದಾರೆ.

ʼಇದರ ಬಗ್ಗೆ ಈಗಾಗಲೇ ನಾನು ತಿಳಿಸಿರುವೆ. ಇಷ್ಟಾದರೂ ಈಶ್ವರ ಖಂಡ್ರೆಯವರು ಅವರ ಪಕ್ಷದ ಕಾರ್ಯಕರ್ತನ ಕೈಯಿಂದ ಖಾಸಗಿ ದೂರು ಕೊಡಿಸಿ, ನ್ಯಾಯಾಲಯದಿಂದ ಆದೇಶ ಮಾಡಿಸಿ, ಪ್ರಕರಣ ದಾಖಲಿಸಿರುವುದು ಒಳ್ಳೆಯ ಬೆಳವಣಿಗೆಯಲ್ಲ. ನಾಲ್ಕು ಬಾರಿ ಶಾಸಕರಾಗಿ, ರಾಜ್ಯದಲ್ಲಿ ಮಂತ್ರಿಯಾಗಿರುವ ಖಂಡ್ರೆಗೆ ಇದು ಶೋಭೆ ತರುವುದಿಲ್ಲʼ ಎಂದು ಸೊಮನಾಥ ಪಾಟೀಲ್ ಕೀಡಿಕಾರಿದ್ದಾರೆ.

ʼಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಖಂಡ್ರೆ ಅವರ ಕಾರ್ಯಕರ್ತ ತುಕರಾಮ ಎಂಬಾತ ವಿಡಿಯೋ ಮಾಡಿ, ಜೀವ
ಬೆದರಿಕೆ ಹಾಕಿ, ನಿಂದನೆ ಮಾಡಿದ್ದಾನೆ. ಆತನ ಮೇಲೆ ಪೊಲೀಸರು ಇಲ್ಲಿಯವರೆಗೆ ಸುಮೋಟೊ ಕೇಸ್ ದಾಖಲಿಸಿಲ್ಲ. ಒಬ್ಬ
ಜನಪ್ರತಿನಿಧಿ ಬಗ್ಗೆ ಪೊಲೀಸ್ ಇಲಾಖೆ ಇಷ್ಟೊಂದು ನಿಷ್ಕಾಳಜಿ ತೊರಿಸಿದರೆ ಇನ್ನು ಸಾಮಾನ್ಯರ ಗತಿಯೇನುʼ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಸಚಿವ ಖಂಡ್ರೆಗೆ ನಿಂದನೆ : ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ದೂರು ದಾಖಲು

ಕೂಡಲೇ ಭಗವಂತ ಖೂಬಾ ಅವರ ಮೇಲೆ ಹಾಕಿರುವ ಪ್ರಕರಣ ಕೈ ಬಿಡಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷ ಸೊಮನಾಥ ಪಾಟೀಲ್
ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಸಂಸತ್‍ನಲ್ಲಿ ಮಹತ್ವದ ಚರ್ಚೆ

ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...