ಬೀದರ್‌ | ಗಡಿಯಲ್ಲಿ ಮೊಳಗಿದ ಕನ್ನಡ ಕಹಳೆ

Date:

ರಾಜ್ಯದ ಗಡಿ ತಾಲೂಕು ಔರಾದ್‌ನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆಗೆ ಅದ್ದೂರಿಯಾಗಿ ಚಾಲನೆ ದೊರೆಯಿತು. ʼಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕುʼ, ಕನ್ನಡವೇ ಸತ್ಯ ಕನ್ನಡವೇ ನಿತ್ಯ, ಎಂಬ ಜಯಘೋಷದ ಅನುರಣನ. ಬಾನೆತ್ತರದ ಹಾರಾಡಿದ ಬಾವುಟ. ಎಲ್ಲೆಲ್ಲೂ ಕನ್ನಡ ಧ್ವಜಗಳ ಹಾರಾಟ, ವಿದ್ಯಾರ್ಥಿಗಳ ಉತ್ಸಾಹದ ಭರ್ಜರಿ ನೃತ್ಯ, ಕನ್ನಡಾಭಿಮಾನಿಗಳ ಉಲ್ಲಾಸ…..

- Advertisement -

ಔರಾದ್‌ ತಾಲೂಕು ಏಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ.ಮನ್ಮತ ಡೋಳೆ ಹಾಗೂ ಕನ್ನಡ ತಾಯಿ ಭುವನೇಶ್ವರಿ ಮೂರ್ತಿಯ ಮೆರವಣಿಗೆಯ ವೇಳೆ ಒಡಮೂಡಿದ ಕನ್ನಡತನದ ಬೆಳಗು. ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು, ಕನ್ನಡಾಭಿಮಾನಿಗಳು, ಸಾಹಿತ್ಯಾಸಕ್ತರು ಒಳಗೊಂಡಿರುವ ಈ ಮೆರವಣಿಗೆಯುದ್ದಕ್ಕೂ ಕನ್ನಡ ಕಂಪು ಸೂಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಪಟ್ಟಣದ ಅಮರೇಶ್ವರ ದೇವಸ್ಥಾನ ಎದುರು ಬೆಳಗ್ಗೆ 8ಗಂಟೆ ಸುಮಾರಿಗೆ ಸಮ್ಮೇಳನದ ಭವ್ಯ ಮೆರವಣಿಗೆಗೆ ಚಾಲನೆ ದೊರೆಯಿತು. ಈ ವೇಳೆ ಕನ್ನಡ ತಾಯಿ ಭುವನೇಶ್ವರಿಗೆ ಸಮ್ಮೇಳನದ ಸರ್ವಾಧ್ಯಕ್ಷ ಡಾ.ಮನ್ಮತ ಡೋಳೆ ಹಾಗೂ ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ, ತಾಲೂಕಾಧ್ಯಕ್ಷ ಬಿ.ಎಂ.ಅಮರವಾಡಿ ಸೇರಿದಂತೆ ಅಧಿಕಾರಿಗಳ ನೇತ್ರತ್ವದಲ್ಲಿ ಧ್ವಜಾರೋಹಣ, ಭುವನೇಶ್ವರಿ ದೇವಿ ಪೂಜೆ ನೆರವೇರಿಸಿದರು.

WhatsApp Image 2026 02 04 at 11.37.40 AM

ಅಲಂಕೃತ ಸಾರೋಟ, ಕುದುರೆ, ಒಂಟೆಗಳ ಮೇಲೆ ಸರ್ವಾಧ್ಯಕ್ಷರ ಮೆರವಣಿಗೆ ಎಳೆಯುತ್ತಿದ್ದಂತೆಯೇ ಕನ್ನಡಿಗರ ಮನದಲ್ಲಿ ಆನಂದದ ಪುಳಕ. ಕನ್ನಡಾಂಬೆಗೆ ಜಯವಾಗಲಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಜಯಘೋಷಗಳು ಮೊಳಗಿದವು.

ನಂತರ ಮೆರವಣಿಗೆಯು ನಂತರ ಮೆರವಣಿಗೆಯು ಪಟ್ಟಣದ ಬಸವೇಶ್ವರ ವೃತ್ತ, ಕನಕದಾಸ ವೃತ್ತ, ಛತ್ರಪತಿ ಶಿವಾಜಿ ವೃತ್ತ, ಕನ್ನಡಾಂಬೆ ವೃತ್ತ, ಡಾ.ಚನ್ನಬಸವ ಪಟ್ಟದ್ದೇವರು ವೃತ್ತದ ಮಾರ್ಗವಾಗಿ ಪ್ರಧಾನ ವೇದಿಕೆಗೆ ತಲುಪಿತು. ಸುಮಾರು 1 ಕಿ.ಮೀಟರ್‌ಗೂ ಅಧಿಕ ಅಂತರ ಸಾಗಿದ ಮೆರವಣಿಗೆ ಅತ್ಯಂತ ಅದ್ದೂರಿಯಾಗಿ ನಡೆಯಿತು.

