ಬೀದರ್‌ | ಗುಡುಗು ಸಹಿತ ಮಳೆ : ಸಿಡಿಲು ಬಡಿದು ಇಬ್ಬರು ಯುವಕರ ಸಾವು

Date:

ಬೀದರ್‌ ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ಬಿರುಗಾಳಿ, ಗುಡುಗು ಸಹಿತ ಮಳೆಯಾಗಿದ್ದು, ಜಮೀನಿಗೆ ತೆರಳಿದ ವೇಳೆ ಸಿಡಿಲು ಬಡಿದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲುಕಿನ ನಾವದಗಿ ಗ್ರಾಮದಲ್ಲಿ ಗುರುವಾರ ನಡೆದಿದೆ.

- Advertisement -

ಭಾಲ್ಕಿ ತಾಲೂಕಿನ ನಾವದಗಿ ಗ್ರಾಮದ ರೇವಣಸಿದ್ದ ಹಣಮಂತ ಕೋಳಿ (28) ಹಾಗೂ ಜೇವರ್ಗಿ ತಾಲೂಕು ಮೂಲದ ಯಲ್ಲಾಲಿಂಗ (28) ಮೃತ ಯುವಕರು ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ರೇವಣಸಿದ್ದ ಹಾಗೂ ಯಲ್ಲಾಲಿಂಗ ಇಬ್ಬರು ಸಹಪಾಠಿ ಸ್ನೇಹಿತರು, ಕಲಬುರಗಿಯಲ್ಲಿ ಒಂದೇ ಕಡೆ ಓದುತ್ತಿದ್ದರು. ಯಲ್ಲಾಲಿಂಗ ಅವರ ಸ್ನೇಹಿತ ರೇವಣಸಿದ್ದ ಅವರು (ಏ.23) ಗುರುವಾರ ನಾವದಗಿಯ ಜಮೀನಿಗೆ ತೆರಳಿದ್ದರು. ಸಂಜೆ ಗುಡುಗು ಸಹಿತ ಮಳೆ ಬರುತ್ತಿರುವುದನ್ನು ಕಂಡು ಮಾವಿನ ಮರದಡಿ ಆಶ್ರಯ ಪಡೆದಿದ್ದರು. ಈ ವೇಳೆ ಸಿಡಿಲು ಅಪ್ಪಳಿಸಿದ್ದು, ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisements
WhatsApp Image 2026 04 24 at 8.19.31 AM
ರೇವಣಸಿದ್ದ ಹಣಮಂತ ಕೋಳಿ

ಈ ಸಂಬಂಧ ಖಟಕ ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : SSLC Result 2026 | ಫಲಿತಾಂಶ-ಸ್ಥಾನದಲ್ಲಿ ಸುಧಾರಣೆ : 28ನೇ ಸ್ಥಾನಕ್ಕೇರಿದ ಬೀದರ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...