ಔರಾದ್ | ತಾಯಿಗಿಂತ ಮಿಗಿಲಾದ ಶಕ್ತಿ ಇನ್ನೊಂದಿಲ್ಲ

Date:

ಔರಾದ್ ತಾಲೂಕಿನ ವಡಗಾಂವ (ದೇ) ಗ್ರಾಮದಲ್ಲಿ ಕೆಎಎಸ್ ಅಧಿಕಾರಿ ಖಾಜಾ ಖಲಿಲುಲ್ಲಾ ಅವರ ಗೆಳೆಯರ ಬಳಗದ ವತಿಯಿಂದ ಭಾನುವಾರ ವಿಶ್ವ ತಾಯಂದಿರ ದಿನಾಚರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ನಡೆಯಿತು.

- Advertisement -

ಮುಖ್ಯ ಶಿಕ್ಷಕಿ ಸವಿತಾ ಪಾಟೀಲ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼತಾಯಿಗಿಂತ ಮಿಗಿಲಾದ ಶಕ್ತಿ ಇನ್ನೊಂದಿಲ್ಲ. ಪ್ರತಿಯೊಬ್ಬರು ಜನ್ಮ ನೀಡಿದ ತಾಯಿಗೆ ನೋವು ನೀಡದೆ ಬದುಕಿನುದ್ದಕ್ಕೂ ಪ್ರೀತಿ, ಗೌರವ, ನೆಮ್ಮದಿಯಿಂದ ಬದುಕುವಂತೆ ನೋಡಿಕೊಂಡರೆ ಬದುಕು ಸಾರ್ಥಕವಾಗುತ್ತದೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ʼವಾಣಿಜ್ಯ ಇಲಾಖೆಯ ಅಧಿಕಾರಿ ಖಾಜಾ ಖಲಿಲುಲ್ಲಾ ಅವರು ಕಡು ಬಡತನದಲ್ಲಿ ಜನಿಸಿ ಸರಕಾರಿ ಶಾಲೆಯಲ್ಲಿಯೇ ವ್ಯಾಸಂಗ ಮಾಡಿ ಕಠಿಣ ಪರಿಶ್ರಮದಿಂದ ಉನ್ನತ ಹುದ್ದೆ ಅಧಿಕಾರಿಯಾಗಿರುವುದು ವಿದ್ಯಾರ್ಥಿಗಳಿಗೆ ಆದರ್ಶವಾಗಿದ್ದಾರೆ. ಗ್ರಾಮೀಣ ಭಾಗದ ತಾಯಂದಿರಿಗೆ ಮತ್ತು ಪ್ರತಿಭಾನ್ವಿತ ಮಕ್ಕಳಿಗೆ ಗೌರವಿಸಿ ಪ್ರೇರಣೆ ನೀಡುವ ಕಾರ್ಯ ಶ್ಲಾಘನೀಯʼ ಎಂದರು.

ಸಂಪನ್ಮೂಲ ಶಿಕ್ಷಕಿ ಸಿರಾಜ್ ಬೇಗಂ ಮಾತನಾಡಿ, ʼತಾಯಿಯ ಋಣ ಈ ಜನ್ಮದಲ್ಲಿ ತೀರಿಸಲು ಸಾಧ್ಯವಿಲ್ಲ. ಮಕ್ಕಳಿಗಾಗಿ ತನ್ನ ಸರ್ವಸ್ವನ್ನೇ ತೊರೆದು ಮಕ್ಕಳ ಏಳಿಗಾಗಿಯಲ್ಲಿಯೇ ತಾನು ಸಂತಸಪಡುವ ತಾಯಿ ಮೌಲ್ಯ ವರ್ಣಿಸಲು ಸಾಧ್ಯವಿಲ್ಲʼ ಎಂದರು.

ಪ್ರಾಚಾರ್ಯ ನವೀಲಕುಮಾರ ಉತ್ಕಾರ ಮಾತನಾಡಿ, ʼಕೆಎಎಸ್ ಅಧಿಕಾರಿ ಖಾಜಾ ಖಲಿಲುಲ್ಲಾ ಅವರು ಪ್ರತಿವರ್ಷ ತಾಯಂದಿರಿಗೆ ಗೌರವಿಸುವ ಸಂಸ್ಕೃತಿ ಬೆಳೆಸಿಕೊಂಡು ಬಂದಿರುವುದು ಸಮಾಜಕ್ಕೆ ಆದರ್ಶವಾಗಿದೆ. ಬಡ, ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣದ ಉನ್ನತಿಗಾಗಿ ಪ್ರಯತ್ನಿಸುತ್ತಿರುವ ಅವರ ಸಾಮಾಜಿಕ ಕಾರ್ಯ ಮೆಚ್ಚುವಂತಹದುʼ ಎಂದರು.

WhatsApp Image 2026 05 10 at 5.58.13 PM 2
ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಸುಮಾರು 100ಕ್ಕಿಂತ ಹೆಚ್ಚಿನ ತಾಯಂದಿರಿಗೆ ಉಡಿತುಂಬಿ ಸೀರೆ ಉಡುಗೊರೆಯಾಗಿ ನೀಡಲಾಯಿತು. 40ಕ್ಕೂ ಅಧಿಕ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.

ಇದನ್ನೂ ಓದಿ : ಬೀದರ್‌ | ಈಜಲು ಹೋದ ಯುವಕ ನೀರುಪಾಲು : ಸಿಗದ ಸುಳಿವು, ಮುಂದುವರೆದ ಶೋಧಕಾರ್ಯ

ಕಾರ್ಯಕ್ರಮದಲ್ಲಿ ಪ್ರಮುಖರಾದ ನಸೀಮಾ ಬೇಗಂ, ಕೆಎಎಸ್ ಅಧಿಕಾರಿ ಖಾಜಾ ಖಲಿಲುಲ್ಲಾ, ಶ್ರೀದೇವಿ ಗೌಡಾ, ಇರ್ಫಾನಾ ಬೇಗಂ, ಸುವರ್ಣ ಫುಲೆ, ರಜೀಯಾ ಬೇಗಂ, ಡಾ.ಸಿದ್ದರೆಡ್ಡಿ , ನವೀಲಕುಮಾರ ಉತ್ಕಾರ, ಲಕ್ಷ್ಮಿಬಾಯಿ ಫುಲೆ, ಕಲೀಂ ಉಲ್ಲಾ, ಸೆಫಿಯುಲ್ಲಾ, ಓಂಕಾರ ಮೇತ್ರೆ, ಬಬಲ್ಲೂಖಾನ್, ಪಿಡಿಒ ಚಂದ್ರಕಾಂತ ಫುಲೆ, ಬಸವ ಚಿಕಲಿಂಗೆ ಸೇರಿದಂತೆ ವಿದ್ಯಾರ್ಥಿಗಳು, ಪೋಷಕರು, ಸಾಮಾಜಿಕ ಚಿಂತಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...