ಬೀದರ್‌ | ಜಿಲ್ಲೆಯಲ್ಲಿ ಇಂಟರ್‌ನ್ಯಾಷನಲ್‌ ಶಾಲೆಗಳೇ ಇಲ್ಲ : ಮಾಹಿತಿ ಬಹಿರಂಗ

Date:

ಬೀದರ್ ಜಿಲ್ಲೆಯಾದ್ಯಂತ ಅನೇಕ ಕಡೆಗಳಲ್ಲಿ ʼಇಂಟರ್‌ನ್ಯಾಷನಲ್‌ ಸ್ಕೂಲ್’ ಎಂಬ ಹೆಸರಿನ ಬೋರ್ಡ್‌ ಹಾಕಿ ಶಾಲೆಗಳನ್ನು ನಡೆಸಲಾಗುತ್ತಿದೆ. ಆದರೆ, ಇಡೀ ಜಿಲ್ಲೆಯಲ್ಲಿ ಒಂದೇ ಒಂದು ಇಂಟರ್‌ನ್ಯಾಷನಲ್‌ ಶಾಲೆ ಇಲ್ಲ ಎಂಬುದು ಸಾಮಾಜಿಕ ಕಾರ್ಯಕರ್ತ ಕಮಲಾಕರ ಹೆಗಡೆ ಅವರು ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿ, ಪಡೆದ ಮಾಹಿತಿಯಿಂದ ಈ ವಿಷಯ ಬಹಿರಂಗಗೊಂಡಿದೆ.

- Advertisement -

ಜಿಲ್ಲೆಯಾದ್ಯಂತ ಎಷ್ಟು ಇಂಟರ್‌ನ್ಯಾಷನಲ್‌ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ. ಅವುಗಳ ಹೆಸರು, ವಿಳಾಸ ಹಾಗೂ ಮಾನ್ಯತೆಗೆ ಸಂಬಂಧಿಸಿದ ವಿವರ, ಶಿಕ್ಷಕರ ಸಂಖ್ಯೆ ಎಷ್ಟು, ಅವರಿಗೆ ನೀಡಲಾಗುತ್ತಿರುವ ವೇತನದ ವಿವರ, ಸ್ವಂತ ಅಥವಾ ಬಾಡಿಗೆ ಕಟ್ಟಡಗಳ ವಿವರ ನೀಡಬೇಕೆಂದು ಕೋರಿ ಕಮಲಾಕರ ಅವರು ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯು ಮಾಹಿತಿ ಒದಗಿಸಿದ್ದು, ಬೀದರ್‌ ಜಿಲ್ಲೆಯಲ್ಲಿ ಯಾವುದೇ ಇಂಟರ್‌ನ್ಯಾಷನಲ್‌ ಶಾಲೆಗಳು ನಡೆಯುತ್ತಿಲ್ಲ ಎಂದು ಅಧಿಕೃತ ಮಾಹಿತಿ ನೀಡಿದೆ ಎಂದು ಕಮಲಾಕರ ಹೆಗಡೆ ಅವರು ತಿಳಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಕಮಲಾಕರ ಹೆಗಡೆ ಮಾತನಾಡಿ, “ಬೀದರ್‌ ಜಿಲ್ಲೆಯಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳು ಇಂಟರ್‌ನ್ಯಾಷನಲ್‌ ಹೆಸರಿಟ್ಟುಕೊಂಡು ಅಮಾಯಕ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಇದರಿಂದ ಪೋಷಕರು ಮೋಸಕ್ಕೆ ಒಳಗಾಗುತ್ತಿದ್ದಾರೆ. ಹೀಗೆ ಹೆಸರಿನ ದುರ್ಬಳಕೆ ತಡೆಗೆ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

“ಪೋಷಕರು ತಮ್ಮ ಮಕ್ಕಳಿಗೆ ಶಾಲೆಗೆ ಸೇರಿಸುವ ಮುನ್ನ ಶಾಲೆಯ ಮಾನ್ಯತೆ ಪರಿಶೀಲಿಸುವುದು ಒಳಿತು. ಸುಸಜ್ಜಿತ ಕಟ್ಟಡ, ಹೊರ ರಾಜ್ಯ, ಜಿಲ್ಲೆಗಳ ಶಿಕ್ಷಕರಿಂದ ಗುಣಮಟ್ಟ ಬೋಧನೆ ಲಭ್ಯ ಎಂದು ಮರುಳಾಗಬಾರದು. ಶಾಲಾ ಆಡಳಿತ ಮಂಡಳಿಯು ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲ ಮಾರ್ಗಸೂಚಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನಿಯಮಗಳು ಮೀರಿದರೆ ಸಂಸ್ಥೆಗಳ ವಿರುದ್ಧಶಿಕ್ಷಣ ಇಲಾಖೆ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ಯುವಜನತೆ ತಂಬಾಕು ವ್ಯಸನದಿಂದ ದೂರವಿರಿ : ಡಿಎಚ್‌ಒ ದ್ಯಾನೇಶ್ವರ ನಿರಗುಡೆ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು...