ಬೀದರ್‌ | ಕನ್ನಡ ಅಸ್ಮಿತೆ ಉಳಿಸಿ ಬೆಳೆಸುವಲ್ಲಿ ಏಕೀಕರಣ ಚಳವಳಿ ಕೊಡುಗೆ ಅಪಾರ

Date:

ಕರ್ನಾಟಕ ಏಕೀಕರಣ ಚಳವಳಿ ಕನ್ನಡಿಗರಲ್ಲಿ ನಾಡು, ನುಡಿ ಹಾಗೂ ಭಾಷಾಭಿಮಾನವನ್ನು ಜಾಗೃತಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ ಎಂದು ಸಾಹಿತಿ ಸಾಧನಾ ರಂಜೋಳಕರ್ ಅಭಿಪ್ರಾಯಪಟ್ಟರು.

- Advertisement -

ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು, ಚಕೋರ ಸಾಹಿತ್ಯ ವಿಚಾರ ವೇದಿಕೆ, ಬೀದರ ಹಾಗೂ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ‘ಏಕೀಕರಣ ಚಳವಳಿ ಮತ್ತು ಕನ್ನಡದ ಅಸ್ಮಿತೆ’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಕೊಪ್ಪಳ | 8 ತಿಂಗಳಿನಿಂದ ಕಿಟ್‌ ವಿತರಣೆಯಿಲ್ಲ, ಮಲಗಲು...

ಕೊಪ್ಪಳ ನಗರದ ಡಾ.ಬಿ ಆರ್‌ ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ ನಂತರದ ಬಾಲಕರ ವೃತ್ತಿಪರ ವಸತಿ (ಪರಿಶಿಷ್ಟ ಜಾತಿ) ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು...

“ಜಾಗತಿಕ ಹಾಗೂ ಡಿಜಿಟಲ್ ಯುಗದಲ್ಲಿ ಕನ್ನಡ ಭಾಷೆ ಬೆಳವಣಿಗೆ ಕಾಣುತ್ತಿರುವುದು ಸಂತಸದ ಸಂಗತಿ. ಸಾಮಾಜಿಕ ಜಾಲತಾಣದಲ್ಲಿಯೂ ಕನ್ನಡದ ಬಳಕೆ ಹೆಚ್ಚುತ್ತಿದೆ. ಗೂಗಲ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಜಾಗತಿಕ ಸಂಸ್ಥೆಗಳು ಕನ್ನಡ ಭಾಷೆಗೆ ಹೆಚ್ಚಿನ ಪ್ರಾತಿನಿಧ್ಯ ನೀಡುತ್ತಿವೆ. ಉದ್ಯೋಗಾವಕಾಶಗಳಲ್ಲಿಯೂ ಕನ್ನಡಿಗರಿಗೆ ಆದ್ಯತೆ ನೀಡಬೇಕು” ಎಂದು ಹೇಳಿದರು.

ಸಾಹಿತಿ ರಮೇಶ ಬಿರಾದಾರ ಅವರು, ಆಲೂರು ವೆಂಕಟರಾಯರು ಕರ್ನಾಟಕ ಕುಲಪುರೋಹಿತರೆಂದೇ ಪ್ರಸಿದ್ಧರಾಗಿದ್ದಾರೆ. ಅವರು 1917ರಲ್ಲಿ ರಚಿಸಿದ ‘ಕರ್ನಾಟಕ ಗತವೈಭವ’ ಕೃತಿಯು ಪ್ರತ್ಯೇಕ ಪ್ರದೇಶಗಳಲ್ಲಿ ಹಂಚಿಹೋಗಿದ್ದ ಕನ್ನಡಿಗರಿಗೆ ವಿಜಯನಗರ ಸಾಮ್ರಾಜ್ಯ, ಚಾಲುಕ್ಯರ ವೈಭವ ಹಾಗೂ ಕನ್ನಡ ನಾಡಿನ ಇತಿಹಾಸ ಪರಿಚಯಿಸಿ, ಏಕತೆಯ ಭಾವನೆ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿತು. ಹುಯಿಲಗೋಳ ನಾರಾಯಣರಾಯರು ರಚಿಸಿದ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಗೀತೆ ಏಕೀಕರಣ ಚಳವಳಿ ಹೋರಾಟಗಾರರಲ್ಲಿ ಅಪಾರ ಸ್ಫೂರ್ತಿ ತುಂಬಿತು” ಎಂದು ತಿಳಿಸಿದರು.

