ಬೀದರ್‌ | ಬೈಕ್‌ಗೆ ಟಿಪ್ಪರ್‌ ಡಿಕ್ಕಿ : ಸ್ಥಳದಲ್ಲೇ ದಂಪತಿ ಸಾವು

Date:

ಟಿಪ್ಪರ್‌ ಲಾರಿ ಡಿಕ್ಕಿಯಾದ ಪರಿಣಾಮ ಬೈಕ್‌ ಮೇಲೆ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬಸವಕಲ್ಯಾಣ ನಗರದ ಬಸ್‌ ನಿಲ್ದಾಣ ಸಮೀಪ ಬುಧವಾರ ಮಧ್ಯಾಹ್ನ ನಡೆದಿದೆ.

- Advertisement -

ಬಸ್‌ ನಿಲ್ದಾಣ ಸಮೀಪದ ಮುಚಳಂಬ ಕ್ರಾಸ್ ಬಳಿ ನಡೆದ ದುರ್ಘಟನೆಯಲ್ಲಿ ಬಸವಕಲ್ಯಾಣ ನಗರದ ಖಡಿ ಝಂಡಾ ಕಾಲೋನಿಯ ನಿವಾಸಿಗಳಾದ ಸೈಯದ್ ದಸ್ತಗೀರ್ (35) ಹಾಗೂ ಅವರ ಪತ್ನಿ ಯಾಸ್ಮೀನ್ ದಸ್ತಗೀರ್ (33) ಮೃತಪಟ್ಟ ದಂಪತಿ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಸದ್ಯ ತ್ರಿಪುರಾಂತ ಸಮೀಪದ ಕಾಲೋನಿಯೊಂದರಲ್ಲಿ ವಾಸಿಸುತ್ತಿದ್ದ ಅವರು ಬೈಕ್ ಮೇಲೆ ಬಸ್ ನಿಲ್ದಾಣ ಕಡೆಯಿಂದ ಖಡಿ ಝಂಡಾ ಕಾಲೋನಿ ಕಡೆಗೆ ತೆರಳುತ್ತಿರುವ ವೇಳೆ ವೇಗವಾಗಿ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ರಸ್ತೆ ಮೇಲೆ ಬಿದ್ದು ಕೊನೆಯುಸಿರೆಳೆದಿದ್ದಾರೆ.

ಬಸವಕಲ್ಯಾಣ ಸಿಪಿಐ ಅಲಿಸಾಬ್, ಸಂಚಾರಿ ಠಾಣೆ ಪಿಎಸ್ಐ ಸಿದ್ದೇಶ್ವರ ಹಾಗೂ ನಗರ ಠಾಣೆ ಪಿಎಸ್ಐ ಚಂದ್ರಶೇಖರ್ ನಾರಾಯಣಪುರ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸವಕಲ್ಯಾಣ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಇದನ್ನೂ ಓದಿ : ಬೀದರ್‌ | ಒಳ ಮೀಸಲಾತಿಯಲ್ಲಿ ಅನ್ಯಾಯ ಖಂಡಿಸಿ ಬಲಗೈ ಸಮುದಾಯಗಳ ಬೃಹತ್‌ ಪ್ರತಿಭಟನೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಸಾಲದು; ಅವರು ಸುರಕ್ಷಿತ, ಗೌರವಯುತ ಹಾಗೂ ಸ್ವಚ್ಛ...

ಮಹಿಳೆಯರಿಲ್ಲದ ಸಂಪುಟ; ಮಾತು ತಪ್ಪಿತೇ ಕಾಂಗ್ರೆಸ್?

ರಾಜ್ಯದ ಮಹಿಳೆಯರು ಜನಸಂಖ್ಯೆಯಲ್ಲಿ ಸರಿಸುಮಾರು ಅರ್ಧದಷ್ಟಿದ್ದರೂ, ಅಧಿಕಾರದ ವಿಚಾರ ಬಂದಾಗ ಅವರು...

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...