ಬೀದರ್‌ | ಪಿಒಪಿ ಗಣೇಶ ಮಾರಾಟ ಸಂಪೂರ್ಣ ನಿಷೇಧ : ಡಿಸಿ ಶಿಲ್ಪಾ ಶರ್ಮಾ

Date:

ಪ್ಲಾಸ್ಟರ್ ಆಫ್ ಪ್ಯಾರಿಸ್‌ (ಪಿಒಪಿ) ಹಾಗೂ ವಿಷಕಾರಿ ರಾಸಾಯನಿಕ ಬಣ್ಣಗಳಿಂದ ಲೇಪಿತ ಗಣೇಶ ಮೂರ್ತಿಗಳ ತಯಾರಿಕೆ ಮತ್ತು ಮಾರಾಟವನ್ನು ಸರ್ಕಾರ ನಿಷೇಧಿಸಿದೆ. ಸಾರ್ವಜನಿಕರು ಮಣ್ಣಿನಿಂದ ತಯಾರಿಸಿದ ಪರಿಸರಸ್ನೇಹಿ ಗಣೇಶ ಮೂರ್ತಿಗಳನ್ನೇ ಪ್ರತಿಷ್ಠಾಪಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.

- Advertisement -

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪರಿಸರಸ್ನೇಹಿ ಗಣೇಶ ಹಬ್ಬದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, “ಗಣೇಶ ಮೂರ್ತಿ ತಯಾರಕರು ಮಣ್ಣಿನ ಜೊತೆಗೆ ಹತ್ತಿಯನ್ನು ಬಳಸಬೇಕು ಹಾಗೂ ಸರ್ಕಾರದ ನಿಷೇಧ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

​ಮೋದಿ-ಶಾ ಅಸಲಿ ಮುಖ ಅನಾವರಣ: ಅಂಕಿತಾ ಭಂಡಾರಿ ಕೊಲೆ...

ವೇದಿಕೆಗಳಲ್ಲಿ ‘ಬೇಟಿ ಬಚಾವೋ’ ಎಂದು ಭಾಷಣ ಬಿಗಿಯುವ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು, ಹಾಡಹಗಲೇ ಕೊಲೆಯಾದ ಬಡ ಯುವತಿಯ ಸಾವಿನ ಸುತ್ತ ಕಳಂಕದ ಹುತ್ತ ಹೊತ್ತಿರುವ...

ನಿದ್ರೆಯಲ್ಲೂ ಮಿದುಳಿಗೆ ಮಸಾಜ್‌! ಮಾತ್ರೆಯಿಲ್ಲದೆ ಗಾಢ ನಿದ್ರೆ ತರಬಲ್ಲದೇ...

ಒತ್ತಡದ ಬದುಕಿನಲ್ಲಿ ನೆಮ್ಮದಿಯ ನಿದ್ರೆ ಎನ್ನುವುದೇ ಹಲವರ ಕನಸು. ನಿದ್ರೆಗಾಗಿ ಮಾತ್ರೆಗಳ ಮೊರೆ ಹೋಗುವವರ ಸಂಖ್ಯೆಯೂ ಕಡಿಮೆಯಿಲ್ಲ. ಇಂತಹವರ ಸಮಸ್ಯೆಗೆ ಪರ್ಯಾಯವೊಂದು ಸಿಕ್ಕರೆ ಹೇಗಿರಬಹುದು? ಮೆದುಳಿಗೆ ಅಲ್ಟ್ರಾಸೌಂಡ್‌ ತರಂಗಗಳ ಮೂಲಕ ಪ್ರಚೋದನೆ ನೀಡಿ...

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು ವರದಿ ಮಾಡುವ ಜವಾಬ್ದಾರಿ- ಇವೆರಡನ್ನೂ ನಿಭಾಯಿಸಬೇಕಾದಾಗ ಮಾಡಿಕೊಳ್ಳುವ ಲೆಕ್ಕಾಚಾರಗಳ ಬಗೆಗಿನ ಒಂದು ಸ್ವಾನುಭವ. ಕಳೆದ ಕೆಲವು ವಾರಗಳಿಂದ ಭಾರತದಲ್ಲಿ ಹೆಣ್ಣುಮಕ್ಕಳ ಮೇಲೆ...

ಮುಂಬರುವ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸುವ್ಯವಸ್ಥೆಯಿಂದ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನಾ ಮೆರವಣಿಗೆಗಳು ನಡೆಯುವಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಹೆಚ್ಚಿನ ಶಬ್ದ ಉಂಟುಮಾಡುವ ಡಿಜೆ ಸೌಂಡ್ ಸಿಸ್ಟಮ್‌ಗಳ ಬಳಕೆಯನ್ನು ನಿಷೇಧಿಸಲಾಗಿದ್ದು, ನಿಗದಿತ ಶಬ್ದಮಿತಿಯೊಳಗಿನ ಧ್ವನಿವರ್ಧಕಗಳನ್ನು ಮಾತ್ರ ಬಳಸಬೇಕು. ನಿಯಮ ಉಲ್ಲಂಘಿಸುವ ಡಿಜೆ ಸೌಂಡ್ ಸಿಸ್ಟಮ್‌ಗಳನ್ನು ತಕ್ಷಣ ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ವಿಸರ್ಜನಾ ಮೆರವಣಿಗೆಗಳನ್ನು ಸಂಜೆ 5 ಗಂಟೆಯೊಳಗೆ ಆರಂಭಿಸಿ ಶಾಂತಿಯುತವಾಗಿ ಪೂರ್ಣಗೊಳಿಸಬೇಕು ಎಂದು ಹೇಳಿದರು.