ನಾಲ್ಕು ವರ್ಷಗಳ ಬಳಿಕ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹೆಚ್ಚು ಆಕರ್ಷಣೀಯಗೊಳಿಸಲು ನಾನಾ ಕಡೆಯಿಂದ ಆಗಮಿಸಿದ್ದ ಸಾವಿರಾರು ಕನ್ನಡಾಭಿಮಾನಿಗಳು ಮೆರವಣಿಗೆಯಲ್ಲಿದ್ದರು. ಅದರಲ್ಲೂ ವಿವಿಧ ಶಾಲಾ-ಕಾಲೇಜಿನ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು. ಮೆರವಣಿಗೆಯಲ್ಲಿ ಡಿಜೆ ಹಾಡು, ತಮಟೆ ಸದ್ದಿಗೆ ಕನ್ನಡಾಭಿಮಾನಿಗಳ ಹರ್ಷೋಲ್ಲಾಸ ಮುಗಿಲು ಮುಟ್ಟಿತು, ಕುಣಿದು ಕುಪ್ಪಳಿಸಿದರು.

WhatsApp Image 2026 02 04 at 11.37.39 AM

ಸುಮಾರು ಒಂದು ಕಿ.ಮೀ. ಉದ್ದದ ಮೆರವಣಿಗೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌, ಬಸವಣ್ಣ, ಕನಕದಾಸ, ಸಂಗೊಳ್ಳಿ ರಾಯಣ್ಣ, ಡಾ.ರಾಜಕುಮಾರ, ಪುನಿತ್‌ ರಾಜಕುಮಾರ, ಸಾಲುಮರದ ತಿಮ್ಮಕ್ಕ, ಶಂಕರ ನಾಗ, ಸಿದ್ದಗಂಗಾ ಶಿವಕುಮಾರ ಶ್ರೀ ಸೇರಿದಂತೆ ಮಹಾತ್ಮರ ಫೋಟೊ, ಕನ್ನಡ ಧ್ವಜಗಳೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿರುವ ಆಟೋಗಳು‌ ಗಮನ ಸೆಳೆದವು. ವಿದ್ಯಾರ್ಥಿಗಳ ಲೇಜಿಮ್‌, ಡ್ಯಾನ್ಸ್‌, ಡೊಳ್ಳು ಕುಣಿತ, ಹಲಗೆ ಕುಣಿತ ನೋಡುಗರ ಮನಸೂರೆಗೊಂಡವು.

ಇದನ್ನೂ ಓದಿ : ಬೀದರ್‌ | ಎಸ್‌ಐಆರ್ ಹೆಸರಿನಲ್ಲಿ ಭಾರತ ಇಸ್ರೇಲೀಕರಣ ಮಾಡುವ ಹುನ್ನಾರ : ಪರಕಾಲ ಪ್ರಭಾಕರ

ಬೆಳಿಗ್ಗೆ 8 ಗಂಟೆ ಸುಮಾರಿಗೆ ಆರಂಭವಾದ ಮೆರವಣಿಗೆಯು 12 ಗಂಟೆಗೆ ಮುಖ್ಯ ವೇದಿಕೆಗೆ ತಲುಪಿತು. ತೆಲಂಗಾಣ-ಮಹಾರಾಷ್ಟ್ರ ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿರುವ ಔರಾದ್‌ ಐರಿಹಾಸಿಕ ಕಲೆ, ಸಾಹಿತ್ಯ, ಸಂಸ್ಕೃತಿಯ ಹಿರಿಮೆ ಹೊಂದಿದೆ. ಬಹುಭಾಷಿಕ ನೆಲದಲ್ಲಿ ಸುಮಾರು ನಾಲ್ಕು ಗಂಟೆಗಳ ಕಾಲ ಗಡಿಯಲ್ಲಿ ಅಕ್ಷರ ಜಾತ್ರೆಯ ತೇರು ಎಳೆಯುವಲ್ಲಿ ಜಿಲ್ಲೆಯ ನಾನಾ ಕಡೆಯಿಂದ ಕನ್ನಡಾಭಿಮಾನಿಗಳು ಸಾಕ್ಷಿಯಾದರು.

WhatsApp Image 2026 02 04 at 11.28.23 AM

ಇದನ್ನೂ ಓದಿ : ಬೀದರ್‌ | ಅಕ್ಷರ ಜಾತ್ರೆಗೆ ಸಿಂಗಾರಗೊಂಡ ಔರಾದ್‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣ | ಮಡಿವಾಳ ಮಾಚಿದೇವರ ಕುಂಡ ಅಭಿವೃದ್ಧಿಗೆ ಮನವಿ

ಬಸವಕಲ್ಯಾಣ ನಗರದ ಶರಣ ಮಡಿವಾಳ ಮಾಚಿದೇವರ ಕುಂಡವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಅಗತ್ಯ...

ಎಸ್‌ಐಆರ್ | ಭಾಲ್ಕಿ ಕ್ಷೇತ್ರದಲ್ಲಿ ಮುಸ್ಲಿಮರ ಮತ ಅಳಿಸುವ ಯತ್ನ, ನೂರಾರು ಅರ್ಜಿ ಪತ್ತೆ?

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಇನ್ನೂ...

ಬೀದರ್‌ | ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

2026-27ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ...

ಬೀದರ್‌ | ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿ ಮುತ್ತಿಗೆ

ಬೀದರ್‌ ತಾಲೂಕಿನ ಅಮಲ್ಲಾಪುರ ಗ್ರಾಮದ ಸರ್ವೇ ನಂ.71ರ ಜಾಗವನ್ನು ದಲಿತ ಸಮುದಾಯದ...