ಬೀದರ್ | ಹಡಪದ ಅಪ್ಪಣ್ಣನವರ ವಚನಗಳು ಬದುಕಿಗೆ ದಾರಿದೀಪ : ಗುರುಬಸವ ಪಟ್ಟದ್ದೇವರು

Date:

ವಿಶ್ವಗುರು ಬಸವಣ್ಣನವರ ಅತ್ಯಂತ ಆತ್ಮೀಯ ಶರಣರಲ್ಲಿ ಹಡಪದ ಅಪ್ಪಣ್ಣನವರು ಒಬ್ಬರಾಗಿದ್ದು, ಅವರ ವಚನಗಳು ಇಂದಿಗೂ ಬದುಕಿಗೆ ದಾರಿದೀಪವಾಗಿವೆ ಎಂದು ಭಾಲ್ಕಿಯ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.

- Advertisement -

ಭಾಲ್ಕಿ ನಗರದ ಹಿರೇಮಠ ಸಂಸ್ಥಾನದಲ್ಲಿ ಬುಧವಾರ ನಡೆದ 501ನೇ ಮಾಸಿಕ ಶಿವಾನುಭವ ಗೋಷ್ಠಿ ಹಾಗೂ ಹಡಪದ ಅಪ್ಪಣ್ಣ–ಲಿಂಗಮ್ಮನವರ ಜಯಂತಿ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

“ಬಸವಣ್ಣನವರ ನೆರಳಿನಂತಿದ್ದ ಹಡಪದ ಅಪ್ಪಣ್ಣನವರು ಅವರ ಎಲ್ಲಾ ಕಾರ್ಯಗಳಲ್ಲಿ ಆಪ್ತರಾಗಿ, ನಿಷ್ಠೆಯಿಂದ ಸೇವೆ ಸಲ್ಲಿಸಿದರು. ಇಂದಿನ ಭಾಷೆಯಲ್ಲಿ ಹೇಳುವುದಾದರೆ ಬಸವಣ್ಣನವರ ಕಾರ್ಯದರ್ಶಿಯಂತೆಯೇ ಅವರು ಕಾರ್ಯನಿರ್ವಹಿಸಿದ್ದರು. ಶರಣ ಚರಿತ್ರೆಯ ಅನೇಕ ಪ್ರಸಂಗಗಳಲ್ಲಿ ಹಡಪದ ಅಪ್ಪಣ್ಣನವರ ಉಲ್ಲೇಖ ದೊರೆಯುತ್ತದೆ” ಎಂದು ತಿಳಿಸಿದರು.

“ಹಡಪದ ಅಪ್ಪಣ್ಣ ಮತ್ತು ಲಿಂಗಮ್ಮ ಅಪರೂಪದ ದಂಪತಿಗಳಾಗಿದ್ದು, ಅನುಭವ ಮಂಟಪದಲ್ಲಿ ಲಿಂಗಾನುಭವ ಪಡೆದು ಶ್ರೇಷ್ಠ ಶಿವಯೋಗಿಗಳಾದರು. ತಮ್ಮ ಆಧ್ಯಾತ್ಮಿಕ ಅನುಭವಗಳನ್ನು ವಚನಗಳ ರೂಪದಲ್ಲಿ ಬರೆದಿಟ್ಟಿದ್ದು, ಅವು ಶಿವಯೋಗ ಸಾಧನೆ ಹಾಗೂ ಅಧ್ಯಾತ್ಮ ಜೀವನಕ್ಕೆ ಮಾರ್ಗದರ್ಶಿಯಾಗಿವೆ. ಬಸವಣ್ಣನವರು ಕಲ್ಯಾಣ ತೊರೆದು ಕೂಡಲಸಂಗಮದತ್ತ ತೆರಳಿದ ಸಂದರ್ಭದಲ್ಲಿ ಅವರೊಂದಿಗೆ ಹೋದವರಲ್ಲಿ ಹಡಪದ ಅಪ್ಪಣ್ಣನವರೂ ಒಬ್ಬರಾಗಿದ್ದರು. ಈ ಪ್ರಸಂಗವು ಬಸವಣ್ಣ ಮತ್ತು ಅಪ್ಪಣ್ಣನವರ ನಡುವಿನ ಆತ್ಮೀಯ ಬಾಂಧವ್ಯವನ್ನು ಪ್ರತಿಬಿಂಬಿಸುತ್ತದೆ” ಎಂದು ಹೇಳಿದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ. ಶಂಭುಲಿಂಗ ಕಾಮಣ್ಣ ಅನುಭಾವ ನೀಡಿದರು. ತಾಲೂಕು ವಚನ ಸಾಹಿತ್ಯ ಪರಿಷತ್ ಅಧ್ಯಕ್ಷ ಗುಂಡಪ್ಪ ಸಂಗಮಕರ್ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ರಮೇಶ ಕುರುಬಖೇಳಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ನೀಲಾಂಬಿಕಾ ಪ್ರಕಾಶ ಹಡಪದ ಬಸವಗುರು ಪೂಜೆ ನೆರವೇರಿಸಿದರು. ಶ್ರೀದೇವಿ ಶಾಂತಯ್ಯ ಸ್ವಾಮಿ ಹಾಗೂ ಡಾ. ಬಸವಜ್ಯೋತಿ ಗುಂಡಪ್ಪ ಸಂಗಮಕರ್ ವಚನ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಸುಮೀತ ಬೀರಪ್ಪ ಪೂಜಾರಿ ಮತ್ತು ವಿರೇಶ ಶಿವರಾಜ ನಿಂಬೂರೆ ಮಾತನಾಡಿದರು.

ಇದನ್ನೂ ಓದಿ : ಬೀದರ್ | ಎಸ್‌ಐಆರ್‌ ಕರಡು ಪಟ್ಟಿಯಿಂದ 1.66 ಲಕ್ಷ ಮತದಾರರು ಡಿಲೀಟ್: ನಿಮ್ಮ ಹೆಸರು ಮತ ಪಟ್ಟಿಯಲ್ಲಿ ಭದ್ರವಾಗಿದೆಯೇ?

ಅಕ್ಕಬಳಗದ ಶರಣೆಯರಿಂದ ವಚನ ಭಜನೆ ನಡೆಯಿತು. ಸುಗಂದಬಾಯಿ ಗೋವಿಂದರಾವ ಹಡಪದ ಅವರಿಂದ ಭಕ್ತಿ ದಾಸೋಹ ಏರ್ಪಡಿಸಲಾಗಿತ್ತು. ಸಂತೋಷ ಹಡಪದ ಸ್ವಾಗತಿಸಿದರು. ದೀಪಕ ಠಮಕೆ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು...

ಹೊಸನಗರ | ರೂ. 4 ಲಕ್ಷ ಮೌಲ್ಯದ ಸಾಗುವಾನಿ ನಾಟ ವಶ!

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಂದೂರು ಗ್ರಾಮದಲ್ಲಿ...