ವಿಶೇಷ ಉಪನ್ಯಾಸ ನೀಡಿದ ಪ್ರಾಧ್ಯಾಪಕಿ ಡಾ.ಶಿವಲೀಲಾ ವೀರಯ್ಯ ಅವರು ಮಾತನಾಡಿ, “ಸಿದ್ದಲಿಂಗಯ್ಯ ಅವರ ‘ಹೊಲೆ ಮಾದಿಗರ ಹಾಡು’ ಹಾಗೂ ‘ಸಾವಿರಾರು ನದಿಗಳು’ ಕವನ ಸಂಕಲನಗಳ ಮೂಲಕ ದಲಿತ ಸಮುದಾಯದ ನೋವು, ಹೋರಾಟ ಮತ್ತು ಸಾಮಾಜಿಕ ನ್ಯಾಯದ ಆಶಯಗಳಿಗೆ ಧ್ವನಿಯಾದರು. ಚೆನ್ನಣ್ಣ ವಾಲೀಕಾರ ಅವರು ಬಡತನ, ಹಸಿವು ಮತ್ತು ಸಾಮಾಜಿಕ ಅಸಮಾನತೆಗಳ ವಿರುದ್ಧ ಸಾಹಿತ್ಯದ ಮೂಲಕ ಹೋರಾಡಿದ ಪ್ರಮುಖ ಬಂಡಾಯ ಕವಿಯಾಗಿದ್ದಾರೆ” ಎಂದು ವಿವರಿಸಿದರು.

ಸತೀಶ ಕುಲಕರ್ಣಿ ಅವರ ‘ಕಟ್ಟುತೇವ ಕಾವ್ಯ’ ಹೋರಾಟದ ಗೀತೆ ಜನಪ್ರಿಯತೆ ಗಳಿಸಿದೆ. ಚಂದ್ರಶೇಖರ ಪಾಟೀಲ ಅವರು ತುರ್ತು ಪರಿಸ್ಥಿತಿಯ ವಿರುದ್ಧ ಹಾಗೂ ಕನ್ನಡ ನಾಡು-ನುಡಿಯ ರಕ್ಷಣೆಗಾಗಿ ಕಾವ್ಯದ ಮೂಲಕ ಧ್ವನಿ ಎತ್ತಿದರು. ಬರಗೂರು ರಾಮಚಂದ್ರಪ್ಪ ಅವರು ಬಂಡಾಯ ಸಾಹಿತ್ಯ ಚಳವಳಿಯ ಮುಂಚೂಣಿ ನಾಯಕರಾಗಿ ವೈಚಾರಿಕ ಬರಹಗಳ ಮೂಲಕ ಸಾಮಾಜಿಕ ಬದಲಾವಣೆಗೆ ಶ್ರಮಿಸಿದ್ದಾರೆ ಎಂದು ವಿವರಿಸಿದರು.

WhatsApp Image 2026 10 10 at 7.46.08 PM 35

ಸಾಹಿತಿ ಜಗದೇವಿ ದುಬಲಗುಂಡೆ ಮಾತನಾಡಿ, ಡಾ.ಜಯದೇವಿತಾಯಿ ಲಿಗಾಡೆ ಅವರು ಕನ್ನಡ ಸಾಹಿತ್ಯ, ಸಾಮಾಜಿಕ ಸೇವೆ ಹಾಗೂ ಕರ್ನಾಟಕ ಏಕೀಕರಣ ಹೋರಾಟದಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಸೊಲ್ಲಾಪುರವನ್ನು ಕರ್ನಾಟಕದೊಂದಿಗೆ ವಿಲೀನಗೊಳಿಸುವ ಹೋರಾಟದಲ್ಲಿ ಅವರು ವಹಿಸಿದ ಪಾತ್ರದಿಂದಾಗಿ ‘ಗಡಿನಾಡಿನ ಸಿಂಹಿಣಿ’ ಎಂದೇ ಪ್ರಸಿದ್ಧರಾಗಿದ್ದಾರೆ ಎಂದು ಹೇಳಿದರು.

ಉಪನ್ಯಾಸಕ ಮಯೂರ ಬಸವರಾಜ ಮಾತನಾಡಿ, “ಪ್ರಭುರಾವ್ ಕಂಬಳಿವಾಲೆ ಅವರು ಕಲ್ಯಾಣ ಕರ್ನಾಟಕ ಭಾಗವನ್ನು ಭಾರತ ಒಕ್ಕೂಟಕ್ಕೆ ಸೇರ್ಪಡೆಗೊಳಿಸುವ ಹಾಗೂ ಕರ್ನಾಟಕ ಏಕೀಕರಣಕ್ಕಾಗಿ ನಡೆದ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ನಾಯಕರಲ್ಲಿ ಒಬ್ಬರಾಗಿದ್ದರು ಎಂದು ತಿಳಿಸಿದರು.

ಕಾಲೇಜಿನ ಪ್ರಾಚಾರ್ಯ ವಿಜಯಕುಮಾರ ತೋರಣೆಕರ್, ಚಕೋರ ಸಾಹಿತ್ಯ ವಿಚಾರ ವೇದಿಕೆ ಜಿಲ್ಲಾ ಸಂಚಾಲಕಿ ಡಾ. ಮಕ್ತುಂಬಿ ಎಂ. ಮಾತನಾಡಿದರು ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

WhatsApp Image 2026 10 10 at 6.59.09 PM 14

ಇದನ್ನೂ ಓದಿ : ಬೀದರ್‌ | ಕೆ.ವಿ.ನಾರಾಯಣ ಅಗಲಿಕೆಯಿಂದ ಕನ್ನಡ ಸಾಂಸ್ಕೃತಿಕ ಲೋಕದಲ್ಲಿ ಮೌನ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದಿಂದ ‘ಮತ ಕಳ್ಳತನ’ದ ನಂತರ ‘ಹಕ್ಕುಗಳ ಕಳ್ಳತನ’ ಶುರು: ರಾಹುಲ್ ಗಾಂಧಿ ಆಕ್ರೋಶ

ಕೇಂದ್ರ ಪಂಚಾಯತ್ ರಾಜ್ ಸಚಿವಾಲಯದ ಕಲ್ಯಾಣ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಲು ಆಧಾರ್...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು; ರೂ.264.61 ಲಕ್ಷ ಪರಿಹಾರ ಬಾಕಿ!

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ...

ಬೀದರ್‌ | ಕೆ.ವಿ.ನಾರಾಯಣ ಅಗಲಿಕೆಯಿಂದ ಕನ್ನಡ ಸಾಂಸ್ಕೃತಿಕ ಲೋಕದಲ್ಲಿ ಮೌನ

ಹಿರಿಯ ವಿಮರ್ಶಕ, ಭಾಷಾತಜ್ಞ ಹಾಗೂ ಸಂಸ್ಕೃತಿ ಚಿಂತಕರಾದ ಪ್ರೊ. ಕೆ.ವಿ.ನಾರಾಯಣ ಅವರು...

ಬೀದರ್‌ | ಬಸ್ ಪ್ರಯಾಣ ದರ ಏರಿಕೆ ಹಿಂಪಡೆಯಲು ಕರವೇ ಆಗ್ರಹ

ರಾಜ್ಯ ಸರ್ಕಾರ ಹೆಚ್ಚಿಸಿರುವ ಬಸ್ ಪ್ರಯಾಣ ದರವನ್ನು ಕೂಡಲೇ ಹಿಂಪಡೆಯಬೇಕು ಎಂದು...