ನಗರದ ಪ್ರಮುಖ ರಸ್ತೆಗಳು ಹಾಗೂ ಗಣೇಶ ವಿಸರ್ಜನಾ ಮೆರವಣಿಗೆ ಸಾಗುವ ಮಾರ್ಗಗಳಲ್ಲಿರುವ ಕೆಟ್ಟುಹೋಗಿರುವ ಬೀದಿ ದೀಪಗಳನ್ನು ದುರಸ್ತಿಗೊಳಿಸಬೇಕು. ಕೆಸರು ಉಂಟಾಗುವ ಸ್ಥಳಗಳಲ್ಲಿ ಮರಳು ಹಾಕಬೇಕು. ಚೌಬಾರಾ ವೃತ್ತದಲ್ಲಿ ಗಣೇಶೋತ್ಸವದ ಐದು ದಿನಗಳ ಕಾಲ ವಿಶೇಷ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಕಲ್ಪಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗಣೇಶ ಮಹಾಮಂಡಳದ ಪ್ರಧಾನ ಕಾರ್ಯದರ್ಶಿ ಬಾಬು ವಾಲಿ ಮಾತನಾಡಿ, “ಪಿಒಪಿ ಗಣೇಶ ಮೂರ್ತಿಗಳ ನಿಷೇಧ ಹಾಗೂ ಮಣ್ಣಿನ ಗಣೇಶ ಮೂರ್ತಿಗಳ ಬಳಕೆಯ ಕುರಿತು ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಅಗತ್ಯವಿದೆ” ಎಂದು ಸಭೆಯ ಗಮನಕ್ಕೆ ತಂದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ʼಪರಿಸರ ಸ್ನೇಹಿ ಗಣಪತಿ ಹಬ್ಬವನ್ನು ಆಚರಿಸೋಣ ಬನ್ನಿ – ಗಣೇಶನ ಹಬ್ಬವು ಪರಿಸರಕ್ಕೆ ಮಾರಕವಾಗದಿರಲಿʼ ಎಂಬ ಘೋಷವಾಕ್ಯದ ಭಿತ್ತಿಪತ್ರ ಬಿಡುಗಡೆ ಮಾಡಿದರು.

ಇದನ್ನೂ ಓದಿ : ಬೀದರ್‌ | ಅಣ್ಣಾಭಾವು ಸಾಠೆ ಬದುಕು ಸಮಾಜಕ್ಕೆ ಆದರ್ಶ

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಸಹಾಯಕ ಆಯುಕ್ತ ಮಹ್ಮದ್ ಶಕೀಲ್, ನಗರಸಭೆ ಸದಸ್ಯ ಶಶಿಧರ್ ಹೊಸಳ್ಳಿ ಹಾಗೂ ಪ್ರಮುಖರಾದ ನಂದಕಿಶೋರ್ ವರ್ಮಾ, ಸೋಮಶೇಖರ ಪಾಟೀಲ್ ಗಾದಗಿ, ಬಸವರಾಜ ಪವಾರ, ಮಹೇಶ ಪಾಲಮ್, ಸೂರ್ಯಕಾಂತ ಶೆಟಕರ್, ನರೇಶ ಗೌಳಿ, ವಿರೇಶ ಸ್ವಾಮಿ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಗಣೇಶ ಮಂಡಳಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ

ಡಾ. ಎಂ.ಎಸ್.ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗದಿಪಡಿಸಬೇಕು...

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಸಿಜೆಪಿ ಪ್ರತಿಭಟನೆ: ಗುಂಪು ಸೇರದಂತೆ ದೆಹಲಿ ಪೊಲೀಸರ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ 'ಕಾಕ್‌ರೋಚ್ ಜನತಾ...

SIR ಪೂರ್ಣಗೊಂಡ ರಾಜ್ಯಗಳಲ್ಲಿ SSR ಪ್ರಕ್ರಿಯೆ: ಕೇಂದ್ರ ಚುನಾವಣಾ ಆಯೋಗ

'ವಿಶೇಷ ಸಮಗ್ರ ಪರಿಷ್ಕರಣೆ' (SIR- Special Intensive Revision) ಪ್ರಕ್ರಿಯೆ ಪೂರ್ಣಗೊಂಡಿರುವ...

ಕಲಬುರಗಿ | ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಪ್ರಕರಣ ದಾಖಲು

ಕಲಬುರಗಿ ಹೊರವಲಯದ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ...